ಕನ್ನಡದಲ್ಲೂ ಬಿಡುಗಡೆ ಆಯ್ತು ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಟೀಸರ್
ಪ್ರಭಾಸ್ ನಟಿಸಿದ ಮೊದಲ ಹಾರರ್ ಸಿನಿಮಾ ಎಂಬ ಕಾರಣಕ್ಕೆ ಪ್ರೇಕ್ಷಕರು ‘ದಿ ರಾಜಾ ಸಾಬ್’ ಚಿತ್ರದ ಮೇಲೆ ನಿರೀಕ್ಷೆ ಹೊಂದಿದ್ದಾರೆ. ಇಂದು (ಜೂನ್ 16) ಈ ಸಿನಿಮಾದ ಮೊದಲ ಟೀಸರ್ ಬಿಡುಗಡೆ ಆಗಿದೆ. ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಸಂಸ್ಥೆಯು ಈ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದೆ.

ಬಹುನಿರೀಕ್ಷಿತ ‘ದಿ ರಾಜಾ ಸಾಬ್’ (The Raja Saab) ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಈ ಸಿನಿಮಾ ಮೇಲೆ ಪ್ರಭಾಸ್ (Prabhas) ಅಭಿಮಾನಿಗಳು ತುಂಬ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಿರೀಕ್ಷೆಗೆ ತಕ್ಕಂತೆಯೇ ಟೀಸರ್ (The Raja Saab Teaser) ಮೂಡಿಬಂದಿದೆ. ಮಾರುತಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಹಲವು ಕಾರಣಗಳಿಂದ ‘ದಿ ರಾಜಾ ಸಾಬ್’ ಸಿನಿಮಾ ಈಗಾಗಲೇ ಸಾಕಷ್ಟು ಹೈಪ್ ಕ್ರಿಯೇಟ್ ಮಾಡಿದೆ. ಡಿಸೆಂಬರ್ 5ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಈಗ ಕನ್ನಡ, ತೆಲುಗು, ಹಿಂದಿ, ಮಲಯಾಳಂ ಮತ್ತು ತಮಿಳು ಭಾಷೆಯಲ್ಲಿ ಈ ಚಿತ್ರದ ಟೀಸರ್ ಬಿಡುಗಡೆ ಆಗಿದೆ.
‘ದಿ ರಾಜಾ ಸಾಬ್’ ಸಿನಿಮಾ ಮೇಕಿಂಗ್ನಿಂದ ಗಮನ ಸೆಳೆಯುತ್ತಿದೆ. ಮೊದಲ ಟೀಸರ್ ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ. ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಟಿ.ಜಿ. ವಿಶ್ವ ಪ್ರಸಾದ್ ಅವರು ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅಭಿಮಾನಿಗಳಿಂದ ‘ದಿ ರಾಜಾ ಸಾಬ್’ ಟೀಸರ್ಗೆ ಮೆಚ್ಚುಗೆ ಸಿಕ್ಕಿದೆ.
ಈ ಟೀಸರ್‌ನಲ್ಲಿ ಪ್ರಭಾಸ್ ಅವರ ಲುಕ್ ಖಡಕ್ ಆಗಿದೆ. ಮೂವರು ನಾಯಕಿಯರು ಕಾಣಿಸಿಕೊಂಡಿದ್ದಾರೆ. ಪ್ರಭಾಸ್ ಅವರ ಎಂಟ್ರಿ ದೃಶ್ಯ ಸಖತ್ತಾಗಿದೆ. ಕಾಮಿಡಿ ಡೈಲಾಗ್‌ಗಳು ಮತ್ತು ರೊಮ್ಯಾಂಟಿಕ್ ಟ್ರ್ಯಾಕ್ ಕೂಡ ಗಮನ ಸೆಳೆದಿದೆ. ಅದರ ಜೊತೆ ಬಾಲಿವುಡ್ ನಟ ಸಂಜಯ್ ದತ್ ಅವರ ಗೆಟಪ್ ಸಹ ಟೀಸರ್‌ನಲ್ಲಿ ಹೈಲೈಟ್ ಆಗಿದೆ. ರಾಜಮನೆತನದ ಸುತ್ತ ನಡೆಯುವ ಕಹಾನಿ ಈ ಸಿನಿಮಾದಲ್ಲಿದೆ.
ಈ ಚಿತ್ರದಲ್ಲಿ ಪ್ರಭಾಸ್ ಅವರಿಗೆ ಎರಡು ಲುಕ್ ಇವೆ. ಒಂದರಲ್ಲಿ ಲವರ್‌ಬಾಯ್ ಆಗಿದ್ದಾರೆ. ಮತ್ತೊಂದರಲ್ಲಿ ಅತೀಂದ್ರಿಯ ಶಕ್ತಿ ಆವಾಹಿಸಿಕೊಂಡಂತೆ ಕಂಡಿದ್ದಾರೆ. ಇದೆಲ್ಲವೂ ಟೀಸರ್‌ನಲ್ಲಿ ಕಾಣಿಸಿದೆ. ಪ್ರಭಾಸ್ ಜೊತೆ ನಿಧಿ ಅಗರ್ವಾಲ್, ಮಾಳವಿಕಾ ಮೋಹನನ್, ರಿದ್ಧಿ ಕುಮಾರ್ ಅವರು ನಾಯಕಿಯರಾಗಿ ಅಭಿನಯಿಸಿದ್ದಾರೆ. ಒಂದು ಬಂಗಲೆಯಲ್ಲಿ ಸಿನಿಮಾದ ಕಥೆ ಸಾಗುತ್ತದೆ ಎಂಬುದು ಟೀಸರ್ ಮೂಲಕ ಗೊತ್ತಾಗಿದೆ.
ಇದನ್ನೂ ಓದಿ: 50 ಕೋಟಿ ರೂಪಾಯಿ ಸಂಭಾವನೆ ಕಡಿಮೆ ಮಾಡಿಕೊಂಡ ಪ್ರಭಾಸ್; ಕಾರಣ ಏನು?
ಬೃಹತ್ ಸೆಟ್ಗಳಲ್ಲಿ ‘ದಿ ರಾಜಾ ಸಾಬ್’ ಸಿನಿಮಾವನ್ನು ಚಿತ್ರಿಸಲಾಗಿದೆ. ಡಿಸೆಂಬರ್ 5ರಂದು ತಮಿಳು, ತೆಲುಗು, ಹಿಂದಿ, ಕನ್ನಡ, ಮಲಯಾಳಂ ಭಾಷೆಗಳಲ್ಲಿ ಈ ಚಿತ್ರ ರಿಲೀಸ್ ಆಗಲಿದೆ ಎಂದು ನಿರ್ಮಾಪಕ ಟಿ.ಜಿ. ವಿಶ್ವ ಪ್ರಸಾದ್ ತಿಳಿಸಿದ್ದಾರೆ. ಥಮನ್ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.