‘ಕಲ್ಕಿ 2898 ಎಡಿ’ ಪ್ರಮೋಷನ್​​ಗೆ ಖರ್ಚು ಮಾಡ್ತಿರೋ ಹಣದಲ್ಲಿ ಬಿಗ್ ಬಜೆಟ್ ಸಿನಿಮಾ ಮಾಡಬಹುದು

ರಾಜಮೌಳಿ ಅವರು ಸಿನಿಮಾ ನಿರ್ದೇಶನ ಮಾಡಿದರೆ ಅದು ಅದ್ದೂರಿಯಾಗಿ ಮೂಡಿ ಬರುತ್ತದೆ. ಇದರ ಜೊತೆಗೆ ಅವರು ಪ್ರಚಾರದ ಬಗ್ಗೆಯೂ ಹೆಚ್ಚಿನ ಗಮನ ಹರಿಸುತ್ತಾರೆ. ಇದೇ ತಂತ್ರವನ್ನು ‘ಕಲ್ಕಿ 2898 ಎಡಿ’ ಚಿತ್ರತಂಡ ಕೂಡ ಮಾಡುತ್ತಿದೆ. ಹಣವನ್ನು ನೀರಿನಂತೆ ಖರ್ಚು ಮಾಡಲಾಗುತ್ತಿದೆ.

‘ಕಲ್ಕಿ 2898 ಎಡಿ’ ಪ್ರಮೋಷನ್​​ಗೆ ಖರ್ಚು ಮಾಡ್ತಿರೋ ಹಣದಲ್ಲಿ ಬಿಗ್ ಬಜೆಟ್ ಸಿನಿಮಾ ಮಾಡಬಹುದು
ಕಲ್ಕಿ ತಂಡ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: May 21, 2024 | 12:53 PM

ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾದ (Kalki 2898 AD Movie) ಹೈಪ್ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಪ್ರಭಾಸ್ ಜೊತೆ ಹಲವು ಸೂಪರ್​ಸ್ಟಾರ್​ಗಳು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಜೆಟ್ 600 ಕೋಟಿ ರೂಪಾಯಿ ಸಮೀಪಿಸಿದೆ ಎಂದು ತಂಡ ಹೇಳಿಕೊಂಡಿದೆ. ಅದೇ ರೀತಿ ಸಿನಿಮಾದ ಪ್ರಚಾರಕ್ಕೂ ತಂಡ ದೊಡ್ಡ ಮೊತ್ತವನ್ನೇ ಖರ್ಚು ಮಾಡುತ್ತಿದೆ. ಅಚ್ಚರಿ ಎಂದರೆ ಈ ಹಣದಲ್ಲಿ ಒಂದು ಬಿಗ್ ಬಜೆಟ್ ಸಿನಿಮಾನೇ ಮಾಡಬಹುದು.

‘ಕಲ್ಕಿ 2898 ಎಡಿ’ ಸಿನಿಮಾದ ಬಜೆಟ್ 600 ಕೋಟಿ ರೂಪಾಯಿ. ಈ ಸಿನಿಮಾದ ನಿರ್ಮಾಪಕರು ಲಾಭ ಕಾಣಬೇಕು ಎಂದರೆ ಈ ಚಿತ್ರದ ಗಳಿಕೆ 1000 ಕೋಟಿ ರೂಪಾಯಿ ದಾಟಲೇಬೇಕು. ಅಂದಾಗ ಮಾತ್ರ ನಿರ್ಮಾಪಕರ ಮೊಗದಲ್ಲಿ ನಗು ಮೂಡಲು ಸಾಧ್ಯ. ಸಿನಿಮಾ ಹೆಚ್ಚಿನ ಜನರಿಗೆ ತಲುಪಬೇಕು ಎನ್ನುವ ಕಾರಣಕ್ಕೆ ನಿರ್ಮಾಪಕರು ಮತ್ತಷ್ಟು ಹಣ ಸುರಿಯಲು ಮುಂದಾಗಿದ್ದಾರೆ. ಪ್ರಮೋಷನ್​ಗೂ ದೊಡ್ಡ ಬಜೆಟ್​ನ ಮುಡಿಪಿಡಲಾಗುತ್ತಿದೆ.

ರಾಜಮೌಳಿ ಅವರು ಸಿನಿಮಾ ನಿರ್ದೇಶನ ಮಾಡಿದರೆ ಅದು ಅದ್ದೂರಿಯಾಗಿ ಮೂಡಿ ಬರುತ್ತದೆ. ಇದರ ಜೊತೆಗೆ ಅವರು ಪ್ರಚಾರದ ಬಗ್ಗೆಯೂ ಹೆಚ್ಚಿನ ಗಮನ ಹರಿಸುತ್ತಾರೆ. ಇದೇ ತಂತ್ರವನ್ನು ‘ಕಲ್ಕಿ 2898 ಎಡಿ’ ಚಿತ್ರತಂಡ ಕೂಡ ಮಾಡುತ್ತಿದೆ. ಹಣವನ್ನು ನೀರಿನಂತೆ ಖರ್ಚು ಮಾಡಲಾಗುತ್ತಿದೆ.

ಇತ್ತೀಚೆಗೆ ಐಪಿಎಲ್​ನಲ್ಲಿ ಪ್ರಭಾಸ್ ಅವರು ಕಲ್ಕಿ ಅವತಾರದಲ್ಲಿ ಬಂದು ಸಿನಿಮಾದ ಪ್ರಚಾರ ಮಾಡಿದ್ದರು. 12 ಸೆಕೆಂಡ್​ನ ಜಾಹೀರಾತು ಇದಾಗಿದ್ದು, ಇದಕ್ಕಾಗಿ 3 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ರಾಮೋಜಿ ಫಿಲ್ಮ್​ ಸಿಟಿಯಲ್ಲಿ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ನಡೆಯಲಿದೆ. ಇದರ ಜೊತೆಗೆ ದೇಶದ ಪ್ರಮುಖ ನಗರಗಳಲ್ಲಿ ಸಿನಿಮಾದ ಪ್ರಚಾರ ನಡೆಯಲಿದೆ. ಈ ವೇಳೆ ಆಗಮಿಸುವ ಸೆಲೆಬ್ರಿಟಿಗಳಿಗೆ ಉಳಿದುಕೊಳ್ಳೋಕೆ ವ್ಯವಸ್ಥೆಯನ್ನು ನಿರ್ಮಾಪಕರೇ ಮಾಡಲಿದ್ದಾರೆ.

ಕೆಲವು ವರದಿಗಳ ಪ್ರಕಾರ ‘ಕಲ್ಕಿ 2898 ಎಡಿ’ ಚಿತ್ರದ ಬಜೆಟ್ 40-60 ಕೋಟಿ ರೂಪಾಯಿ ಎನ್ನಲಾಗಿದೆ. ಇಷ್ಟು ಹಣದಲ್ಲಿ ಒಂದು ದೊಡ್ಡ ಬಜೆಟ್​ನ ಸಿನಿಮಾನೇ ನಿರ್ಮಿಸಬಹುದು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಸದ್ಯ ಸಿನಿಮಾದ ಈ ವಿಚಾರ ಸಾಕಷ್ಟು ಹಲ್​ಚಲ್ ಎಬ್ಬಿಸಿದೆ.

ಇದನ್ನೂ ಓದಿ: ಹಾಕಿದ ಹಣ ತೆಗೆಯಲು ಹಳೆಯ ತಂತ್ರದ ಮೊರೆ ಹೋದ ‘ಕಲ್ಕಿ 2898 ಎಡಿ’ ಸಿನಿಮಾ ತಂಡ

‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ಅಮಿತಾಭ್ ಬಚ್ಚನ್, ದಿಶಾ ಪಟಾಣಿ ಮೊದಲಾದವರು ನಟಿಸಿದ್ದಾರೆ. ಸೈನ್ಸ್ ಫಿಕ್ಷನ್ ಶೈಲಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಈ ಸಿನಿಮಾದ ಕಥೆ ಮಹಾಭಾರತದಿಂದ ಆರಂಭ ಆಗಲಿದ್ದು, 6000 ಸಾವಿರ ವರ್ಷಗಳ ಕಥೆ ಇರಲಿದೆ. ‘ಕಲ್ಕಿ 2898 ಎಡಿ’ ಸಿನಿಮಾ ಜೂನ್ 27ರಂದು ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ