ರಾಮಾಯಣದ ಬಗ್ಗೆ ಮಾತನಾಡಿದ ಪ್ರಕಾಶ್ ರಾಜ್ ವಿರುದ್ಧ ಬಿತ್ತು ಕ್ರಿಮಿನಲ್ ಕೇಸ್

ಪ್ರಕಾಶ್ ರಾಜ್ ರಾಮಾಯಣದ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿ ಆಗಿದ್ದಾರೆ. ರಾಮ-ರಾವಣರ ಪಾತ್ರಗಳ ಬಗ್ಗೆ ಅವರು ಸೃಷ್ಟಿಸಿದ ಹೊಸ ಕಥೆ ಹಾಗೂ ಹಿಂದಿ ಹೇರಿಕೆ ವಿರೋಧಿಸಿ ಮಾಡಿದ ಟೀಕೆಗಳು ಜನರ ಭಾವನೆಗಳಿಗೆ ಧಕ್ಕೆ ತಂದಿವೆ. ಪರಿಣಾಮವಾಗಿ, ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ ಎಂದು ವರದಿಯಾಗಿದೆ. ಈ ಘಟನೆ ಅವರ ವಿವಾದಗಳ ಸರಣಿಗೆ ಮತ್ತೊಂದು ಸೇರ್ಪಡೆಯಾಗಿದೆ.

ರಾಮಾಯಣದ ಬಗ್ಗೆ ಮಾತನಾಡಿದ ಪ್ರಕಾಶ್ ರಾಜ್ ವಿರುದ್ಧ ಬಿತ್ತು ಕ್ರಿಮಿನಲ್ ಕೇಸ್
ಪ್ರಕಾಶ್ ರಾಜ್

Updated on: Apr 17, 2026 | 10:50 AM

ಪ್ರಕಾಶ್ ರಾಜ್ ಅವರು (Prakash Raj) ಒಂದಲ್ಲ ಒಂದು ವಿಷಯಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಇತ್ತೀಚೆಗೆ ಅವರು ಸಿನಿಮಾ ಮಾಡೋದು ಕಡಿಮೆ ಆಗಿದೆ. ಆದರೆ, ವಿವಾದಗಳು ಕಡಿಮೆ ಆಗಿಲ್ಲ. ಒಬ್ಬಲ್ಲಾ ಒಬ್ಬರ ಭಾವನೆಗೆ ಧಕ್ಕೆ ತರುವ ಕೆಲಸ ಅವರಿಂದ ಆಗುತ್ತಲೇ ಇದೆ. ಈಗ ಅವರು ವಿವಾದಕ್ಕೆ ಗುರಿಯಾಗಿದ್ದಾರೆ. ರಾಮಾಯಣದ ಕಥೆಯನ್ನು ಬೇರೆ ರೀತಿಯಲ್ಲಿ ಹೇಳಿ ಕ್ರಿಮಿನಲ್ ಕೇಸ್ ಹಾಕಿಸಿಕೊಂಡಿದ್ದಾರೆ ಎಂದು ವರದಿ ಆಗಿದೆ.

ಪ್ರಕಾಶ್ ರಾಜ್ ಅವರು ವೇದಿಕೆ ಮೇಲೆ ಮಾತನಾಡುತ್ತಿದ್ದರು. ರಾಮ ಉತ್ತರ ಭಾರತದವನು ಹಾಗೂ ರಾವಣ ದಕ್ಷಿಣ ಭಾರತದ ಆದಿವಾಸಿ ಎಂದಿದ್ದರು ಪ್ರಕಾಶ್ ರಾಜ್​. ರಾಮ ಹಣ್ಣನ್ನು ಕಿತ್ತು ತಿಂದಿದ್ದರಿಂದ ಇಬ್ಬರ ಮಧ್ಯೆ ಕಿತ್ತಾಟ ಶುರುವಾಯಿತು ಎಂದು ಹೇಳಿ ಚರ್ಚೆ ಹುಟ್ಟುಹಾಕಿದ್ದಾರೆ. ಈಗ ಪ್ರಕಾಶ್ ರಾಜ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ ಎಂದು ಹೇಳಲಾಗುತ್ತಾ ಇದೆ.

ಪ್ರಕಾಶ್ ರಾಜ್ ಹೇಳಿಕೆ ಏನು?

ರಾಮ, ಲಕ್ಷ್ಮಣ ಹಾಗೂ ಸೀತೆ ದಕ್ಷಿಣ ಭಾರತಕ್ಕೆ ಬರುತ್ತಾರೆ. ಬಂದಾಗ ಲಕ್ಷ್ಮಣನಿಗೆ ಹಸಿವಾಗಿರುತ್ತದೆ. ಅಲ್ಲಿ ಹಣ್ಣಿನ ತೋಟ ಒಂದಿರುತ್ತದೆ. ಹೋಗಿ ಹಣ್ಣನ್ನು ತಿನ್ನೋಣ ಎಂದು ಲಕ್ಷ್ಮಣ ಹೇಳುತ್ತಾನೆ. ಎಲ್ಲರೂ ಹಣ್ಣು ತಿನ್ನುತ್ತಾರೆ. ಅಲ್ಲಿಗೆ ಬರುವ ಶೂರ್ಪನಖ, ಅಣ್ಣ ರಾವಣ ಯಾರೋ ಹಣ್ಣನ್ನು ತಿನ್ನುತ್ತಿದ್ದಾರೆ ಎನ್ನುತ್ತಾಳೆ. ಆಗ ರಾವಣ, ಅವರಿಗೆ ಹಸಿವಾಗಿದೆ ತಿನ್ನಲಿ ಎನ್ನುತ್ತಾನೆ’ ಎಂದು ಕಥೆ ಆರಂಭಿಸಿದ್ದಾರೆ ಪ್ರಕಾಶ್ ರಾಜ್.

ಇದನ್ನೂ ಓದಿ: ರಾಮಾಯಣದ ಬಗ್ಗೆ ಪ್ರಕಾಶ್ ರಾಜ್ ಮಾತನಾಡಿದ ವಿಡಿಯೋ ವೈರಲ್; ತೀವ್ರ ಟೀಕೆ

‘ಆ ಬಳಿಕ ರಾವಣ ಹಣ ಕೇಳುತ್ತಾನೆ. ರಾಮ ಇಲ್ಲ ಎನ್ನುತ್ತಾನೆ. 20 ಪರ್ಸೆಂಟ್ ಡಿಸ್ಕೌಂಟ್ ಕೊಡ್ತೀನಿ ಎಂದು ರಾವಣ ಹೇಳುತ್ತಾನೆ. ಹಣವೇ ಇಲ್ಲ ಎಂದಮೇಲೆ ಡಿಸ್ಕೌಂಟ್ ಕೊಟ್ಟು ಏನು ಪ್ರಯೋಜನ? ಅದೇ ರೀತಿ, ಹಿಂದಿ ಹೇರಿಕೆ ಮಾಡಬೇಡಿ. ಇಲ್ಲಿ ಬಂದು ನೀವು ಮಲಯಾಳಂ ಕಲಿಯಿರಿ. ನಾವು ಬೀಫ್ ಫೆಸ್ಟ್ ಮಾಡುತ್ತೇವೆ’ ಎಂದಿದ್ದಾರೆ ಪ್ರಕಾಶ್ ರಾಜ್. ಈ ವಿಷಯಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಾಗಿದೆ ಎಂದು ಹೇಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:06 am, Fri, 17 April 26

ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us