Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಭಮೇಳದಲ್ಲಿ ಪ್ರಕಾಶ್ ರೈ AI ಫೋಟೋ; ಪ್ರಶಾಂತ್ ಸಂಬರಗಿ ವಿರುದ್ಧ ದೂರು

AI ತಂತ್ರಜ್ಞಾನದ ಮೂಲಜ ಪ್ರಕಾಶ್ ರಾಜ್ ಅವರು ಕುಂಭಮೇಳದಲ್ಲಿ ಸ್ನಾನ ಮಾಡುತ್ತಿರುವ ರೀತಿಯಲ್ಲಿ ತೋರಿಸಲಾಗಿದೆ. ಈ ಫೇಕ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಸಂಬಂಧ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರು ಈ ರೀತಿ ಕೇಸ್ ದಾಖಲಿಸಿದ್ದು ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರಗಿ ವಿರುದ್ಧ

ಕುಂಭಮೇಳದಲ್ಲಿ ಪ್ರಕಾಶ್ ರೈ AI ಫೋಟೋ; ಪ್ರಶಾಂತ್ ಸಂಬರಗಿ ವಿರುದ್ಧ ದೂರು
ಪ್ರಶಾಂತ್ ಸಂಬರಗಿ- ಪ್ರಕಾಶ್ ರೈ
Follow us
ದಿಲೀಪ್​, ಚೌಡಹಳ್ಳಿ
| Updated By: ರಾಜೇಶ್ ದುಗ್ಗುಮನೆ

Updated on: Feb 01, 2025 | 10:17 AM

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಇದಕ್ಕೆ ದೇಶ-ವಿದೇಶದಿಂದ ಭಕ್ತರು ಆಗಮಿಸಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಅದೇ ರೀತಿ ಅನೇಕ ಸೆಲೆಬ್ರಿಟಿಗಳು ನೀರಿನಲ್ಲಿ ಮಿಂದೇಳುತ್ತಿದ್ದಾರೆ. ಹೀಗಿರುವಾಗಲೇ ಕೆಲವು ಎಐ ಫೋಟೋಗಳು, ಕೆಲ ಫೇಕ್ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಬಹುಭಾಷಾ ನಟ ಪ್ರಕಾಶ್ ರೈ ಅವರು ಕುಂಭಮೇಳದಲ್ಲಿ ಸ್ನಾನ ಮಾಡುತ್ತಿರುವ ರೀತಿ ಫೋಟೋ ಇತ್ತು. ಈ ರೀತಿ ಫೋಟೋ ವೈರಲ್ ಮಾಡಿದ ಪ್ರಶಾಂತ್ ಸಂಬರಗಿ ವಿರುದ್ಧ ಪ್ರಕಾಶ್ ರಾಜ್ ಕೇಸ್ ದಾಖಲು ಮಾಡಿದ್ದಾರೆ.

ಪ್ರಕಾಶ್ ರಾಜ್ ಅವರು ಎಡಪಂಕ್ತೀಯ ಚಿಂತನೆಗಳಿಂದ ಪ್ರಭಾವಿತರಾದವರು. ಅವರು ಬಿಜೆಪಿ ನಿರ್ಧಾರಗಳನ್ನು ಸಾಕಷ್ಟು ಟೀಕೆ ಮಾಡುತ್ತಾ ಇರುತ್ತಾರೆ. ಈಗ ಅವರು ಕುಂಭ ಮೇಳದಲ್ಲಿ ಭಾಗಿ ಆಗಿ ಪವಿತ್ರ ಸ್ನಾನ ಮಾಡುತ್ತಿರುವ ರೀತಿಯಲ್ಲಿ ಎಐ ಫೋಟೋ ಮಾಡಲಾಗಿತ್ತು. ಪೋಟೋ ವೈರಲ್ ಮಡಿದ ಪ್ರಶಾಂತ್ ಸಂಬರಗಿ ವಿರುದ್ಧ ಪ್ರಕಾಶ್ ರೈ ದೂರು ನೀಡಿದ್ದಾರೆ.

ಈ ಫೋಟೋ ನಿಜ ಎಂದು ನಂಬಿಸುವ ಕೆಲಸ ಕೆಲವರಿಂದ ಆಗಿದೆ. ಇಲ್ಲದ್ದನ್ನು ಇರುವ ರೀತಿಯಲ್ಲಿ ತೋರಿಸುತ್ತಿರುವ ಬಗ್ಗೆ ಪ್ರಕಾಶ್ ರೈಗೆ ಅಸಮಾಧಾನ ಇದೆ. ಹೀಗಾಗಿ, ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಆಗಮಿಸಿ ದೂರು ಕೊಟ್ಟಿದ್ದಾರೆ. ‘ತಮ್ಮ ಪೋಟೋವನ್ನು ಎಐ ತಂತ್ರಜ್ಞಾನ ಬಳಸಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು’ ಎಂದು ಪ್ರಕಾಶ್ ರೈ ದೂರಿನಲ್ಲಿ ಕೋರಿದ್ದಾರೆ.

‘ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುವುದರಲ್ಲಿ ತಪ್ಪಿಲ್ಲ. ಅದು ಅವರ ನಂಬಿಕೆ. ನನಗೆ ದೇವರ ಮೇಲೆ ನಂಬಿಕೆ ಇಲ್ಲ. ನನಗೆ ಮನ್ಯುಷ್ಯರ ಮೇಲೆ ನಂಬಿಕೆ. ದೇವರಿಲ್ಲದೆ ಬದುಕಬಹುದು ಆದರೆ, ಮನುಷ್ಯರಿಲ್ಲದೆ ಬದುಕಲು ಸಾಧ್ಯವಿಲ್ಲ. ಹಾಗಾಂತ ಅವರ ನಂಬಿಕೆಯನ್ನ ಪ್ರಶ್ನೆ ಮಾಡಲ್ಲ. ಅದನ್ನ ರಾಜಕಾರಣಕ್ಕೆ ಬಳಸಿಕೊಳ್ಳುವುದು ತಪ್ಪು’ ಎಂದಿದ್ದಾರೆ ಪ್ರಕಾಶ್ ರೈ.

ಇದನ್ನೂ ಓದಿ: ಕಣಿವೆ, ಕಾಡು, ಸಮುದ್ರದ ಪಕ್ಕ ಮನೆ, ನದಿ ಸಮೀಪ ತೋಟ; ನನಸಾಗಿದೆ ಪ್ರಕಾಶ್ ರೈ ಕನಸು

ಪ್ರಕಾಶ್ ರೈ ಕಳೆದ ಮೂರುವರೆ ವರ್ಷಗಳಿಂದ ನಟನಾ ರಂಗದಲ್ಲಿ ಬ್ಯುಸಿ ಇದ್ದಾರೆ. ವಿಲನ್ ಆಗಿ, ಹೀರೋ ಆಗಿ, ಪೋಷಕ ಪಾತ್ರಗಳ ಮೂಲಕ ಅವರು ಗಮನ ಸೆಳೆದಿದ್ದಾರೆ. ಚಿಂತನೆಗಳ ವಿಚಾರಕ್ಕೆ ಕೆಲವರು ಅವರನ್ನು ಟೀಕೆ ಮಾಡಿದ್ದೂ ಇದೆ. ಆದರೆ, ಇದಕ್ಕೆ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ತಮ್ಮ ಕಾಯಕವನ್ನು ಅವರು ಮುಂದುವರಿಸಿದ್ದಾರೆ. ಹತ್ತಾರು ಸಿನಿಮಾಗಳು ಅವರ ಕೈಯಲ್ಲಿ ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯುವಕ
ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯುವಕ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?