Kalki 2898 AD Twitter Review: ಹೇಗಿದೆ ‘ಕಲ್ಕಿ 2898 ಎಡಿ’ ಸಿನಿಮಾ? ಇಲ್ಲಿದೆ ಟ್ವಿಟರ್ ವಿಮರ್ಶೆ

‘ಕಲ್ಕಿ 2898 ಎಡಿ’ ಸಿನಿಮಾ ಇಂದು (ಜೂನ್ 27) ರಿಲೀಸ್ ಆಗಿದೆ. ಪ್ರಭಾಸ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಅವರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಕಲ್ಕಿ ‘ಚಿತ್ರಕ್ಕೆ ಐತಿಹಾಸಿಕದ ಟಚ್ ಕೊಟ್ಟಿದ್ದು ಸಹಕಾರಿ ಆಗಿದೆ. ಕೊನೆಯ 30 ನಿಮಿಷ ಥ್ರಿಲ್ಲಿಂಗ್ ಆಗಿದೆ’ ಎಂದು ಫ್ಯಾನ್ಸ್ ಹೇಳಿದ್ದಾರೆ.

Kalki 2898 AD Twitter Review: ಹೇಗಿದೆ ‘ಕಲ್ಕಿ 2898 ಎಡಿ’ ಸಿನಿಮಾ? ಇಲ್ಲಿದೆ ಟ್ವಿಟರ್ ವಿಮರ್ಶೆ
ಕಲ್ಕಿ 2898 ಎಡಿ ಪೋಸ್ಟರ್
Follow us
|

Updated on: Jun 27, 2024 | 7:28 AM

ಪ್ರಭಾಸ್ (Prabhas) ನಟನೆಯ, ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 ಎಡಿ’ ಸಿನಿಮಾ ಇಂದು (ಜೂನ್ 27) ರಿಲೀಸ್ ಆಗಿದೆ. ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. 600 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಚಿತ್ರವನ್ನು ಜನರು ಹೊಗಳುತ್ತಿದ್ದಾರೆ. ಒಬ್ಬೊಬ್ಬರಿಗೆ ಒಂದೊಂದು ವಿಚಾರ ಇಷ್ಟ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಟ್ವೀಟ್ ಮಾಡುವ ಕೆಲಸ ಆಗುತ್ತಿದೆ.

ಪ್ರಭಾಸ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಅವರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಸೈನ್ಸ್​ ಫಿಕ್ಷನ್ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ. ಚಿತ್ರದ ಟ್ರೇಲರ್ ರಿಲೀಸ್ ಆದಾಗಲೇ ಜನರಿಗೆ ಸಾಕಷ್ಟು ನಿರೀಕ್ಷೆ ಇತ್ತು. ಸಿನಿಮಾ ನೋಡಿದವರಿಗೆ ನಿರೀಕ್ಷೆ ಸುಳ್ಳಲಾಗಿಲ್ಲ.

ಇದನ್ನೂ ಓದಿ: ಸಾವಿರ ಕೋಟಿ ರೂಪಾಯಿ ಕಲೆಕ್ಷನ್​ ಮಾಡುತ್ತಾ ‘ಕಲ್ಕಿ 2898 ಎಡಿ’ ಸಿನಿಮಾ?

‘ಕಲ್ಕಿ ಸಿನಿಮಾ ಸೈನ್ಸ್ ಫಿಕ್ಷನ್ ಚಿತ್ರ. ಇದು ಸಾಮಾನ್ಯ ಕಥೆಗಿಂತ ಭಿನ್ನವಾಗಿದೆ. ಸಿನಿಮಾದ ದೃಶ್ಯಗಳು ಹಾಗೂ ಸಿನಿಮಾದಲ್ಲಿ ಬರೋ ಜಗತ್ತನ್ನು ಕಟ್ಟಿಕೊಟ್ಟಿರೋದು ಇದೇ ಮೊದಲು’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ಇದನ್ನು ಥಿಯೇಟರ್​ನಲ್ಲೇ ನೋಡಬೇಕು. ನಾಗ್ ಅಶ್ವಿನ್, ಪ್ರಭಾಸ್ ಬಗ್ಗೆ ಹೆಮ್ಮೆ ಆಗುತ್ತದೆ. ಅಮಿತಾಭ್ ಬಚ್ಚನ್ ಅವರು ತಾವು ಏಕೆ ಲೆಜೆಂಡ್ ಎಂಬುದನ್ನು ಸಾಬೀತು ಮಾಡುತ್ತಾರೆ’ ಎಂದಿದ್ದಾರೆ ಕೆಲವರು.

‘ಕಲ್ಕಿ ಚಿತ್ರಕ್ಕೆ ಐತಿಹಾಸಿಕದ ಟಚ್ ಕೊಟ್ಟಿದ್ದು ಸಹಕಾರಿ ಆಗಿದೆ. ಕೊನೆಯ 30 ನಿಮಿಷ ಥ್ರಿಲ್ಲಿಂಗ್ ಆಗಿದೆ. ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ ಅವರ ನಟನೆ ಅದ್ಭುತ. ಕಲರ್ ಗ್ರೇಡಿಂಗ್ ಅದ್ಭುತವಾಗಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ