ಪ್ರಭಾಸ್ ನಟನೆಯ ಮೂರು ಸಿನಿಮಾಗಳು ಒಟ್ಟಿಗೆ ಮರು ಬಿಡುಗಡೆ

Prabhas: ಪ್ರಭಾಸ್ ನಟನೆಯ ‘ಕಲ್ಕಿ’ ಸಿನಿಮಾ ಕೆಲ ತಿಂಗಳ ಹಿಂದಷ್ಟೆ ಬಿಡುಗಡೆ ಆಗಿ ಭಾರಿ ಯಶಸ್ಸು ಗಳಿಸಿತು. ಇದೀಗ ಪ್ರಭಾಸ್ ನಟನೆಯ ಮೂರು ಸಿನಿಮಾ ಒಟ್ಟಿಗೆ ಬಿಡುಗಡೆ ಆಗುತ್ತಿವೆ.

ಪ್ರಭಾಸ್ ನಟನೆಯ ಮೂರು ಸಿನಿಮಾಗಳು ಒಟ್ಟಿಗೆ ಮರು ಬಿಡುಗಡೆ
ಪ್ರಭಾಸ್
Follow us
ಮಂಜುನಾಥ ಸಿ.
|

Updated on: Oct 18, 2024 | 11:36 AM

ಭಾರತದ ಟಾಪ್ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಟನೆಯ ‘ಕಲ್ಕಿ’ ಸಿನಿಮಾ ಕೆಲ ತಿಂಗಳ ಹಿಂದಷ್ಟೆ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಎನಿಸಿಕೊಂಡಿದೆ. ಪ್ರಭಾಸ್ ನಟನೆಯ ಮುಂದಿನ ಸಿನಿಮಾ ಬಿಡುಗಡೆ ಆಗಲು ವರ್ಷವೇ ಕಾಯಬೇಕಾಗಬಹುದೇನೋ. ಆದರೆ ಅವರ ಅಭಿಮಾನಿಗಳಿಗೆ ಖುಷಿ ಸುದ್ದಿಯೆಂದರೆ ಒಂದೇ ಸಮಯಕ್ಕೆ ಪ್ರಭಾಸ್ ನಟನೆಯ ಮೂರು ಸಿನಿಮಾಗಳು ಮರು ಬಿಡುಗಡೆ ಆಗುತ್ತಿವೆ. ಪ್ರಭಾಸ್ ಹುಟ್ಟುಹಬ್ಬ ಹತ್ತಿರದಲ್ಲೇ ಇದ್ದು, ಹಬುಟ್ಟುಹಬ್ಬದ ಪ್ರಯುಕ್ತ ಮೂರು ಸಿನಿಮಾಗಳನ್ನು ಮರು ಬಿಡುಗಡೆ ಮಾಡಲಾಗುತ್ತಿದೆ.

ಅಕ್ಟೋಬರ್ 23 ರಂದು ಪ್ರಭಾಸ್ ಹುಟ್ಟುಹಬ್ಬವಿದ್ದು, ಅಭಿಮಾನಿಗಳು ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಸಜ್ಜಾಗಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಭಾಸ್ ನಟನೆಯ ಮೂರು ಹಳೆಯ ಸಿನಿಮಾಗಳು ಸಹ ಮರು ಬಿಡುಗಡೆ ಆಗಲಿವೆ. ಮೊದಲಿಗೆ ಅಕ್ಟೋಬರ್ 19 ರಂದು ಪ್ರಭಾಸ್ ನಟಿಸಿ ಪ್ರಶಾಂತ್ ನೀಲ್ ನಿರ್ದೇಶನ ಮಾಡಿರುವ ‘ಸಲಾರ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾ ಕಳೆದ ವರ್ಷ ಡಿಸೆಂಬರ್​ನಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಬಿಡುಗಡೆ ಆಗಿ ಒಂದು ವರ್ಷ ಕಳೆಯುವ ಮುನ್ನವೇ ಮರು ಬಿಡುಗಡೆ ಆಗುತ್ತಿದೆ. ಸಿನಿಮಾವನ್ನು ಹೊಂಬಾಳೆ ನಿರ್ಮಿಸಿತ್ತು.

ಇದನ್ನೂ ಓದಿ:ಪ್ರಭಾಸ್ ಪ್ರಕಾರ ಯಾರು ಬೆಸ್ಟ್? ಅಲ್ಲು ಅರ್ಜುನ್, ಜೂ ಎನ್​ಟಿಆರ್, ರಾಮ್ ಚರಣ್

ಅಕ್ಟೋಬರ್ 22 ರಂದು ಪ್ರಭಾಸ್ ನಟನೆಯ ‘ಮಿಸ್ಟರ್ ಪರ್ಫೆಕ್ಟ್’ ಸಿನಿಮಾ ಮರು ಬಿಡುಗಡೆ ಆಗಲಿದೆ. 2011 ರಲ್ಲಿ ಈ ಸಿನಿಮಾ ಬಿಡುಗಡೆ ಆಗಿತ್ತು. ಸಿನಿಮಾದಲ್ಲಿ ಕಾಜೊಲ್, ತಾಪ್ಸಿ ಪನ್ನು, ಪ್ರಕಾಶ್ ರೈ ಇನ್ನೂ ಕೆಲವು ಪ್ರಮುಖ ನಟರಿದ್ದರು. ವಿದೇಶದಲ್ಲಿ ಬೆಳೆದ ಯುವಕನೊಬ್ಬ ಭಾರತಕ್ಕೆ ಬಂದು ಸಂಬಂಧಗಳನ್ನು, ಪ್ರೀತಿಯನ್ನು ಅರ್ಥ ಮಾಡಿಕೊಳ್ಳುವ ಕತೆ ಈ ಸಿನಿಮಾದಲ್ಲಿದೆ. ಸಿನಿಮಾದ ಹಾಸ್ಯ ದೃಶ್ಯಗಳು, ಹಾಡುಗಳು ಸಖತ್ ಹಿಟ್ ಆಗಿದ್ದವು. ಅಕ್ಟೋಬರ್ 23 ಕ್ಕೆ ಪ್ರಭಾಸ್ ನಟನೆಯ ಮೊಟ್ಟ ಮೊದಲ ಸಿನಿಮಾ ‘ಈಶ್ವರ್’ ಬಿಡುಗಡೆ ಆಗಲಿದೆ. 2002 ರಲ್ಲಿ ಈ ಸಿನಿಮಾ ಬಿಡುಗಡೆ ಆಗಿತ್ತು. ಪ್ರಭಾಸ್ ನಟನೆಯ ಮೊಟ್ಟ ಮೊದಲ ಸಿನಿಮಾ ಇದು. ಸಿನಿಮಾದಲ್ಲಿ ಬಡ ಯುವಕನ ಪಾತ್ರದಲ್ಲಿ ಪ್ರಭಾಸ್ ನಟಿಸಿದ್ದರು.

ಪ್ರಭಾಸ್ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹಾರರ್ ರೊಮ್ಯಾಂಟಿಕ್ ಸಿನಿಮಾ ‘ರಾಜಾ ಡಿಲಕ್ಸ್’ ಚಿತ್ರೀಕರಣವನ್ನು ಪ್ರಭಾಸ್ ಬಹುತೇಕ ಮುಗಿಸಿದ್ದಾರೆ. ಈಗ ರಘು ಹನುಪುಡಿ ನಿರ್ದೇಶನದ ಹೆಸರಿಡದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದರ ಬಳಿಕ ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡಲಿರುವ ‘ಸ್ಪಿರಿಟ್’ ಸಿನಿಮಾದಲ್ಲಿ ನಟಿಸಲಿದ್ದಾರೆ. ಅದಾದ ಬಳಿಕ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್ 2’ ಪ್ರಾರಂಭ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ