AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೂವರೆ ವರ್ಷದ ಬಳಿಕ ಬಿಡುಗಡೆ ಆಗುತ್ತಿದೆ ಪ್ರಭಾಸ್ ನಟನೆಯ ಸಿನಿಮಾ

Prabhas: ಪ್ರಭಾಸ್ ನಟಿಸಿದ್ದ ‘ಕಲ್ಕಿ 2898 ಎಡಿ’ ಸಿನಿಮಾ ಕಳೆದ ವರ್ಷ ಜೂನ್ ತಿಂಗಳಲ್ಲಿ ಬಿಡುಗಡೆ ಆಗಿತ್ತು. ಇದೀಗ ಪ್ರಭಾಸ್ ನಟನೆಯ ಹೊಸ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ. ಒಂದೂವರೆ ವರ್ಷದ ಬಳಿಕ ಪ್ರಭಾಸ್ ನಟನೆಯ ಹೊಸ ಸಿನಿಮಾ ಬಿಡುಗಡೆ ಆಗುತ್ತಿದೆ.

ಒಂದೂವರೆ ವರ್ಷದ ಬಳಿಕ ಬಿಡುಗಡೆ ಆಗುತ್ತಿದೆ ಪ್ರಭಾಸ್ ನಟನೆಯ ಸಿನಿಮಾ
The Raja Saab
ಮಂಜುನಾಥ ಸಿ.
|

Updated on: Jun 03, 2025 | 11:23 AM

Share

ಪ್ರಭಾಸ್ (Prabhas) ನಟನೆಯ ಸಿನಿಮಾ ಬಿಡುಗಡೆ ಆಗಿ ಒಂದು ವರ್ಷವಾಗಿದೆ. ಇದು ವಿಶೇಷವೇನೂ ಅಲ್ಲ. ಪ್ರಭಾಸ್ ನಟಿಸುವುದೇ ವರ್ಷಕ್ಕೆ ಒಂದೋ-ಎರಡು ಸಿನಿಮಾಗಳಲ್ಲಿ. ಕಳೆದ ವರ್ಷ ಜೂನ್ ತಿಂಗಳಲ್ಲಿ ಅವರ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಬಿಡುಗಡೆ ಆಗಿತ್ತು. ಇದೀಗ ಪ್ರಭಾಸ್ ನಟನೆಯ ಹೊಸ ಸಿನಿಮಾದ ಬಿಡುಗಡೆ ದಿನಾಂಕ ಘೋಷಿಸಲಾಗಿದೆ. ಆದರೆ ಇದು ಪ್ರಭಾಸ್ ಅಭಿಮಾನಿಗಳಿಗೆ ತುಸು ಬೇಸರವನ್ನೇ ಉಂಟು ಮಾಡಿದೆ.

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಸಿನಿಮಾ ಡಿಸೆಂಬರ್ ಐದರಂದು ತೆರೆಗೆ ಬರಲಿದೆ. ಅಸಲಿಗೆ ‘ದಿ ರಾಜಾ ಸಾಬ್’ ಸಿನಿಮಾ ಇದೇ ತಿಂಗಳು ಬಿಡುಗಡೆ ಆಗಬೇಕಿತ್ತು. ಈ ಹಿಂದೆ ಹರಿದಾಡಿದ್ದ ಸುದ್ದಿಯಂತೆ ‘ದಿ ರಾಜಾ ಸಾಬ್’ ಸಿನಿಮಾ ಜೂನ್ ಅಥವಾ ಜುಲೈ ತಿಂಗಳಲ್ಲಿ ತೆರೆಗೆ ಬರಬೇಕಿತ್ತು. ಆದರೆ ನಾನಾ ಕಾರಣಗಳಿಂದಾಗಿ ಸಿನಿಮಾದ ಬಿಡುಗಡೆ ತಡವಾಗುತ್ತಲೇ ಬರುತ್ತಿದೆ.

ಇದೀಗ ಸಿನಿಮಾದ ಬಿಡುಗಡೆ ಘೋಷಣೆ ಆಗಿದ್ದು, ಸಿನಿಮಾ ಡಿಸೆಂಬರ್ 05ಕ್ಕೆ ಬಿಡುಗಡೆ ಆಗಲಿದೆ. ‘ಪುಷ್ಪ 2’ ಸಿನಿಮಾ ಸಹ ಕಳೆದ ವರ್ಷ ಡಿಸೆಂಬರ್ 05 ರಂದೇ ಬಿಡುಗಡೆ ಆಗಿತ್ತು. ಇದೀಗ ‘ರಾಜಾ ಸಾಬ್’ ಸಿನಿಮಾಕ್ಕೂ ಅದೇ ಬಿಡುಗಡೆ ದಿನಾಂಕವನ್ನು ಆಯ್ಕೆ ಮಾಡಲಾಗಿದೆ. ಸಿನಿಮಾದ ಚಿತ್ರೀಕರಣ ಈಗಾಗಲೇ ಮುಕ್ತಾವಾಗಿ ತಿಂಗಳಿಗೂ ಹೆಚ್ಚು ಸಮಯ ಆಗಿದೆ. ಆದರೆ ಸಿನಿಮಾದ ವಿಎಫ್​ಎಕ್ಸ್​​ಗೆ ಹೆಚ್ಚಿನ ಸಮಯ ಹಿಡಿಯುತ್ತಿದೆಯಂತೆ. ಈಗಾಗಲೇ ಮಾಡಲಾಗಿದ್ದ ವಿಎಫ್​ಎಕ್ಸ್ ಕೆಲಸವನ್ನು ಮತ್ತೆ ಉನ್ನತೀಕರಣಗೊಳಿಸಲಾಗಿದೆ. ಹಾಗಾಗಿ ಸಿನಿಮಾದ ಬಿಡುಗಡೆಗೆ ಹೆಚ್ಚು ಸಮಯ ಆಗಿದೆ.

ಇದನ್ನೂ ಓದಿ:‘ಸ್ಪಿರಿಟ್’ ಸಿನಿಮಾದಲ್ಲಿ ಪ್ರಭಾಸ್​ಗೆ ಜೋಡಿಯಾದ ‘ಅನಿಮಲ್’ ನಟಿ ತೃಪ್ತಿ ದಿಮ್ರಿ

‘ದಿ ರಾಜಾ ಸಾಬ್’ ಸಿನಿಮಾವು ರೊಮ್ಯಾಂಟಿಕ್ ಹಾರರ್ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ಪ್ರಭಾಸ್ ಆತ್ಮದ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದಲ್ಲಿ ಪ್ರಭಾಸ್ ಅವರದ್ದು ಡಬಲ್ ರೋಲ್ ಅಂತೆ. ಸಿನಿಮಾದ ಕೆಲ ಪೋಸ್ಟರ್​ಗಳು ಬಿಡುಗಡೆ ಆಗಿದ್ದು, ಒಂದರಲ್ಲಿ ಪ್ರಭಾಸ್ ವಯಸ್ಸಾದ ಜಮೀನ್ದಾರ್​ ರೀತಿ ಹಾಗೂ ಮತ್ತೊಂದರಲ್ಲಿ ಲವ್ವರ್ ಬಾಯ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

‘ದಿ ರಾಜಾ ಸಾಬ್’ ಹೊರತುಪಡಿಸಿ, ಪ್ರಭಾಸ್ ಪ್ರಸ್ತುತ ‘ಫೌಜಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದರ ಬಳಿಕ ‘ಸ್ಪಿರಿಟ್’ ಸಿನಿಮಾದಲ್ಲಿ ನಟಿಸಲಿದ್ದಾರೆ. ಅದರ ಬಳಿಕ ‘ಕಲ್ಕಿ 2’ ಆ ಬಳಿಕ ‘ಸಲಾರ್ 2’ ಅದರ ಬಳಿಕ ಹೊಂಬಾಳೆ ನಿರ್ಮಾಣದ ಇನ್ನೂ ಎರಡು ಸಿನಿಮಾಗಳಲ್ಲಿ ನಟನೆ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ