ಪ್ರಜ್ವಲ್ ದೇವರಾಜ್ ನಟಿಸಿರುವ ‘ಅಬ್ಬರ’ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಹ್ಯಾಟ್ರಿಕ್ ಹೀರೊ ಶಿವರಾಜ್ಕುಮಾರ್ ಪೋಸ್ಟರ್ ರಿಲೀಸ್ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. 3 ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಪ್ರಜ್ವಲ್ ಫಸ್ಟ್ಲುಕ್ ಪೋಸ್ಟರ್ನಲ್ಲಿ ರಿವೀಲ್ ಆಗಿದೆ.
ಕೆ. ರಾಮ್ನಾರಾಯಣ್ ನಿರ್ದೇಶನದಲ್ಲಿ ಚಿತ್ರ ಮೂಡಿಬರಲಿದೆ. ರವಿ ಬಸ್ರೂರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರಕ್ಕೆ ರಾಶ್ರೀ ಪೊನ್ನಪ್ಪ, ನಿಮಿಕಾ ರತ್ನಾಕರ್ ಹಾಗೂ ಲೇಖಾಚಂದ್ರ ನಾಯಕಿಯರು. ಆರ್ಮುಗಂ ರವಿಶಂಕರ್ ಕೂಡಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಲವರ್ ಬಾಯ್ ಪಾತ್ರದಲ್ಲಿ ಪ್ರಜ್ವಲ್ ಹೆಚ್ಚು ಕಾಣಿಸಿಕೊಂಡವರು. ಪ್ರಜ್ವಲ್ 3 ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ‘ಅಬ್ಬರ’ದ ಕಥೆಯನ್ನು ಕಾದು ನೋಡಬೇಕಿದೆ.