ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ನಿರ್ಮಾಪಕ
The Raja Saab producer: ಪ್ರಭಾಸ್ ಎಷ್ಟೇ ದೊಡ್ಡ ಸ್ಟಾರ್ ಆಗಿದ್ದರೂ ಸಹ ಸಿನಿಮಾ ಚೆನ್ನಾಗಿಲ್ಲದಿದ್ದರೆ ಜನ ನೋಡುವುದಿಲ್ಲ. ಅಂತೆಯೇ ಪ್ರಭಾಸ್ ಕಾರಣಕ್ಕೆ ಮೊದಲೆರಡು ಮೂರು ದಿನ ಉತ್ತಮ ಕಲೆಕ್ಷನ್ ಮಾಡಿದ ‘ದಿ ರಾಜಾ ಸಾಬ್’ ಸಿನಿಮಾ ಬಳಿಕ ಬಾಕ್ಸ್ ಆಫೀಸ್ನಲ್ಲಿ ಧಾರುಣವಾಗಿ ಕುಸಿಯಿತು. ಪ್ರಭಾಸ್ ಅಭಿಮಾನಿಗಳೇ ಸಿನಿಮಾ ಬಗ್ಗೆ ಟ್ರೋಲ್ ಮಾಡಲು ಆರಂಭಿಸಿದರು. ಇದೀಗ ಸಿನಿಮಾದ ನಿರ್ಮಾಪಕ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಪ್ರಭಾಸ್ (Prabhas), ಭಾರತದ ಟಾಪ್ ಪ್ಯಾನ್ ಇಂಡಿಯಾ ಸ್ಟಾರ್ ನಟ. ಪ್ರಭಾಸ್ಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಇತ್ತೀಚೆಗಷ್ಟೆ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಪ್ರಭಾಸ್ ಎಷ್ಟೇ ದೊಡ್ಡ ಸ್ಟಾರ್ ಆಗಿದ್ದರೂ ಸಹ ಸಿನಿಮಾ ಚೆನ್ನಾಗಿಲ್ಲದಿದ್ದರೆ ಜನ ನೋಡುವುದಿಲ್ಲ. ಅಂತೆಯೇ ಪ್ರಭಾಸ್ ಕಾರಣಕ್ಕೆ ಮೊದಲೆರಡು ಮೂರು ದಿನ ಉತ್ತಮ ಕಲೆಕ್ಷನ್ ಮಾಡಿದ ಸಿನಿಮಾ ಬಳಿಕ ಬಾಕ್ಸ್ ಆಫೀಸ್ನಲ್ಲಿ ಧಾರುಣವಾಗಿ ಕುಸಿಯಿತು. ಪ್ರಭಾಸ್ ಅಭಿಮಾನಿಗಳೇ ಸಿನಿಮಾ ಬಗ್ಗೆ ಟ್ರೋಲ್ ಮಾಡಲು ಆರಂಭಿಸಿದರು. ಇದೀಗ ಸಿನಿಮಾದ ನಿರ್ಮಾಪಕ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
‘ದಿ ರಾಜಾ ಸಾಬ್’ ಸಿನಿಮಾ ಹಾರರ್ ಕಾಮಿಡಿ ಸಿನಿಮಾ ಆಗಿದ್ದು, ಪ್ರಭಾಸ್ ದ್ವಿಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾನಲ್ಲಿ ದೆವ್ವ, ಭೂತ, ಪಿಶಾಚಿ ಇನ್ನೂ ಏನೇನೋ ತೋರಿಸಲಾಗಿದೆ. ಬಂಗ್ಲೆಯ ಒಳಗೆ ಮೊಸಳೆಯನ್ನು ಸಹ ಸಿನಿಮಾನಲ್ಲಿ ನಿರ್ದೇಶಕರು ತೋರಿಸಿದ್ದು, ಪ್ರಭಾಸ್, ಮೊಸಳೆ ಜೊತೆ ಫೈಟ್ ಮಾಡುವ ದೃಶ್ಯವೂ ಇದೆ. ಒಟ್ಟಾರೆ ನಿರ್ದೇಶಕರು, ತಮ್ಮ ಊಹಗೆ ಬಂದಿದ್ದನ್ನೆಲ್ಲ ಸಿನಿಮಾನಲ್ಲಿ ತೋರಿಸಿದ್ದಾರೆ. ಇದೇ ಕಾರಣಕ್ಕೆ ಸಿನಿಮಾ ಸಖತ್ ಟ್ರೋಲ್ ಸಹ ಆಗುತ್ತಿದೆ. ಇದೀಗ ಈ ಟ್ರೋಲಿಂಗ್ ವಿರುದ್ಧ ಸಿನಿಮಾದ ನಿರ್ಮಾಪಕರು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
ನಿನ್ನೆ ಶುಕ್ರವಾರದಂದು ನಿರ್ಮಾಪಕರು ಸೈಬರ್ ಪೊಲೀಸರಿಗೆ ದೂರು ನೀಡಿದ್ದು, ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನೂ ಸಹ ಹೊರಡಿಸಿದ್ದಾರೆ. ‘ನಮ್ಮ ‘ದಿ ರಾಜಾ ಸಾಬ್’ ಸಿನಿಮಾದ ದೃಶ್ಯಗಳನ್ನು ಅವಹೇಳನಕಾರಿಯಾಗಿ ಅನುಕರಿಸುವುದು, ಚಿತ್ರ ಮತ್ತು ಅದರ ನಟರನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಮತ್ತು ದಾರಿತಪ್ಪಿಸುವ ಹೇಳಿಕೆಗಳನ್ನು ಪೋಸ್ಟ್ ಮಾಡುವುದು, ಇಂತಹ ದುರುದ್ದೇಶಪೂರಿತ ಕೃತ್ಯಗಳು ಗೊಂದಲವನ್ನು ಸೃಷ್ಟಿಸುವ ಮತ್ತು ನಕಾರಾತ್ಮಕತೆಯನ್ನು ಹರಡುವ ಉದ್ದೇಶವನ್ನು ಹೊಂದಿವೆ. ಇಂಥಹಾ ಕೃತ್ಯಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು, ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ’ ಎಂದಿದ್ದಾರೆ.
ಇದನ್ನೂ ಓದಿ:ಪೂಜಾ ಹೆಗ್ಡೆ ಕ್ಯಾರಾವ್ಯಾನ್ಗೆ ನುಗ್ಗಿದ್ದರೇ ಪ್ರಭಾಸ್? ಸತ್ಯಾಂಶವೇನು?
‘ದಿ ರಾಜಾ ಸಾಬ್’ ಸಿನಿಮಾವನ್ನು ಹಲವರು ಟ್ರೋಲ್ ಮಾಡುತ್ತಿದ್ದಾರೆ. ಸಿನಿಮಾದ ದೃಶ್ಯಗಳು, ದೃಶ್ಯಗಳ ಸ್ಕ್ರೀನ್ ಶಾಟ್ಗಳನ್ನು ಬಳಸಿಕೊಂಡು ಮೀಮ್ಗಳನ್ನು ಕ್ರಿಯೇಟ್ ಮಾಡಲಾಗುತ್ತಿದೆ. ಅದರಲ್ಲೂ ಸಿನಿಮಾದ ನಿರ್ದೇಶಕ, ನಿರ್ಮಾಪಕರು ಸಂದರ್ಶನಗಳಲ್ಲಿ ಸಿನಿಮಾ ಬಗ್ಗೆ ಆಡಿರುವ ಮಾತುಗಳನ್ನು ಬಳಸಿಕೊಂಡು ಟ್ರೋಲ್ ಮಾಡಲಾಗುತ್ತಿದೆ. ಇದೇ ಕಾರಣಕ್ಕೆ ಇದೀಗ ನಿರ್ಮಾಪಕರು ಟ್ರೋಲರ್ಗಳ ವಿರುದ್ಧ ದೂರು ನೀಡಿದ್ದಾರೆ.
‘ದಿ ರಾಜಾ ಸಾಬ್’ ಸಿನಿಮಾವನ್ನು ಮಾರುತಿ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ಪ್ರಭಾಸ್ ಜೊತೆಗೆ ನಿಧಿ ಅಗರ್ವಾಲ್, ಮಾಳವಿಕಾ ಮೋಹನನ್ ಮತ್ತು ರಿದ್ಧಿ ಕುಮಾರ್ ನಾಯಕಿಯರಾಗಿ ನಟಿಸಿದ್ದಾರೆ. ಸಿನಿಮಾನಲ್ಲಿ ಸಂಜಯ್ ದತ್, ಬೊಮನ್ ಇರಾನಿ ಸಹ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರಭಾಸ್ ದ್ವಿಪಾತ್ರದಲ್ಲಿ ನಟಿಸಿಯೂ ಸಹ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ನಿರೀಕ್ಷಿತ ಯಸಸ್ಸನ್ನು ಗಳಿಸಲು ವಿಫಲವಾಗಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




