Project K: ‘ಆದಿಪುರುಷ್​’ ಟ್ರೋಲ್​ ಮರೆತು ‘ಪ್ರಾಜೆಕ್ಟ್​ ಕೆ’ ಅಪ್​ಡೇಟ್​ ತಿಳಿಯಲು ಕಾದಿರುವ ಪ್ರಭಾಸ್​ ಅಭಿಮಾನಿಗಳು

Prabhas Next Movie: ‘ಆದಿಪುರುಷ್​’ ಸಿನಿಮಾ ಭಾರಿ ಟೀಕೆಗೆ ಒಳಗಾಗಿದೆ. ಹಾಗಾಗಿ ಮುಂಬರುವ ಸಿನಿಮಾಗಳ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಪ್ರಭಾಸ್​ ಅವರಿಗೆ ಇದೆ.

Project K: ‘ಆದಿಪುರುಷ್​’ ಟ್ರೋಲ್​ ಮರೆತು ‘ಪ್ರಾಜೆಕ್ಟ್​ ಕೆ’ ಅಪ್​ಡೇಟ್​ ತಿಳಿಯಲು ಕಾದಿರುವ ಪ್ರಭಾಸ್​ ಅಭಿಮಾನಿಗಳು
ಪ್ರಾಜೆಕ್ಟ್​ ಕೆ
Follow us
ಮದನ್​ ಕುಮಾರ್​
|

Updated on: Jun 22, 2023 | 7:35 PM

ತಮ್ಮ ನೆಚ್ಚಿನ ನಟರ ಸಿನಿಮಾ ಚೆನ್ನಾಗಿ ಮೂಡಿಬರಬೇಕು ಮತ್ತು ಆ ಚಿತ್ರ ಭರ್ಜರಿ ಕಲೆಕ್ಷನ್​ ಮಾಡಬೇಕು ಎಂದು ಅಭಿಮಾನಿಗಳು ಬಯಸುತ್ತಾರೆ. ಪ್ರಭಾಸ್​ ಅಭಿಮಾನಿಗಳು ಕೂಡ ‘ಆದಿಪುರುಷ್​’ (Adipurush) ಸಿನಿಮಾದ ವಿಚಾರದಲ್ಲಿ ಇಂಥದ್ದೇ ಆಸೆ ಇಟ್ಟುಕೊಂಡಿದ್ದರು. ಈ ಸಿನಿಮಾಗೆ ಭರ್ಜರಿ ಹೈಪ್​ ನೀಡಲಾಗಿತ್ತು. ಪ್ರಭಾಸ್ (Prabhas) ಅವರು ಈ ಚಿತ್ರದಲ್ಲಿ ರಾಮನ ಪಾತ್ರ ಮಾಡಿದ್ದರಿಂದ ನಿರೀಕ್ಷೆ ಜೋರಾಗಿತ್ತು. ಆದರೆ ಸಿನಿಮಾ ರಿಲೀಸ್​ ಆದಾಗ ಮೆಚ್ಚುಗೆ ಸಿಕ್ಕಿದ್ದಕ್ಕಿಂತ ಟ್ರೋಲ್​ ಆಗಿದ್ದೇ ಹೆಚ್ಚು. ಮೊದಲ ಮೂರು ದಿನ ಒಳ್ಳೆಯ ಕಲೆಕ್ಷನ್​ ಮಾಡಿದ ‘ಆದಿಪುರುಷ್​’ ಸಿನಿಮಾ ನಂತರದ ದಿನಗಳಲ್ಲಿ ನೆಲಕಚ್ಚಿತು. ಇದು ಅಭಿಮಾನಿಗಳಿಗೆ ಖಂಡಿತಾ ಬೇಸರ ಮೂಡಿಸಿದೆ. ಈಗ ಅಭಿಮಾನಿಗಳು ಪ್ರಭಾಸ್​ ಅವರ ಮುಂದಿನ ಸಿನಿಮಾಗಳ ಮೇಲೆ ಗಮನ ಹರಿಸಿದ್ದಾರೆ. ಬಹುನಿರೀಕ್ಷಿತ ‘ಪ್ರಾಜೆಕ್ಟ್​ ಕೆ’ (Project K) ಸಿನಿಮಾದ ಬಗ್ಗೆ ಅಪ್​ಡೇಟ್​ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ಈ ಸಿನಿಮಾದ ಮೋಷನ್​ ಪೋಸ್ಟರ್​ ಬಗ್ಗೆ ಒಂದು ಗುಸುಗುಸು ಕೇಳಿಬಂದಿದೆ.

ಪ್ರಭಾಸ್​ ಅವರು ‘ಸಲಾರ್​’, ‘ಪ್ರಾಜೆಕ್ಟ್​ ಕೆ’ ಮುಂತಾದ ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ‘ಬಾಹುಬಲಿ 2’ ಬಳಿಕ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ. ‘ಆದಿಪುರುಷ್​’ ಚಿತ್ರ ಭಾರಿ ಟೀಕೆಗೆ ಒಳಗಾಗಿರುವುದರಿಂದ ಮುಂಬರುವ ಸಿನಿಮಾಗಳ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಪ್ರಭಾಸ್​ ಅವರಿಗೆ ಇದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಜುಲೈ 2ನೇ ವಾರ ಅಥವಾ 3ನೇ ವಾರದಲ್ಲಿ ‘ಪ್ರಾಜೆಕ್ಟ್​ ಕೆ’ ಚಿತ್ರದ ಮೋಷನ್​ ಪೋಸ್ಟರ್​ ರಿಲೀಸ್​ ಆಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಿಲ್ಲ.

ಇದನ್ನೂ ಓದಿ: ಆದಿಪುರುಷ್ ಚೆನ್ನಾಗಿಲ್ಲ ಎಂದ ಸಿನಿಮಾ ಪ್ರೇಮಿಯ ಥಳಿಸಿದ ಪ್ರಭಾಸ್ ಅಭಿಮಾನಿಗಳು

‘ಪ್ರಾಜೆಕ್ಟ್​ ಕೆ’ ಚಿತ್ರದಲ್ಲಿ ಪ್ರಭಾಸ್​ ಅವರೊಂದಿಗೆ ದೀಪಿಕಾ ಪಡುಕೋಣೆ, ಅಮಿತಾಭ್​ ಬಚ್ಚನ್ ಸೇರಿದಂತೆ ಹಲವು ಖ್ಯಾತ ನಾಮರು ಅಭಿನಯಿಸುತ್ತಿದ್ದಾರೆ. ಇದು ಸೈನ್ಸ್​ ಫಿಕ್ಷನ್​ ಶೈಲಿಯ ಸಿನಿಮಾ ಎಂಬುದು ಮತ್ತೊಂದು ವಿಶೇಷ. ಅದಕ್ಕೆ ಅನುಗುಣವಾಗಿ ಕಾಸ್ಟ್ಯೂಮ್​ ಡಿಸೈನ್​ ಮಾಡಲಾಗಿದೆ. ಈ ಚಿತ್ರದಲ್ಲಿ ಬರುವ ರೇಡರ್ಸ್​ ಎಂಬ ಪಾತ್ರಗಳಿಗೆ ಹೇಗೆ ಕಾಸ್ಟ್ಯೂಮ್​ ಡಿಸೈನ್​ ಮಾಡಲಾಗಿದೆ ಎಂಬುದನ್ನು ತಿಳಿಸುವ ಸಲುವಾಗಿ ಈ ಹಿಂದೆ ಒಂದು ವಿಡಿಯೋ ಹಂಚಿಕೊಳ್ಳಲಾಗಿತ್ತು. ಅದನ್ನು ನೋಡಿದ ಬಳಿಕ ಅಭಿಮಾನಿಗಳಲ್ಲಿ ಕಾತರ ಹೆಚ್ಚಿತು.

ಇದನ್ನೂ ಓದಿ: Adipurush: ‘ಆದಿಪುರುಷ್​’ ಹೀರೋ ಪ್ರಭಾಸ್​ಗೆ 150 ಕೋಟಿ ರೂ. ಸಂಬಳ; ಇನ್ನುಳಿದ ಕಲಾವಿದರಿಗೆ ಸಿಕ್ಕ ಸಂಭಾವನೆ ಎಷ್ಟು?

ಇತ್ತೀಚೆಗಷ್ಟೇ ‘ಸಲಾರ್​’ ಸಿನಿಮಾದ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಯಿತು. ಈ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಯಾಕೆಂದರೆ, ಇದಕ್ಕೆ ನಿರ್ದೇಶನ ಮಾಡುತ್ತಿರುವುದು ಪ್ರಶಾಂತ್​ ನೀಲ್​. ‘ಕೆಜಿಎಫ್​ 2’ ಮೂಲಕ ದಾಖಲೆ ನಿರ್ಮಿಸಿದ ಪ್ರಶಾಂತ್​ ನೀಲ್​ ಅವರು ಪ್ರಭಾಸ್​ಗಾಗಿ ಭರ್ಜರಿಯಾದ ಕಥೆ ಇಟ್ಟುಕೊಂಡು ಸಿನಿಮಾ ಮಾಡಿದ್ದಾರೆ ಎಂಬುದು ಸಿನಿಪ್ರಿಯರ ಊಹೆ. ಈ ಸಿನಿಮಾದಲ್ಲಿ ಘಟಾನುಘಟಿ ಕಲಾವಿದರು ನಟಿಸುತ್ತಿದ್ದಾರೆ. ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ ಮೂಲಕ ಈ ಚಿತ್ರ ತಯಾರಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು