AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದುಕೊಂಡ ದಿನಾಂಕದಂದು ರಿಲೀಸ್ ಆಗಲ್ಲ ‘ಪ್ರಾಜೆಕ್ಟ್​ ಕೆ’; ಇದಕ್ಕೆಲ್ಲ ಅಮಿತಾಭ್​ ಬಚ್ಚನ್ ಕಾರಣ

ಅಮಿತಾಭ್ ಬಚ್ಚನ್ ಅವರಿಗೆ ಈಗ 80 ವರ್ಷ ವಯಸ್ಸಾಗಿದೆ. ಈ ವಯಸ್ಸಲ್ಲೂ ಅವರು ನಟನೆಯಲ್ಲಿ ತೊಡಗಿಕೊಂಡಿದ್ದಾರೆ. ಅವರ ಆರೋಗ್ಯದ ಬಗ್ಗೆ ತಂಡದವರು ಹೆಚ್ಚು ಗಮನ ಹರಿಸುತ್ತಿದ್ದಾರೆ.

ಅಂದುಕೊಂಡ ದಿನಾಂಕದಂದು ರಿಲೀಸ್ ಆಗಲ್ಲ ‘ಪ್ರಾಜೆಕ್ಟ್​ ಕೆ’; ಇದಕ್ಕೆಲ್ಲ ಅಮಿತಾಭ್​ ಬಚ್ಚನ್ ಕಾರಣ
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: May 11, 2023 | 6:30 AM

Share

ಮುಖ್ಯಾಂಶಗಳು

  • ಪ್ರಭಾಸ್ ನಟನೆಯ ‘ಪ್ರಾಜೆಕ್ಟ್​ ಕೆ’ ಸಿನಿಮಾ ರಿಲೀಸ್ ದಿನಾಂಕ ವಿಳಂಬ?
  • ಚೇತರಿಕೆ ಕಂಡಿಲ್ಲ ಅಮಿತಾಭ್ ಬಚ್ಚನ್
  • ನಟನಿಗೆ ಒತ್ತಡ ಹೇರದಿರಲು ನಿರ್ಧಾರ

ಪ್ರಭಾಸ್ ಹಾಗೂ ದೀಪಿಕಾ ಪಡುಕೋಣೆ (Deepika Padukone) ನಟನೆಯ ‘ಪ್ರಾಜೆಕ್ಟ್ ಕೆ’ ಸಿನಿಮಾ 2024ರ ಜನವರಿ 12ರಂದು ರಿಲೀಸ್ ಆಗಲಿದೆ ಎಂದು ಚಿತ್ರತಂಡದ ಹೇಳಿಕೊಂಡಿತ್ತು. ಈ ಸಂಬಂಧ ಪೋಸ್ಟರ್ ಕೂಡ ರಿಲೀಸ್ ಮಾಡಲಾಗಿತ್ತು. ಆದರೆ, ಈ ಲೆಕ್ಕಾಚಾರ ತಲೆಕೆಳಗಾಗುವ ಸೂಚನೆ ಸಿಕ್ಕಿದೆ. ಅಮಿತಾಭ್ ಬಚ್ಚನ್ (Amitabh Bachchan) ಅವರಿಗೆ ಇತ್ತೀಚೆಗೆ ಗಾಯ ಆಗಿತ್ತು. ಇದರಿಂದ ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಗುಣಮುಖರಾಗುವುದು ತಡ ಆಗುತ್ತಿರುವುದರಿಂದ ಸಿನಿಮಾ ಕೆಲಸ ವಿಳಂಬ ಆಗುತ್ತಿದೆ. ಹೀಗಾಗಿ, ಅಂದುಕೊಂಡ ದಿನಾಂಕಕ್ಕೆ ‘ಪ್ರಾಜೆಕ್ಟ್​ ಕೆ’ ಸಿನಿಮಾ ರಿಲೀಸ್ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

‘ಪ್ರಾಜೆಕ್ಟ್ ಕೆ’ ಚಿತ್ರದ ಶೂಟಿಂಗ್​ ವೇಳೆ ಅಮಿತಾಭ್​ ಬಚ್ಚನ್ ಅವರ ಪಕ್ಕೆಲುಬಿಗೆ ಗಾಯ ಆಗಿತ್ತು. ಇದರಿಂದ ಅವರು ಮನೆಯಲ್ಲೇ ಕೂರುವಂತಾಗಿದೆ. ಈಗ ಅಮಿತಾಭ್ ಅವರು ನಿಧಾನವಾಗಿ ಚೇತರಿಕೆ ಕಾಣುತ್ತಿದ್ದಾರೆ. ಅವರಿಗೆ ಯಾವುದೇ ಒತ್ತಡ ಹೇರಬಾರದು ಎನ್ನುವ ನಿರ್ಧಾರಕ್ಕೆ ಚಿತ್ರತಂಡ ಬಂದಿದೆ. ಅಮಿತಾಭ್ ಬಚ್ಚನ್ ಅವರಿಗೆ ಈಗ 80 ವರ್ಷ ವಯಸ್ಸಾಗಿದೆ. ಈ ವಯಸ್ಸಲ್ಲೂ ಅವರು ನಟನೆಯಲ್ಲಿ ತೊಡಗಿಕೊಂಡಿದ್ದಾರೆ. ಅವರ ಆರೋಗ್ಯದ ಬಗ್ಗೆ ತಂಡದವರು ಹೆಚ್ಚು ಗಮನ ಹರಿಸುತ್ತಿದ್ದಾರೆ.

ಅಮಿತಾಭ್ ಬಚ್ಚನ್ ಅವರು ಸಂಪೂರ್ಣ ಚೇತರಿಕೆ ಕಂಡರೂ ಅವರಿಗೆ ವಿಶ್ರಾಂತಿಯ ಅವಶ್ಯಕತೆ ಇರುತ್ತದೆ. ಈ ಸಂದರ್ಭದಲ್ಲಿ ಶೂಟಿಂಗ್​ಗೆ ಬರುವಂತೆ ಒತ್ತಡ ಹೇರಿದರೆ ಅವರಿಗೆ ಮತ್ತೆ ತೊಂದರೆ ಉಂಟಾಗಬಹುದು. ರಿಲೀಸ್ ದಿನಾಂಕ ಮುಂದಕ್ಕೆ ಹೋದರೂ ಚಿಂತೆ ಇಲ್ಲ ಅನ್ನೋದು ನಿರ್ಮಾಪಕರ ಆಲೋಚನೆ. ಹೀಗಾಗಿ, ಈ ವಿಚಾರದಲ್ಲಿ ನಿರ್ದೇಶಕ ನಾಗ್ ಅಶ್ವಿನ್ ತಟಸ್ಥ ನೀತಿ ಅನುಸರಿಸಿದ್ದಾರೆ.

‘ಬಾಹುಬಲಿ 2’ ಬಳಿಕ ಪ್ರಭಾಸ್​ಗೆ ಅಂದುಕೊಂಡ ಗೆಲುವು ಸಿಗಲಿಲ್ಲ. ಹೀಗಾಗಿ ಸಿನಿಮಾ ಆಯ್ಕೆಯಲ್ಲಿ ಅವರು ಹೆಚ್ಚು ಜಾಗರೂಕರಾಗಿದ್ದಾರೆ. ‘ಆದಿಪುರುಷ್’ ಸಿನಿಮಾ ಜೂನ್ 16ರಂದು ರಿಲೀಸ್ ಆಗುತ್ತಿದೆ. ಇದಾದ ಬಳಿಕ ಸೆಪ್ಟೆಂಬರ್​ನಲ್ಲಿ ‘ಸಲಾರ್’ ಬರಲಿದೆ. ಇದು ರಿಲೀಸ್ ಆದ ಬಳಿಕ ‘ಪ್ರಾಜೆಕ್ಟ್ ಕೆ’ ರಿಲೀಸ್ ಆಗಲಿದೆ.

ಇದನ್ನೂ ಓದಿ: Adipurush Trailer: ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ: ರಾಮನ ಪಾತ್ರದಲ್ಲಿ ಪ್ರಭಾಸ್​ ಕಂಡು ಖುಷಿಪಟ್ಟ ಸಿನಿಪ್ರಿಯರು

ನಾಗ್ ಅಶ್ವಿನ್ ಅವರು ‘ಪ್ರಾಜೆಕ್ಟ್​ ಕೆ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಪ್ರಭಾಸ್ ಹಾಗೂ ದೀಪಿಕಾ ಪಡುಕೋಣೆ ಅವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ‘ಪ್ರಾಜೆಕ್ಟ್​ ಕೆ’ ಸಿನಿಮಾದಲ್ಲಿ ನಟಿಸಲು ದೀಪಿಕಾ ಪಡುಕೋಣೆ 10 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ