AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರತಂಡದಿಂದಲೇ ಲೀಕ್​ ಆಯ್ತು ‘ಕಲ್ಕಿ 2898 ಎಡಿ’ ಚಿತ್ರದ ವಿಡಿಯೋ; ಕಾರಣ ಏನು?

‘ಕಲ್ಕಿ 2898 ಎಡಿ’ ಸಿನಿಮಾ ತಂಡದ ಎಡಿಟಿಂಗ್​ ರೂಮ್​ನಿಂದ ಒಂದು ವಿಡಿಯೋ ಕ್ಲಿಪ್​ ಸೋರಿಕೆ ಆಗಿದೆ. ಅದರಲ್ಲಿ ಪ್ರಭಾಸ್​ ಅವರು ಗ್ಯಾಸ್​ ಕಟರ್​ ಹಿಡಿದುಕೊಂಡು ಪೋಸ್​ ನೀಡಿದ್ದಾರೆ. ಅದು ಚಿರಂಜೀವಿ ನಟನೆಯ ‘ಗ್ಯಾಂಗ್​ ಲೀಡರ್​’ ಸಿನಿಮಾದಿಂದ ಸ್ಫೂರ್ತಿ ಪಡೆದ ದೃಶ್ಯ ಎಂದು ‘ಕಲ್ಕಿ 2898 ಎಡಿ’ ತಂಡ ಹೇಳಿಕೊಂಡಿದೆ.

ಚಿತ್ರತಂಡದಿಂದಲೇ ಲೀಕ್​ ಆಯ್ತು ‘ಕಲ್ಕಿ 2898 ಎಡಿ’ ಚಿತ್ರದ ವಿಡಿಯೋ; ಕಾರಣ ಏನು?
ಪ್ರಭಾಸ್​
ಮದನ್​ ಕುಮಾರ್​
|

Updated on: Aug 23, 2023 | 11:03 AM

Share

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ (Prabhas) ಅವರು ‘ಕಲ್ಕಿ 2898 ಎಡಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈಗಾಗಲೇ ಈ ಸಿನಿಮಾದ ಫಸ್ಟ್​ ಗ್ಲಿಂಪ್ಸ್​ ಬಿಡುಗಡೆಯಾಗಿ ಗಮನ ಸೆಳೆದಿದೆ. ಪ್ರಭಾಸ್​ ಅವರ ಗೆಟಪ್​ ಕೂಡ ಅಭಿಮಾನಿಗಳಿಗೆ ಇಷ್ಟ ಆಗಿದೆ. ಇದು ಸೈನ್ಸ್​ ಫಿಕ್ಷನ್​ ಸಿನಿಮಾ ಆದ್ದರಿಂದ ಬಹಳ ಕಾಳಜಿ ವಹಿಸಿ ಶೂಟಿಂಗ್​ ಮತ್ತು ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳನ್ನು ಮಾಡಲಾಗುತ್ತಿದೆ. ಈ ಹಂತದಲ್ಲಿ ಯಾವುದೇ ದೃಶ್ಯಗಳು ಲೀಕ್​ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ಹಾಗಿದ್ದರೂ ಕೂಡ ಒಂದು ಸಣ್ಣ ತುಣುಕು ಲೀಕ್​ ಆಗಿದೆ. ಹಾಗಂತ ಯಾರೋ ಕಿಡಿಗೇಡಿಗಳು ಈ ವಿಡಿಯೋವನ್ನು ಲೀಕ್​ ಮಾಡಿಲ್ಲ. ಬದಲಿಗೆ ಸ್ವತಃ ‘ಕಲ್ಕಿ 2898 ಎಡಿ’ (Kalki 2898 AD) ಚಿತ್ರತಂಡದವರೇ ಇದನ್ನು ಹರಿಬಿಟ್ಟಿದ್ದಾರೆ. ಅದಕ್ಕೆ ಒಂದು ವಿಶೇಷ ಕಾರಣ ಕೂಡ ಇದೆ. ಟಾಲಿವುಡ್​ ನಟ ‘ಮೆಗಾ ಸ್ಟಾರ್​’ ಚಿರಂಜೀವಿ (Megastar Chiranjeevi) ಅವರಿಗೆ ಬರ್ತ್​ಡೇ ವಿಶ್​ ಮಾಡುವ ಸಲುವಾಗಿ ಈ ವಿಡಿಯೋವನ್ನು ಲೀಕ್​ ಮಾಡಲಾಗಿದೆ.

ಆಗಸ್ಟ್​ 22ರಂದು ಚಿರಂಜೀವಿ ಅವರ ಹುಟ್ಟುಹಬ್ಬ. ಅವರಿಗೆ ಶುಭ ಕೋರಲು ‘ಕಲ್ಕಿ 2898 ಎಡಿ’ ಸಿನಿಮಾ ತಂಡದವರು ನೇರವಾಗಿ ಎಡಿಟಿಂಗ್​ ರೂಮ್​ನಿಂದ ಒಂದು ವಿಡಿಯೋ ಕ್ಲಿಪ್​ ಹರಿಬಿಟ್ಟಿದ್ದಾರೆ. ಅದರಲ್ಲಿ ಪ್ರಭಾಸ್​ ಅವರು ಗ್ಯಾಸ್​ ಕಟರ್​ ಹಿಡಿದುಕೊಂಡು ಪೋಸ್​ ನೀಡಿದ್ದಾರೆ. ಅದು ಚಿರಂಜೀವಿ ನಟನೆಯ ‘ಗ್ಯಾಂಗ್​ ಲೀಡರ್​’ ಸಿನಿಮಾದಿಂದ ಸ್ಫೂರ್ತಿ ಪಡೆದ ದೃಶ್ಯ ಎಂದು ‘ಕಲ್ಕಿ 2898 ಎಡಿ’ ತಂಡ ಹೇಳಿಕೊಂಡಿದೆ. ಇದನ್ನು ನೋಡಿ ಚಿರು ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಪ್ರಭಾಸ್​ ಮತ್ತು ಚಿರಂಜೀವಿ ಫ್ಯಾನ್ಸ್ ಇದನ್ನು ವೈರಲ್​ ಮಾಡುತ್ತಿದ್ದಾರೆ.

ವೈಜಯಂತಿ ಮೂವೀಸ್​ ಟ್ವೀಟ್​:

‘ಮಹಾನಟಿ’ ಖ್ಯಾತಿಯ ನಾಗ್​ ಅಶ್ವಿನ್​ ಅವರು ‘ಕಲ್ಕಿ 2898 ಎಡಿ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ವೈಜಯಂತಿ ಮೂವೀಸ್​’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಿನಿಮಾದಲ್ಲಿ ಅನೇಕ ಸ್ಟಾರ್​ ಕಲಾವಿದರು ನಟಿಸುತ್ತಿದ್ದಾರೆ ಎಂಬುದು ವಿಶೇಷ. ಪ್ರಭಾಸ್​ ಜೊತೆ ದೀಪಿಕಾ ಪಡುಕೋಣೆ, ಅಮಿತಾಭ್​ ಬಚ್ಚನ್​, ಕಮಲ್​ ಹಾಸನ್​ ಮುಂತಾದ ಘಟಾನುಘಟಿ ಕಲಾವಿದರು ಅಭಿನಯಿಸುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ‘ಕಲ್ಕಿ 2898 ಎಡಿ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಸೃಷ್ಟಿಯಾಗಿದೆ.

ಇದನ್ನೂ ಓದಿ: ಪ್ರಭಾಸ್ ಎದುರು ಸ್ಪರ್ಧೆಗೆ ಇಳಿದ ಅಗ್ನಿಹೋತ್ರಿ; ‘ದಿ ವ್ಯಾಕ್ಸಿನ್ ವಾರ್’ ರಿಲೀಸ್ ಡೇಟ್ ಘೋಷಣೆ

ಪ್ರಭಾಸ್​ ಅವರು ‘ಬಾಹುಬಲಿ 2’ ಬಳಿಕ ಗೆಲುವು ಕಂಡಿಲ್ಲ. ‘ರಾಧೆ ಶ್ಯಾಮ್​’, ‘ಸಾಹೋ’, ‘ಆದಿಪುರುಷ್​’ ಸಿನಿಮಾಗಳು ಸೋತಿವೆ. ಹಾಗಾಗಿ ಅವರು ಮುಂಬರುವ ಸಿನಿಮಾಗಳ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ‘ಕಲ್ಕಿ 2898 ಎಡಿ’ ಸಿನಿಮಾದ ಜೊತೆಗೆ ‘ಸಲಾರ್​’ ಚಿತ್ರದ ಕೆಲಸಗಳಲ್ಲೂ ಪ್ರಭಾಸ್​ ತೊಡಗಿಕೊಂಡಿದ್ದಾರೆ. ಆ ಚಿತ್ರಕ್ಕೆ ಪ್ರಶಾಂತ್​ ನೀಲ್​ ನಿರ್ದೇಶನ ಮಾಡುತ್ತಿದ್ದು, ‘ಹೊಂಬಾಳೆ ಫಿಲ್ಮ್ಸ್​’ ಬಂಡವಾಳ ಹೂಡುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ