MAA ಚುನಾವಣೆಯಲ್ಲಿ ಪ್ರಕಾಶ್​ ರಾಜ್​ಗೆ ಉಂಟಾಗಲಿದೆ ಹಿನ್ನಡೆ? ಕಳಚಿತು ಮೆಗಾ ಕುಟುಂಬದ ಬೆಂಬಲ

MAA ಚುನಾವಣಾ ಕಣದಲ್ಲಿ ಪ್ರಕಾಶ್​ ರಾಜ್​, ಮಂಚು ವಿಷ್ಣು, ಹೇಮಾ, ಜೀವಿತಾ ಮೊದಲಾದವರಿದ್ದಾರೆ ಎನ್ನಲಾಗಿದೆ. ಪ್ರಕಾಶ್​ ಅವರು ಇತ್ತೀಚೆಗೆ ಸಮಿತಿ ಒಂದನ್ನು ರಚನೆ ಮಾಡಿದ್ದರು. ಈ ಸಮಿತಿಗೆ ಜೀವಿತಾ ಸೇರ್ಪಡೆ ಆಗಿದ್ದಾರೆ.

MAA ಚುನಾವಣೆಯಲ್ಲಿ ಪ್ರಕಾಶ್​ ರಾಜ್​ಗೆ ಉಂಟಾಗಲಿದೆ ಹಿನ್ನಡೆ? ಕಳಚಿತು ಮೆಗಾ ಕುಟುಂಬದ ಬೆಂಬಲ
ಪ್ರಕಾಶ್​ ರೈ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 06, 2021 | 3:38 PM

ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ (MAA) ಅಧ್ಯಕ್ಷ ಸ್ಥಾನಕ್ಕೆ ಭಾರೀ ಸ್ಪರ್ಧೆ ಏರ್ಪಟ್ಟಿದೆ. ಹಿರಿಯ ನಟ ಪ್ರಕಾಶ್​ ರಾಜ್​ (ಪ್ರಕಾಶ್ ರೈ) ಸೇರಿ ಅನೇಕರು ಚುನಾವಣಾ ಕಣದಲ್ಲಿದ್ದಾರೆ. ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವ ಬಗ್ಗೆ ಅನೇಕರು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಪ್ರಕಾಶ್​ ರಾಜ್​ ನಮ್ಮವರಲ್ಲ ಎನ್ನುವ ಆರೋಪವನ್ನು ಅವರು ಮಾಡುತ್ತಿದ್ದಾರೆ. ಈ ಮಧ್ಯೆ, ಪ್ರಕಾಶ್​ ರಾಜ್​ಗೆ ಚುನಾವಣೆಯಲ್ಲಿ ಹಿನ್ನಡೆ ಆಗುವ ಬೆಳವಣಿಗೆಯೊಂದು ನಡೆದಿದೆ.

MAA ಚುನಾವಣಾ ಕಣದಲ್ಲಿ ಪ್ರಕಾಶ್​ ರಾಜ್​, ಮಂಚು ವಿಷ್ಣು, ಹೇಮಾ, ಜೀವಿತಾ ಮೊದಲಾದವರಿದ್ದಾರೆ ಎನ್ನಲಾಗಿದೆ. ಪ್ರಕಾಶ್​ ಅವರು ಇತ್ತೀಚೆಗೆ ಸಮಿತಿ ಒಂದನ್ನು ರಚನೆ ಮಾಡಿದ್ದರು. ಈ ಸಮಿತಿಗೆ ಜೀವಿತಾ ಸೇರ್ಪಡೆ ಆಗಿದ್ದಾರೆ. ಇದು ಮೆಗಾ ಕುಟುಂಬದ ಅನುಯಾಯಿ​ ಬಂಡ್ಲ ಗಣೇಶ್​ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ, ಅವರು ಪ್ರಕಾಶ್​ ರಾಜ್​ಗೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದಾರೆ. ಇದರಿಂದ ಪ್ರಕಾಶ್​ ರಾಜ್​ಗೆ ಹಿನ್ನಡೆ ಆಗುವ ಸಾಧ್ಯತೆ ಗೋಚರವಾಗಿದೆ.

‘ಪ್ರಕಾಶ್​ ರಾಜ್​ ವಿರುದ್ಧ ನನಗೆ ಯಾವುದೇ ಕೋಪವಿಲ್ಲ. ಜೀವಿತಾ ಅವರು ಪ್ರಕಾಶ್​ ರಾಜ್​ ಪರ ನಿಂತಿದ್ದಾರೆ. ಇದರಿಂದ ನಾನು ರಾತ್ರಿಯಿಡೀ ನಿದ್ರಿಸಿಲ್ಲ. ಚಿರಂಜೀವಿ ವಿರುದ್ಧ ಜೀವಿತಾ ಈ ಮೊದಲು ಆರೋಪಗಳನ್ನು ಮಾಡಿದ್ದರು. ಹೀಗಾಗಿ, ನಾನು ಜೀವಿತಾ ಅವರನ್ನು ವಿರೋಧಿಸುತ್ತಿದ್ದೇನೆ’ ಎಂದಿದ್ದಾರೆ ಗಣೇಶ್​.

‘ಕಳೆದ 2 ವರ್ಷಗಳಲ್ಲಿ MAAನ ಪ್ರಧಾನ ಕಾರ್ಯದರ್ಶಿಯಾಗಿ ಜೀವಿತಾ ಏನನ್ನೂ ಮಾಡಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಳ್ಳಲು ಸಾಧ್ಯವಿಲ್ಲ. ನಾನು ಚುನಾವಣೆಗೆ ಸ್ಪರ್ಧಿಸುವುದಲ್ಲದೆ ಖಚಿತವಾಗಿಯೂ ಗೆಲ್ಲುತ್ತೇನೆ’ ಎಂದು ಭವಿಷ್ಯ ನುಡಿದಿದ್ದಾರೆ.

ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ (MAA) ಅಧ್ಯಕ್ಷ ಸ್ಥಾನಕ್ಕೆ ಪ್ರಕಾಶ್​ ರಾಜ್ ಸ್ಪರ್ಧಿಸುತ್ತಿದ್ದಾರೆ​. ಆದರೆ ಅವರು ಈ ಚುನಾವಣೆಯಲ್ಲಿ ನಿಲ್ಲಬಾರದು ಎಂದು ಕೆಲವರು ಆಕ್ಷೇಪ ಎತ್ತಿದ್ದಾರೆ. ಪ್ರಕಾಶ್​ ರಾಜ್​ ಮೂಲತಃ ಕನ್ನಡದವರು. ಅವರ ಮಾತೃಭಾಷೆ ಕನ್ನಡ. ಹಾಗಾಗಿ ಅವರು ಎಂಎಎ ಎಲೆಕ್ಷನ್​ನಲ್ಲಿ ಸ್ಪರ್ಧಿಸುವುದು ಸರಿಯಲ್ಲ ಎಂದು ಕೆಲವರು ತಕರಾರು ತೆಗೆದಿದ್ದಾರೆ.

ಇದನ್ನೂ ಓದಿ: ಕನ್ನಡಿಗ ಎಂದು ಪ್ರಕಾಶ್​ ರಾಜ್​ರನ್ನು ಹೊರಗೆ ಇಡುತ್ತಿರುವ ಟಾಲಿವುಡ್​; ‘ನಮ್ಮವನಲ್ಲ’ ಎಂದವರಿಗೆ ನಟನ ಉತ್ತರ ಏನು?

ಮತ್ತೊಮ್ಮೆ ಮದುವೆಯಾದ ನಟ ಪ್ರಕಾಶ್​ ರಾಜ್​ !-ಎಲ್ಲವೂ ಮಗನಿಗಾಗಿಯಂತೆ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ