ವಿಶ್ವದ ಅತಿ ದೊಡ್ಡ IMAX ಥಿಯೇಟರ್​ನಲ್ಲಿ ಪ್ರದರ್ಶನ ಕಾಣಲಿದೆ ‘ಕಲ್ಕಿ’; ಪರದೆಯ ಉದ್ದ ಎಷ್ಟು?

‘ಕಲ್ಕಿ 2898 ಎಡಿ’ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿದೆ. ಈ ಚಿತ್ರ ವಿಶ್ವದ ನಾನಾ ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಈಗ ಹೊಸ ಮಾಹಿತಿ ಒಂದು ರಿವೀಲ್ ಆಗಿದೆ. ಈ ಸಿನಿಮಾ ವಿಶ್ವದ ಅತಿದೊಡ್ಡ ಐಮ್ಯಾಕ್ಸ್ ಥಿಯೇಟರ್​ನಲ್ಲಿ ಪ್ರದರ್ಶನ ಕಾಣಲಿದೆ ಅನ್ನೋದು ವಿಶೇಷ.

ವಿಶ್ವದ ಅತಿ ದೊಡ್ಡ IMAX ಥಿಯೇಟರ್​ನಲ್ಲಿ ಪ್ರದರ್ಶನ ಕಾಣಲಿದೆ ‘ಕಲ್ಕಿ’; ಪರದೆಯ ಉದ್ದ ಎಷ್ಟು?
ಕಲ್ಕಿ 2898 ಎಡಿ

Updated on: Jul 10, 2024 | 6:54 AM

ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 900 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಸಿನಿಮಾದಿಂದ ನಿರ್ಮಾಪಕ ಅಶ್ವಿನಿ ದತ್ ಅವರು ದೊಡ್ಡ ಮಟ್ಟದ ಲಾಭ ಕಂಡಿದ್ದಾರೆ. ಪ್ರಭಾಸ್ ವೃತ್ತಿ ಜೀವನಕ್ಕೆ ಮೈಲೇಜ್ ಸಿಕ್ಕಿದೆ. ಈ ಸಿನಿಮಾ ವಿಶ್ವಾದ್ಯಂತ ಪ್ರದರ್ಶನ ಕಾಣುತ್ತಿದೆ. ಅದೇ ರೀತಿ ಈ ಚಿತ್ರ ವಿಶ್ವದ ಅತಿ ದೊಡ್ಡ ಐಮ್ಯಾಕ್ಸ್ ಥಿಯೇಟರ್​ನಲ್ಲಿ ಪ್ರದರ್ಶನ ಕಾಣಲಿದೆ ಅನ್ನೋದು ವಿಶೇಷ. ಆ ಬಗ್ಗೆ ಇಲ್ಲಿದೆ ವಿವರ.

‘ಕಲ್ಕಿ 2898 ಎಡಿ’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡುತ್ತಿದೆ. ಈ ಸಿನಿಮಾ ಸೈನ್ಸ್ ಫಿಕ್ಷನ್ ರೀತಿಯಲ್ಲಿ ಮೂಡಿ ಬಂದಿದೆ. ನಿರ್ದೇಶಕ ನಾಗ್ ಅಶ್ವಿನ್ ಅವರ ಆಲೋಚನೆ ಜನರಿಗೆ ಇಷ್ಟ ಆಗಿದೆ. ಈ ಸಿನಿಮಾ ವಿಶ್ವಾದ್ಯಂತ ಪ್ರದರ್ಶನ ಕಾಣುತ್ತಿದೆ. ಅದೇ ರೀತಿ ಜುಲೈ 13ರಂದು ಕ್ಯಾಲಿಫೋರ್ನಿಯಾದಲ್ಲಿರುವ ಟಿಸಿಎಲ್ ಚೈನಿಸ್ ಥಿಯೇಟರ್​ನಲ್ಲಿ ಈ ಚಿತ್ರ ಪ್ರದರ್ಶನ ಕಾಣಲಿದೆ. ಇದಕ್ಕೆ ವಿಶ್ವದ ಅತಿ ದೊಡ್ಡ ಐಮ್ಯಾಕ್ಸ್ ಪರದೆ ಎನ್ನುವ ಖ್ಯಾತಿ ಇದೆ.

ಅಂದಗಾಗೆ ಈ ಪರದೆ 27 ಮೀಟರ್ ಉದ್ದ ಇದೆ. ಬರೋಬ್ಬರಿ 932 ಜನರು ಈ ಥಿಯೇಟರ್​ನಲ್ಲಿ ಕೂರಬಹುದು. ಈ ಥಿಯೇಟರ್​ನ ಹೊರ ಭಾಗ ಚೀನಾ ಶೈಲಿಯಲ್ಲಿ ಇದೆ. ಈ ಥಿಯೇಟರ್ ಆರಂಭ ಆಗಿದ್ದು 1927ರಲ್ಲಿ. ಅಂದರೆ ಇನ್ನು ಕೆಲವೇ ವರ್ಷಗಳಲ್ಲಿ ಥಿಯೇಟರ್​ಗೆ 100 ವರ್ಷ ಪೂರ್ಣಗೊಳ್ಳಲಿದೆ. ನಿರ್ದೇಶಕ ನಾಗ್ ಅಶ್ವಿನ್ ಕೂಡ ಇದರಲ್ಲಿ ಭಾಗಿ ಆಗಲಿದ್ದಾರೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಕಲೆಕ್ಷನ್ 70% ಇಳಿಕೆ, 1000 ಕೋಟಿ ಮುಟ್ಟುವುದು ಅನುಮಾನ

‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ದೊಡ್ಡ ಪಾತ್ರವರ್ಗ ಇದೆ. ಪ್ರಭಾಸ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮೊದಲಾದ ಸ್ಟಾರ್ಸ್​​ಗಳು ಈ ಚಿತ್ರದಲ್ಲಿ ಇದ್ದಾರೆ. ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರ ಪಾತ್ರ ಸಾಕಷ್ಟು ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us