AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಾಯಣದ ಬಗ್ಗೆ ಪ್ರಕಾಶ್ ರಾಜ್ ಮಾತನಾಡಿದ ವಿಡಿಯೋ ವೈರಲ್; ತೀವ್ರ ಟೀಕೆ

ಖ್ಯಾತ ನಟ ಪ್ರಕಾಶ್ ರಾಜ್ ಅವರು ರಾಮಾಯಣದ ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅನೇಕರು ಕಟುವಾಗಿ ಟೀಕಿಸಿದ್ದಾರೆ. ಪ್ರಕಾಶ್ ರಾಜ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕೂಡ ಕೆಲವರು ಒತ್ತಾಯಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ರಾಮಾಯಣದ ಬಗ್ಗೆ ಪ್ರಕಾಶ್ ರಾಜ್ ಮಾತನಾಡಿದ ವಿಡಿಯೋ ವೈರಲ್; ತೀವ್ರ ಟೀಕೆ
Prakash Raj Image Credit source: Kerala Literature Festival
ಮದನ್​ ಕುಮಾರ್​
|

Updated on: Apr 16, 2026 | 6:47 PM

Share

ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಅವರು ರಾಜಕೀಯದ ವಿಷಯಗಳ ಬಗ್ಗೆ ಆಗಾಗ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ಬಿಜೆಪಿ ನಿಲುವುಗಳನ್ನು ಅವರು ಆಗಾಗ ವಿರೋಧಿಸುತ್ತಾರೆ. ಆ ಕಾರಣದಿಂದ ಅವರನ್ನು ವಿರೋಧಿಗಳು ಟ್ರೋಲ್ ಮಾಡುತ್ತಾರೆ. ಕೇರಳ ಸಾಹಿತ್ಯ ಉತ್ಸವದ ವೇದಿಕೆಯಲ್ಲಿ ಪ್ರಕಾಶ್ ರಾಜ್ ಅವರು ಮಾತನಾಡಿದ್ದ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ರಾಮಾಯಣದ (Ramayana) ಬಗ್ಗೆ ಮಾತನಾಡಿದ್ದಾರೆ. ಈಗಿನ ರಾಜಕೀಯ ಪರಿಸ್ಥಿತಿಯ ವಿಡಂಬನೆಗೆ ಅವರು ರಾಮಾಯಣವನ್ನು ಉದಾಹರಣೆಯಾಗಿ ತೆಗೆದುಕೊಂಡಿದ್ದಾರೆ. ಆದರೆ ಅವರು ಮಾತನಾಡಿದ್ದನ್ನು ಅನೇಕರು ಖಂಡಿಸುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರುವ ಅನೇಕರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ಪ್ರಕಾಶ್ ರಾಜ್ ಹೇಳುವುದೇನೆಂದರೆ ರಾಮನು ಉತ್ತರ ಭಾರತೀಯ, ರಾವಣನು ದಕ್ಷಿಣ ಭಾರತೀಯ ಆದಿವಾಸಿ. ರಾಮನು ಹಣ್ಣುಗಳನ್ನು ಕದ್ದ ಕಾರಣದಿಂದ ಅವರ ನಡುವಿನ ಸಂಘರ್ಷವು ಆರಂಭವಾಯಿತು. ನೀವು ಇತಿಹಾಸವನ್ನು ಚರ್ಚ್‌ನಿಂದ ಕಲಿತರೆ ಇಂತಹದ್ದೇ ಆಗುತ್ತದೆ’ ಎಂದು ನೆಟ್ಟಿಗರೊಬ್ಬರು ಟೀಕೆ ಮಾಡಿದ್ದಾರೆ.

‘ಪ್ರಕಾಶ್ ರಾಜ್ ತನ್ನದೇ ರಾಮಾಯಣವನ್ನು ರಚಿಸಿಕೊಂಡು, ಉತ್ತರ ಭಾರತದ ರಾಮನು ದಕ್ಷಿಣ ಭಾರತದ ಆದಿವಾಸಿಯಾದ ರಾವಣನಿಂದ ಹಣ್ಣುಗಳನ್ನು ಕದ್ದನೆಂದು ಹೇಳುತ್ತಿದ್ದಾರೆ. ಇದಕ್ಕೆ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಮತ್ತೊಬ್ಬರು ಒತ್ತಾಯಿಸಿದ್ದಾರೆ. ಟ್ವಿಟರ್​​ನಲ್ಲಿ ಈ ವಿಷಯ ಈಗ ಟ್ರೆಂಡ್ ಆಗುತ್ತಿದೆ.

‘ಹಿಂದೂಗಳನ್ನು ಅಪಹಾಸ್ಯ ಮಾಡಲು ಪ್ರಕಾಶ್ ರಾಜ್ ರಾಮಾಯಣದ ಕಲ್ಪಿತ ಆವೃತ್ತಿಯನ್ನು ವಿವರಿಸುತ್ತಾರೆ. ಅವರು ಈ ನಿಂದನೀಯ ಕಥೆಯನ್ನು ಕೇವಲ ಗೋಮಾಂಸ ಸೇವನೆಯನ್ನು ಉತ್ತೇಜಿಸಲು ಮತ್ತು ಉತ್ತರ-ದಕ್ಷಿಣ ವಿಭಜನೆಯನ್ನು ಸೃಷ್ಟಿಸಲು ಮಾಡಿದ್ದಾರೆ. ಇಂತಹ ವ್ಯಕ್ತಿಗೆ ದೃಶ್ಯಂ 3 ಮತ್ತು ವಾರಾಣಸಿ ಸಿನಿಮಾಗಳಲ್ಲಿ ಕೆಲಸ ಕೊಟ್ಟ ಅಜಯ್ ದೇವಗನ್ ಮತ್ತು ಎಸ್‌ಎಸ್ ರಾಜಮೌಳಿ ಅವರಿಗೆ ನಾಚಿಕೆ ಆಗಬೇಕು’ ಎಂದು ಇನ್ನೊಬ್ಬರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

‘ನಾನು ಪ್ರಕಾಶ್ ರಾಜ್ ಅವರಿಂದ ಏನನ್ನೂ ನಿರೀಕ್ಷಿಸುವುದಿಲ್ಲ. ಆದರೆ ಪ್ರೇಕ್ಷಕರಲ್ಲಿ ಇದ್ದ ಜನರು ಏನು ಮಾಡುತ್ತಿದ್ದರು? ಅವರ ಅಸಂಬದ್ಧ ಮಾತುಗಳಿಗೆ ಚಪ್ಪಾಳೆ ಹೊಡೆಯುತ್ತಾ ಪ್ರೋತ್ಸಾಹಿಸುತ್ತಿದ್ದರು. ಯಾಕೆ ಯಾರೂ ಎದ್ದು ವಿರೋಧಿಸಲಿಲ್ಲ? ಅಲ್ಲಿ ಹಿಂದೂಗಳು ಯಾರೂ ಇರಲಿಲ್ಲವೇ?’ ಎಂದು ನೆಟ್ಟಿಗರೊಬ್ಬರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ನಟ ಪ್ರಕಾಶ್ ರಾಜ್ ತಾಯಿ ನಿಧನ: ಶಾಂತಿನಗರ ಚರ್ಚ್​​ನಲ್ಲಿ ಪ್ರಾರ್ಥನೆ: ವಿಡಿಯೋ

ಈ ರೀತಿಯ ಅನೇಕ ಟೀಕೆಗಳು ಎದುರಾಗಿವೆ. ಇವುಗಳಿಗೆ ಪ್ರಕಾಶ್ ರಾಜ್ ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇತ್ತೀಚೆಗೆ ಪ್ರಕಾಶ್ ರಾಜ್ ಅವರ ತಾಯಿ ನಿಧನರಾದಾಗ ಅಂತ್ಯ ಸಂಸ್ಕಾರ ಮಾಡಿದ ರೀತಿಯ ಬಗ್ಗೆಯೂ ಅನೇಕರು ಟೀಕಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ