AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಪಿರಿಟ್’ ಸಿನಿಮಾದಿಂದ ಪ್ರಕಾಶ್ ರಾಜ್ ಹೊರಬಂದಿಲ್ಲ; ಸ್ಪಷ್ಟನೆ ನೀಡಿದ ನಟ

ಪ್ರಕಾಶ್ ರಾಜ್ ಅವರು ‘ಸ್ಪಿರಿಟ್’ ಚಿತ್ರತಂಡದ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ ಎಂಬ ಗಾಸಿಪ್ ಹಬ್ಬಿತ್ತು. ಆದರೆ ಆ ವದಂತಿಯನ್ನು ಪ್ರಕಾಶ್ ರಾಜ್ ಅವರು ತಳ್ಳಿಹಾಕಿದ್ದಾರೆ. ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ. ಅವರ ಪಾತ್ರಕ್ಕೆ ಇನ್ನೂ ಶೂಟಿಂಗ್ ಕೂಡ ಆರಂಭ ಆಗಿಲ್ಲ ಎಂದು ಪ್ರಕಾಶ್ ರಾಜ್ ಅವರು ಹೇಳಿದ್ದಾರೆ.

‘ಸ್ಪಿರಿಟ್’ ಸಿನಿಮಾದಿಂದ ಪ್ರಕಾಶ್ ರಾಜ್ ಹೊರಬಂದಿಲ್ಲ; ಸ್ಪಷ್ಟನೆ ನೀಡಿದ ನಟ
Spirit Movie Poster, Prakash Raj
ಮದನ್​ ಕುಮಾರ್​
|

Updated on: Feb 09, 2026 | 8:01 PM

Share

ಖ್ಯಾತ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರು ‘ಸ್ಪಿರಿಟ್’ (Spirit) ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಪ್ರಭಾಸ್ ನಟನೆಯ ಈ ಸಿನಿಮಾದ ಪಾತ್ರವರ್ಗದ ಬಗ್ಗೆ ಜನರಿಗೆ ಗೊಂದಲ ಮೂಡಿದೆ. ಈ ಮೊದಲು ನಾಯಕಿ ಆಗಿದ್ದ ದೀಪಿಕಾ ಪಡುಕೋಣೆ ಅವರು ಚಿತ್ರತಂಡದಿಂದ ಹೊರನಡೆದರು. ಆ ಬಳಿಕ ತೃಪ್ತಿ ದಿಮ್ರಿ ಅವರನ್ನು ಆಯ್ಕೆ ಮಾಡಲಾಯಿತು. ಈಗ ‘ಸ್ಪಿರಿಟ್’ ಸಿನಿಮಾದಿಂದ ಹಿರಿಯ ನಟ ಪ್ರಕಾಶ್ ರಾಜ್ (Prakash Raj) ಅವರು ಹೊರ ನಡೆದಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಅದಕ್ಕೆ ಈಗ ಸ್ವತಃ ಪ್ರಕಾಶ್ ರಾಜ್ ಅವರು ಸ್ಪಷ್ಟನೆ ನೀಡಿದ್ದಾರೆ. ವದಂತಿಯನ್ನು ಅವರು ತಳ್ಳಿಹಾಕಿದ್ದಾರೆ.

ಗಾಸಿಪ್ ಏನು? ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಮತ್ತು ನಟ ಪ್ರಕಾಶ್ ರಾಜ್ ಅವರ ನಡುವೆ ಭಿನ್ನಾಭಿಪ್ರಾಯ ಮೂಡಿತಂತೆ. ಒಂದು ದೃಶ್ಯದ ಚಿತ್ರೀಕರಣ ನಡೆಯುತ್ತಿರುವಾಗಲೇ ಅವರಿಬ್ಬರ ನಡುವೆ ವಾದ ಆಯಿತಂತೆ. ಅದರಿಂದಾಗಿ ಪ್ರಕಾಶ್ ರಾಜ್ ಅವರು ಚಿತ್ರತಂಡದಿಂದ ಹೊರಗೆ ಬರಲು ನಿರ್ಧರಿಸಿದರಂತೆ. ಈ ರೀತಿಯಾಗಿ ಗಾಸಿಪ್ ಹಬ್ಬಿದೆ.

ಆದರೆ ಸ್ವತಃ ಪ್ರಕಾಶ್ ರಾಜ್ ಅವರು ‘ಹಿಂದೂಸ್ತಾನ್ ಟೈಮ್ಸ್’ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಇವೆಲ್ಲವೂ ನಾನ್​ಸೆನ್ಸ್ ಊಹಾಪೋಹಗಳು. ಅದರ ಬಗ್ಗೆ ನನಗೆ ಗೊತ್ತಿಲ್ಲ’ ಎಂದು ಪ್ರಕಾಶ್ ರಾಜ್ ಅವರು ಹೇಳಿದ್ದಾರೆ. ಆ ಮೂಲಕ, ತಾವು ಇನ್ನೂ ಚಿತ್ರತಂಡದ ಭಾಗವಾಗಿರುವುದಾಗಿ ಅವರು ಹೇಳಿದ್ದಾರೆ. ಈ ವಿಷಯ ತಿಳಿದು ಪ್ರಕಾಶ್ ರಾಜ್ ಅವರ ಅಭಿಮಾನಿಗಳಿಗೆ ಸಮಾಧಾನ ಆಗಿದೆ.

ಪ್ರಕಾಶ್ ರಾಜ್ ಅವರು ಪ್ರತಿಭಾನ್ವಿತ ನಟ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಇಂಗ್ಲಿಷ್ ಭಾಷೆಗಳನ್ನು ಅವರು ನಿರರ್ಗಳವಾಗಿ ಮಾತನಾಡುತ್ತಾರೆ. ಇದರಿಂದ ಚಿತ್ರತಂಡಗಳಿಗೆ ಅನುಕೂಲ ಆಗುತ್ತದೆ. ಪಾತ್ರವರ್ಗದಲ್ಲಿ ಪ್ರಕಾಶ್ ರಾಜ್ ಇದ್ದರೆ ಅಂಥ ಸಿನಿಮಾಗಳ ಮೆರುಗು ಹೆಚ್ಚುತ್ತದೆ. ವಿಲನ್ ಮತ್ತು ಪೋಷಕ ಪಾತ್ರಗಳ ಮೂಲಕ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ‘ಸ್ಪಿರಿಟ್’ ಸಿನಿಮಾನಲ್ಲಿ ಮತ್ತೊಬ್ಬ ಬಾಲಿವುಡ್ ಸ್ಟಾರ್ ನಟಿ

‘ಎಕ್ಸ್’ (ಟ್ವಿಟರ್) ಖಾತೆಯಲ್ಲೂ ಪ್ರಕಾಶ್ ರಾಜ್ ಅವರು ಸ್ಪಷ್ಟನೆ ನೀಡಿದ್ದಾರೆ. ‘ಸ್ಪಿರಿಟ್ ಸಿನಿಮಾ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ಗಮನಕ್ಕೆ.. ನಾವು ಇನ್ನೂ ನನ್ನ ಪಾತ್ರದ ಶೂಟಿಂಗ್ ಕೂಡ ಆರಂಭಿಸಿಲ್ಲ. ಆದರೆ ನೀವು ವದಂತಿ ಸೃಷ್ಟಿಸುತ್ತಿದ್ದೀರಿ’ ಎಂದು ಪ್ರಕಾಶ್ ರಾಜ್ ಅವರು ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್
ಫ್ಲೈದುಬೈ ಪ್ರಕರಣ: ಸಹ ಪೈಲಟ್ ಕೃತ್ಯವನ್ನು ಶ್ಲಾಘಿಸಿದ ಅಲ್-ಖೈದಾ
ಫ್ಲೈದುಬೈ ಪ್ರಕರಣ: ಸಹ ಪೈಲಟ್ ಕೃತ್ಯವನ್ನು ಶ್ಲಾಘಿಸಿದ ಅಲ್-ಖೈದಾ