Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ‘ಪ್ರಾಜೆಕ್ಟ್​ ಕೆ’ ಫಸ್ಟ್​ ಲುಕ್​: ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ; ಪ್ರಭಾಸ್​ ಅಭಿಮಾನಿಗಳಿಗೆ ನಿರಾಸೆ

Project K First Look: ‘ಆದಿಪುರುಷ್​’ ರೀತಿ ‘ಪ್ರಾಜೆಕ್ಟ್​ ಕೆ’ ಸಿನಿಮಾಗೂ ಟ್ರೋಲ್​ ಕಾಟ ಎದುರಾಗುವ ಸಾಧ್ಯತೆ ಇದೆ. ಯಾಕೆಂದರೆ, ಈಗಾಗಲೇ ಜನರು ನೆಗೆಟಿವ್​ ಕಮೆಂಟ್​ ಮಾಡಲು ಶುರುಮಾಡಿದ್ದಾರೆ.

Prabhas: ‘ಪ್ರಾಜೆಕ್ಟ್​ ಕೆ’ ಫಸ್ಟ್​ ಲುಕ್​: ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ; ಪ್ರಭಾಸ್​ ಅಭಿಮಾನಿಗಳಿಗೆ ನಿರಾಸೆ
ಪ್ರಭಾಸ್​
Follow us
ಮದನ್​ ಕುಮಾರ್​
|

Updated on:Jul 19, 2023 | 4:41 PM

ಭಾರಿ ಕೌತುಕ ಸೃಷ್ಟಿ ಮಾಡಿರುವ ‘ಪ್ರಾಜೆಕ್ಟ್​ ಕೆ’ (Project K) ಸಿನಿಮಾದಿಂದ ಅಪ್​ಡೇಟ್​ ಸಿಕ್ಕಿದೆ. ಪ್ರಭಾಸ್​ ಅಭಿನಯಿಸುತ್ತಿರುವ ಈ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ (Project K First Look Poster) ಈಗ ಬಿಡುಗಡೆ ಆಗಿದೆ. ನೆಟ್ಟಿಗರಿಂದ ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವರಿಗೆ ಈ ಲುಕ್​ ಇಷ್ಟ ಆಗಿದೆ. ಆದರೆ ಇನ್ನೂ ಕೆಲವರು ‘ಚೆನ್ನಾಗಿಲ್ಲ’ ಎಂದು ನೇರವಾಗಿಯೇ ಹೇಳುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಪ್ರಭಾಸ್​ (Prabhas) ಅವರು ಈ ಪೋಸ್ಟರ್​ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಮಹಾನಟಿ’ ಖ್ಯಾತಿಯ ನಾಗ್​ ಅಶ್ವಿನ್​ ಅವರ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಹಲವು ಕಾರಣಗಳಿಂದಾಗಿ ‘ಪ್ರಾಜೆಕ್ಟ್​ ಕೆ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಪ್ರತಿಷ್ಠಿತ ‘ವೈಜಯಂತಿ ಮೂವೀಸ್​’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಪಾತ್ರವರ್ಗದಲ್ಲಿ ಅನೇಕ ಸ್ಟಾರ್​ ಕಲಾವಿದರು ಇದ್ದಾರೆ. ಪ್ರಭಾಸ್​ ಜೊತೆ ದೀಪಿಕಾ ಪಡುಕೋಣೆ, ಕಮಲ್​ ಹಾಸನ್​, ಅಮಿತಾಭ್​ ಬಚ್ಚನ್​ ಮುಂತಾದವರು ಬಣ್ಣ ಹಚ್ಚಿದ್ದಾರೆ. ಸೈನ್ಸ್​ ಫಿಕ್ಷನ್​ ಪ್ರಕಾರದಲ್ಲಿ ಮೂಡಿಬರುತ್ತಿರುವ ಈ ಸಿನಿಮಾಗೆ ಬಹುಕೋಟಿ ರೂಪಾಯಿ ಬಂಡವಾಳ ಹೂಡಲಾಗುತ್ತಿದೆ. ಆದರೂ ಕೂಡ ಫಸ್ಟ್​ ಲುಕ್​ ಪೋಸ್ಟರ್​ ಮಿಶ್ರ ಪ್ರತಿಕ್ರಿಯೆ ಪಡೆದಿದೆ.

View this post on Instagram

A post shared by Prabhas (@actorprabhas)

ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಸಿನಿಮಾ 2017ರಲ್ಲಿ ಬಿಡುಗಡೆ ಆಯಿತು. ಆ ನಂತರ ಪ್ರಭಾಸ್​ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡರು. ಆದರೆ ‘ಬಾಹುಬಲಿ 2’ ಬಳಿಕ ಪ್ರಭಾಸ್​ಗೆ ನಿರೀಕ್ಷಿತ ಮಟ್ಟದ ಯಶಸ್ಸು ಸಿಕ್ಕಿಲ್ಲ. ಈ ವರ್ಷ ತೆರೆಕಂಡ ‘ಆದಿಪುರುಷ್​’ ಸಿನಿಮಾಗೆ ಸಿಕ್ಕಾಪಟ್ಟೆ ಟ್ರೋಲ್​ ಕಾಟ ಎದುರಾಯಿತು. ಈಗ ‘ಪ್ರಾಜೆಕ್ಟ್​ ಕೆ’ ಸಿನಿಮಾಗೂ ಅದೇ ಪರಿಸ್ಥಿತಿ ಎದುರಾಗಲಿದೆಯೇ ಎಂಬ ಅನುಮಾನ ಮೂಡಿದೆ. ಯಾಕೆಂದರೆ, ಈಗಾಗಲೇ ಜನರು ನೆಗೆಟಿವ್​ ಕಮೆಂಟ್​ ಮಾಡಲು ಶುರುಮಾಡಿದ್ದಾರೆ.

ಇದನ್ನೂ ಓದಿ: Prabhas: ‘ಪ್ರಾಜೆಕ್ಟ್​ ಕೆ’ ಸಲುವಾಗಿ ಅಮೆರಿಕಕ್ಕೆ ತೆರಳಿದ ಪ್ರಭಾಸ್​, ರಾಣಾ ದಗ್ಗುಬಾಟಿ; ಈ ಫೋಟೋದಿಂದ ಹೆಚ್ಚಿತು ಕೌತುಕ

ಪ್ರಚಾರಕ್ಕೆ ‘ಪ್ರಾಜೆಕ್ಟ್​ ಕೆ’ ತಂಡದವರು ಹೆಚ್ಚು ಮಹತ್ವ ನೀಡುತ್ತಿದ್ದಾರೆ. ವಿದೇಶಗಳಲ್ಲಿ ಇತ್ತೀಚೆಗೆ ಕಾರ್​ ರ‍್ಯಾಲಿ ನಡೆಸಲಾಗಿದೆ. ‘ಪ್ರಾಜೆಕ್ಟ್ ಕೆ’ ಎಂದು ಶೀರ್ಷಿಕೆ ಪ್ರಿಂಟ್​ ಆಗಿರುವ ಬಟ್ಟೆಗಳನ್ನು ಧರಿಸಿದ ಅಭಿಮಾನಿಗಳು ಬೇರೆ ಬೇರೆ ದೇಶಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಇದು ಪ್ಯಾನ್​ ಇಂಡಿಯಾ ಸಿನಿಮಾ. ಬೇರೆ ದೇಶಗಳಲ್ಲೂ ಭರ್ಜರಿಯಾಗಿ ಧೂಳೆಬ್ಬಿಸಲು ಪ್ಲ್ಯಾನ್​ ಮಾಡಲಾಗಿದೆ. ಅಮೆರಿಕದ ಸ್ಯಾನ್​ ಡಿಯಾಗೋ ನಗರದಲ್ಲಿ ನಡೆಯಲಿರುವ ‘ಕಾಮಿಕ್​ ಕಾನ್​’ ಉತ್ಸವದಲ್ಲಿ ಈ ಸಿನಿಮಾವನ್ನು ಪ್ರಚಾರ ಮಾಡಲು ಸಿದ್ಧತೆ ನಡೆದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:31 pm, Wed, 19 July 23

ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ