AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮುಂದಕ್ಕೆ ಹೋಯ್ತು ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ರಿಲೀಸ್ ಡೇಟ್

ಒಂದಲ್ಲಾ ಒಂದು ಕಾರಣದಿಂದ ‘ದಿ ರಾಜಾ ಸಾಬ್’ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ ಆಗುತ್ತಲೇ ಇದೆ. ಇದು ಪ್ರಭಾಸ್ ಅಭಿನಯಿಸಿದ ಮೊದಲ ಹಾರರ್ ಸಿನಿಮಾ ಆದ್ದರಿಂದ ಅಭಿಮಾನಿಗಳು ಬಹಳ ನಿರೀಕ್ಷೆ ಹೊಂದಿದ್ದಾರೆ. ಈ ವರ್ಷದ ಕೊನೆಯಲ್ಲಿ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದೂಡಲಾಗಿದೆ.

ಮತ್ತೆ ಮುಂದಕ್ಕೆ ಹೋಯ್ತು ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ರಿಲೀಸ್ ಡೇಟ್
Prabhas
ಮದನ್​ ಕುಮಾರ್​
|

Updated on: Aug 31, 2025 | 7:26 AM

Share

ಈ ವರ್ಷ ಪ್ರಭಾಸ್ (Prabhas) ನಟನೆಯ ಯಾವುದೇ ಸಿನಿಮಾ ಬಿಡುಗಡೆ ಆಗಿಲ್ಲ. ‘ದಿ ರಾಜಾ ಸಾಬ್’ ಸಿನಿಮಾ ನೋಡಲು ಕಾದಿದ್ದ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಯಾಕೆಂದರೆ, ಈ ಚಿತ್ರದ ಬಿಡುಗಡೆ ದಿನಾಂಕ (The Raja Saab Movie Release Date) ಮೇಲಿಂದ ಮೇಲೆ ಬದಲಾಗುತ್ತಲೇ ಇದೆ. ಇನ್ನೂ ಈ ಚಿತ್ರಕ್ಕೆ ಶೂಟಿಂಗ್ ಮುಗಿದಿಲ್ಲ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ‘ದಿ ರಾಜಾ ಸಾಬ್’ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ಕೆಲಸಗಳು ತಡ ಆಗುತ್ತಿರುವುದರಿಂದ ರಿಲೀಸ್ ಡೇಟ್ ಮುಂದೂಡಲಾಗಿದೆ. ಹಾಗಾದರೆ ಪ್ರಭಾಸ್ ಅಭಿಮಾನಿಗಳು ‘ದಿ ರಾಜಾ ಸಾಬ್’ (The Raja Saab) ಸಿನಿಮಾ ನೋಡುವುದು ಯಾವಾಗ? 2026ರಲ್ಲಿ!

ಹೌದು, ‘ದಿ ರಾಜಾ ಸಾಬ್’ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ. 2026ರ ಜನವರಿ 9ರಂದು ಈ ಸಿನಿಮಾ ಬಿಡುಗಡೆ ಆಗಲಿದೆ! ಮೊದಲು ಇದ್ದ ಪ್ಲ್ಯಾನ್ ಬೇರೆಯೇ ಆಗಿತ್ತು. 2025ರ ಏಪ್ರಿಲ್ ತಿಂಗಳಲ್ಲಿ ‘ದಿ ರಾಜಾ ಸಾಬ್’ ಚಿತ್ರವನ್ನು ತೆರೆಕಾಣಿಸಲು ನಿರ್ಧರಿಸಲಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ನಂತರ ಡಿಸೆಂಬರ್ 5ಕ್ಕೆ ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿತ್ತು. ಅದು ಕೂಡ ಸಾಧ್ಯವಾಗುತ್ತಿಲ್ಲ.

ಒಂದಲ್ಲಾ ಒಂದು ಕಾರಣಕ್ಕೆ ‘ದಿ ರಾಜಾ ಸಾಬ್’ ಸಿನಿಮಾದ ರಿಲೀಸ್ ದಿನಾಂಕ ಮುಂದೂಡಿಕೆ ಆಗುತ್ತಲೇ ಇದೆ. ಇದು ಪ್ರಭಾಸ್ ಅವರು ನಟಿಸಿರುವ ಮೊದಲ ಹಾರರ್ ಸಿನಿಮಾ. ಆ ಕಾರಣದಿಂದ ಅಭಿಮಾನಿಗಳಿಗೆ ಸಹಜವಾಗಿಯೇ ಹೆಚ್ಚು ನಿರೀಕ್ಷೆ ಇದೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್ ನೋಡಿ ಅಭಿಮಾನಿಗಳಿಗೆ ಥ್ರಿಲ್ ಆಗಿದೆ. ಆದರೆ ಶೂಟಿಂಗ್ ವಿಳಂಬ ಆಗುತ್ತಲೇ ಇದೆ.

ಇದನ್ನೂ ಓದಿ
Image
ಪ್ರಭಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ‘ಕಲ್ಕಿ 2898 ಎಡಿ’ ಟೀಂ
Image
ಪ್ರಭಾಸ್ ಜೊತೆಗೆ ಹೊಂಬಾಳೆಯ 4ನೇ ಸಿನಿಮಾ, ನಿರ್ದೇಶಕ ಯಾರು?
Image
ತಂದೆ ಮೃತಪಟ್ಟ ನೋವಲ್ಲೂ ಸಹಾಯ ಮಾಡೋದು ಮರೆತಿರಲಿಲ್ಲ ಪ್ರಭಾಸ್  
Image
ಪ್ರಭಾಸ್​ರ ಹೊಸ ಚಿತ್ರ ಶೂಟಿಂಗ್​ಗೆ ಮುಹೂರ್ತ ಫಿಕ್ಸ್, ಬಿಡುಗಡೆ ಯಾವಾಗ?

‘ದಿ ರಾಜಾ ಸಾಬ್’ ಸಿನಿಮಾ 2026ರ ಜನವರಿ 9ರಂದು ಬಿಡುಗಡೆ ಆದರೆ ಪೈಪೋಟಿ ಜಾಸ್ತಿ ಇರಲಿದೆ. ಅದು ಸಂಕ್ರಾಂತ್ರಿ ಹಬ್ಬದ ಸಮಯ. ಆ ಸಂದರ್ಭದಲ್ಲಿ ತೆಲುಗು ಮತ್ತು ತಮಿಳಿನಲ್ಲಿ ದೊಡ್ಡ ದೊಡ್ಡ ಸಿನಿಮಾಗಳು ಬಿಡುಗಡೆ ಆಗುತ್ತವೆ. ಈಗಾಗಲೇ ಒಂದಷ್ಟು ಸಿನಿಮಾಗಳು ತಮ್ಮ ರಿಲೀಸ್ ದಿನಾಂಕವನ್ನು ಘೋಷಿಸಿಕೊಂಡಿವೆ. ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಕೂಡ ಜನವರಿ 9ಕ್ಕೆ ರಿಲೀಸ್ ಆಗಲಿದೆ.

ಇದನ್ನೂ ಓದಿ: ಪ್ರಭಾಸ್ ಮದುವೆ ಯಾವಾಗ? ನಟನ ದೊಡ್ಡಮ್ಮ ಹೇಳಿದ್ದೇನು?

ವರದಿಗಳ ಪ್ರಕಾರ, ಪ್ರಭಾಸ್ ಅವರು ಅಕ್ಟೋಬರ್ ತಿಂಗಳಲ್ಲಿ ‘ದಿ ರಾಜಾ ಸಾಬ್’ ಸಿನಿಮಾದ ಶೂಟಿಂಗ್ ಮುಗಿಸಿಕೊಳ್ಳಲಿದ್ದಾರೆ. ಆ ಬಳಿಕ ಅವರು ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ. ಆ ಸಿನಿಮಾ ಮೇಲೆ ಕೂಡ ಅಭಿಮಾನಿಗಳು ಸಖತ್ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.