AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಾಗಿದೆ ಕ್ಷಮಿಸಿ: ಬೆಟ್ಟಿಂಗ್ ಆ್ಯಪ್ ಪ್ರಚಾರ ಮಾಡಿದ್ದಕ್ಕೆ ಕ್ಷಮೆ ಕೇಳಿದ ಪ್ರಕಾಶ್ ರಾಜ್

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು 2016ರಲ್ಲಿ ಒಂದು ಗೇಮಿಂಗ್ ಆ್ಯಪ್ ಪ್ರಚಾರ ಮಾಡಿದ್ದರು. ಬಳಿಕ ಅದು ಬೆಟ್ಟಿಂಗ್ ಆ್ಯಪ್ ಆಗಿ ಬದಲಾಯಿತು. ಹಾಗಾಗಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ವಿಶೇಷ ತನಿಖಾ ತಂಡದ ಅಧಿಕಾರಿಗಳಿಗೆ ಪ್ರಕಾಶ್ ರಾಜ್ ಅವರು ಹಲವು ಮಾಹಿತಿ ಒದಗಿಸಿದ್ದಾರೆ.

ತಪ್ಪಾಗಿದೆ ಕ್ಷಮಿಸಿ: ಬೆಟ್ಟಿಂಗ್ ಆ್ಯಪ್ ಪ್ರಚಾರ ಮಾಡಿದ್ದಕ್ಕೆ ಕ್ಷಮೆ ಕೇಳಿದ ಪ್ರಕಾಶ್ ರಾಜ್
Prakash Raj
ಮದನ್​ ಕುಮಾರ್​
|

Updated on: Nov 13, 2025 | 5:10 PM

Share

ಅನೇಕ ಸೆಲೆಬ್ರಿಟಿಗಳು ಬೆಟ್ಟಿಂಗ್ ಆ್ಯಪ್ ಪ್ರಚಾರ ಮಾಡಿ ಪೇಚಿಗೆ ಸಿಲುಕಿದ್ದಾರೆ. ಸಿಐಡಿ (CID) ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಹಲವು ನಟರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಅವರಿಗೂ ಸಮನ್ಸ್ ನೀಡಲಾಗಿತ್ತು. ನವೆಂಬರ್ 12ರಂದು ಪ್ರಕಾಶ್ ರಾಜ್ ಅವರು ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು. ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಬೆಟ್ಟಿಂಗ್ ಆ್ಯಪ್ (Betting App) ಪ್ರಚಾರ ಮಾಡಿದ್ದಕ್ಕಾಗಿ ಅವರು ಜನರ ಬಳಿ ಕ್ಷಮೆ ಕೇಳಿದರು.

ಸಿಐಡಿ ಕಚೇರಿಯಿಂದ ಹೊರಬಂದ ಪ್ರಕಾಶ್ ರಾಜ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ‘2016ರಲ್ಲಿ ನಾನು ಒಂದು ಗೇಮಿಂಗ್ ಆ್ಯಪ್ ಪ್ರಚಾರ ಮಾಡಿದ್ದೆ. ಆದರೆ ನಂತರ 2017ರಲ್ಲಿ ಅದು ಬೆಟ್ಟಿಂಗ್ ಆ್ಯಪ್ ಆಗಿ ಬದಲಾಯಿತು. ನನ್ನ ಒಪ್ಪಂದ ಕ್ಯಾನ್ಸಲ್ ಆಯಿತು. ನಾನು ಗೊತ್ತಿದ್ದು ಮಾಡಿದ್ದರೂ ಗೊತ್ತಿಲ್ಲದೇ ಮಾಡಿದ್ದರೂ ಇದು ತಪ್ಪು. ಅದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ’ ಎಂದು ಪ್ರಕಾಶ್ ರಾಜ್ ಅವರು ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ತನಿಖೆಗೆ ಪ್ರಕಾಶ್ ರಾಜ್ ಅವರು ಪೂರ್ತಿ ಸಹಕಾರ ನೀಡಿದ್ದಾರೆ. ಆ ಕುರಿತು ಕೂಡ ಅವರು ವಿವರಿಸಿದ್ದಾರೆ. ‘ನಾನು ಎಲ್ಲ ದಾಖಲೆಗಳನ್ನು ಅಧಿಕಾರಿಗಳಿಗೆ ಒಪ್ಪಿಸಿದ್ದೇನೆ. ಬ್ಯಾಂಕ್ ಮಾಹಿತಿ ಮತ್ತು ಸಂಬಂಧಿಸಿದ ಎಲ್ಲ ವಿವರಗಳನ್ನು ತನಿಖಾ ತಂಡಕ್ಕೆ ನೀಡಿದ್ದೇನೆ’ ಎಂದು ಹೇಳಿದ್ದಾರೆ ಪ್ರಕಾಶ್ ರಾಜ್. ಯುವ ಜನರು ಬೆಟ್ಟಿಂಗ್ ಜಾಲಕ್ಕೆ ಸಿಲುಕಿಕೊಳ್ಳುತ್ತಿರುವ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು.

‘ಹಲವು ಯುವಕರು ಇದರಿಂದಾಗಿ ಹಣ ಕಳೆದುಕೊಳ್ಳುತ್ತಿದ್ದಾರೆ. ಅವರ ಕುಟುಂಬದವರು ತೊಂದರೆ ಅನುಭವಿಸುವಂತಾಗಿದೆ. ಕಷ್ಟಪಟ್ಟು ದುಡಿದರೆ ಮಾತ್ರ ಹಣ ಮತ್ತು ಯಶಸ್ಸು ಸಿಗುತ್ತದೆ. ಆ್ಯಪ್ ವಿಷಯದಲ್ಲಿ ನನ್ನನ್ನು ದಯವಿಟ್ಟು ಕ್ಷಮಿಸಿ. ನಾನು ಎಂದಿಗೂ ಈ ರೀತಿಯ ತಪ್ಪನ್ನು ಮತ್ತೆ ಮಾಡುವುದಿಲ್ಲ ಅಂತ ಭರವಸೆ ನೀಡುತ್ತೇನೆ’ ಎಂದಿದ್ದಾರೆ ಪ್ರಕಾಶ್ ರಾಜ್.

ಇದನ್ನೂ ಓದಿ: ಪ್ರಕಾಶ್ ರಾಜ್ ವಿಚ್ಛೇದನಕ್ಕೆ ಕಾರಣವಾದ ವಿಚಾರವೇನು? ಜಯಂತಿ ಕಣ್ಣಪ್ಪ ವಿವರಿಸಿದ್ದು ಹೀಗೆ

ಅಕ್ರಮ ಬೆಟ್ಟಿಂಗ್ ಮತ್ತು ಆನ್​ಲೈನ್ ಬೆಟ್ಟಿಂಗ್ ಜಾಲದ ಬಗ್ಗೆ ತನಿಖೆ ನಡೆಸಲು ತೆಲಂಗಾಣ ಸರ್ಕಾರವು ವಿಶೇಷ ತನಿಖಾ ತಂಡವನ್ನು ರಚಿಸಿದೆ. ಬೆಟ್ಟಿಂಗ್ ಹಾವಳಿಗೆ ಸಿಲುಕಿ ಅನೇಕ ಯುವಕರು ಜೀವನ ಹಾಳು ಮಾಡಿಕೊಂಡಿರುವ ಬಗ್ಗೆ ಪೊಲೀಸ್ ದೂರು ಹೆಚ್ಚಾದ ಬಳಿಕ ಸರ್ಕಾರವು ತನಿಖೆ ನಡೆಸಲು ಮುಂದಾಯಿತು. ಇದಕ್ಕೆ ಸಂಬಂಧಿಸಿದಂತೆ ಬೆಟ್ಟಿಂಗ್ ಆ್ಯಪ್ ಪ್ರಚಾರ ಮಾಡಿದ ಸೆಲೆಬ್ರಿಟಿಗಳನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿ ಪಡೆಯಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ