ನನ್ನ ಹೇಳೀಕೆ ತಿರುಚಿದ್ದೀರಿ: ಪವನ್ ಕಲ್ಯಾಣ್​ಗೆ ಪ್ರಕಾಶ್ ರೈ ತಿರುಗೇಟು

Prakash Raj-Pawan Kalyan: ಪ್ರಕಾಶ್ ರೈ ವಿರುದ್ಧ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಆಕ್ರೋಶ ವ್ಯಕ್ತಪಡಿಸಿದ್ದರು. ಈಗಾಗಲೇ ನೋವಿನಲ್ಲಿರುವ ನಮ್ಮ ಭಾವನೆಗಳನ್ನು ಅಪಹಾಸ್ಯ ಮಾಡಬೇಡಿ ಎಂದಿದ್ದರು. ಪವನ್​ರ ಹೇಳಿಕೆಗೆ ಪ್ರಕಾಶ ರೈ ಪ್ರತಿಕ್ರಿಯೆ ನೀಡಿದ್ದಾರೆ.

ನನ್ನ ಹೇಳೀಕೆ ತಿರುಚಿದ್ದೀರಿ: ಪವನ್ ಕಲ್ಯಾಣ್​ಗೆ ಪ್ರಕಾಶ್ ರೈ ತಿರುಗೇಟು
Follow us
|

Updated on: Sep 24, 2024 | 6:13 PM

ತಿರುಪತಿ ಲಡ್ಡು ಮಾಡಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆಯಾಗಿರುವ ಪ್ರಕರಣ ತೀವ್ರವಾಗಿ ಚರ್ಚೆಯಾಗುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಟ, ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಯಾರೇ ಆಗಲಿ ಶಿಕ್ಷೆಗೆ ಒಳಪಡುತ್ತಾರೆ ಎಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದ ಪವನ್ ಕಲ್ಯಾಣ್, ‘ಸನಾತನ ಧರ್ಮ ರಕ್ಷಣಾ ಬೋರ್ಡ್’ ಅನ್ನು ರಾಷ್ಟ್ರಮಟ್ಟದಲ್ಲಿ ಸ್ಥಾಪನೆ ಮಾಡಬೇಕೆಂದು ಸಹ ಹೇಳಿದ್ದರು. ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದ ಪ್ರಕಾಶ್ ರೈ, ‘ಆತಂಕವನ್ನು ಹೆಚ್ಚು ಮಾಡಬೇಡಿ, ದೇಶದಲ್ಲಿ ಈಗಿರುವ ಕೋಮು ಗಲಭೆ ಸಾಕು’ ಎಂದಿದ್ದರು.

ಇಂದು ಮಾಧ್ಯಮಗಳ ಬಳಿ ಇದೇ ವಿಷಯ ಮಾತನಾಡುತ್ತಾ, ಪ್ರಕಾಶ್ ರೈ ಹೆಸರು ಉಲ್ಲೇಖಿಸಿದ ಪವನ್ ಕಲ್ಯಾಣ್, ‘ಪ್ರಕಾಶ್ ರೈ ಅವರೇ ನೀವು ಪಾಠ ಕಲಿಯಬೇಕಿದೆ. ನಿಮ್ಮ ಬಗ್ಗೆ ಗೌರವ ಇದೆ. ಆದರೆ ಪ್ರಕಾಶ್ ರೈ ಮಾತ್ರವಲ್ಲ ಜಾತ್ಯಾತೀತರು ಎಂದು ಹೇಳಿಕೊಳ್ಳುವ ಎಲ್ಲರೂ ಪಾಠ ಕಲಿಯಬೇಕಿದೆ. ಜಾತ್ಯಾತೀತತೆಯ ಹೆಸರಲ್ಲಿ ನೀವು ಹದ್ದುಗಳನ್ನು ಮೀರುತ್ತಿದ್ದೀರಿ. ನಾವು ತೀವ್ರ ನೋವಿನಲ್ಲಿದ್ದೀವಿ. ನಮ್ಮ ಭಾವನೆಗಳ ಬಗ್ಗೆ ಅಪಹಾಸ್ಯ ಮಾಡಬೇಡಿ. ಈಗಾಗಲೇ ನಾವು ತೀವ್ರ ನೋವಿನಲ್ಲಿದ್ದೇವೆ. ಇದು ತಮಾಷೆಯ ವಿಷಯ ಅಲ್ಲ. ಇದು ಸಾಕು, ಸನಾತನ ಧರ್ಮದ ಬಗ್ಗೆ ಮಾತನಾಡುವ ಮುಂಚೆ ಸಾವಿರ ಬಾರಿ ಯೋಚಿಸಿ, ಅಯ್ಯಪ್ಪ ಸ್ವಾಮಿಯ ಬಗ್ಗೆ ಮಾತನಾಡುತ್ತೀರಿ, ಗಣೇಶನ ಬಗ್ಗೆ ಜೋಕುಗಳು ಮಾಡುತ್ತೀರಿ. ಇದೇ ರೀತಿ ಇಸ್ಲಾಂ ಬಗ್ಗೆ ಮಾತನಾಡಬಲ್ಲಿರಾ? ಏಸು ಬಗ್ಗೆ ಮಾತನಾಡಬಲ್ಲಿರಾ?’ ಎಂದು ಪವನ್ ಕಲ್ಯಾಣ್ ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ:‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ

ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಕಾಶ್ ರೈ, ವಿಡಿಯೋ ಒಂದನ್ನು ಟ್ವೀಟ್ ಮಾಡಿದ್ದಾರೆ, ‘ಪವನ್ ಕಲ್ಯಾಣ್ ಅವರೇ ಈಗಷ್ಟೆ ನಾನು ನಿಮ್ಮ ಪ್ರೆಸ್ ಮೀಟ್ ವಿಡಿಯೋ ನೋಡಿದೆ. ನಾನು ಹೇಳಿದ್ದೇನು? ನೀವು ಅದನ್ನು ಹೇಗೆ ಅಪಾರ್ಥ ಮಾಡಿಕೊಂಡು ತಿರುಚುತ್ತಿದ್ದೀರಿ. ನಾನೀಗ ಶೂಟಿಂಗ್​ಗಾಗಿ ವಿದೇಶಕ್ಕೆ ಬಂದಿದ್ದೀನಿ. 30ನೇ ತಾರೀಖಿನ ನಂತರ ಭಾರತಕ್ಕೆ ಬಂದು ನಿಮ್ಮ ಪ್ರತಿ ಮಾತಿಗೂ ಉತ್ತರ ಕೊಡುತ್ತೇನೆ. ಅಲ್ಲಿಯವರೆಗೆ ಸಾಧ್ಯವಾದರೆ ನಾನು ಮಾಡಿದ ಟ್ವೀಟ್ ಏನೆಂಬುದನ್ನು ದಯವಿಟ್ಟು ಇನ್ನೊಮ್ಮೆ ಗಮನಿಸಿ’ ಎಂದಿದ್ದಾರೆ ಪ್ರಕಾಶ್ ರೈ.

ಪವನ್ ಕಲ್ಯಾಣ್​ರ ‘ಸನಾತನ ಧರ್ಮ ರಕ್ಷಣಾ ಬೋರ್ಡ್’ ಸ್ಥಾಪನೆಯ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿದ್ದ ಪ್ರಕಾಶ್ ರೈ, ‘ನೀವು ಡಿಸಿಎಂ ಆಗಿರುವ ರಾಜ್ಯದಲ್ಲಿಯೇ ಈ ಘಟನೆ (ಲಡ್ಡು ವಿವಾದ) ನಡೆದಿದೆ. ಕೂಡಲೇ ತನಿಖೆ ನಡೆಸಿ, ಯಾರು ತಪ್ಪಿತಸ್ಥರೋ ಅವರ ವಿರುದ್ಧ ಕ್ರಮ ಜರುಗಿಸಿ. ಏಕೆ ನೀವು ಆತಂಕವನ್ನು ಹರಡುತ್ತಿದ್ದೀರಿ, ಇದನ್ನು ರಾಷ್ಟ್ರೀಯ ವಿಷಯವನ್ನಾಗಿ ಮಾಡುತ್ತಿದ್ದೀರಿ? ಕೇಂದ್ರದಲ್ಲಿರುವ ನಿಮ್ಮ ಗೆಳೆಯರ ಕೃಪೆಯಿಂದ, ಈಗ ದೇಶದಲ್ಲಿ ಇರುವ ಕೋಮುವೈಷಮ್ಯವೇ ಸಾಕಾಗಿದೆ’ ಎಂದಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು
ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಫ್ಲಿಪ್​ಕಾರ್ಟ್​ ಬಿಗ್ ಬಿಲಿಯನ್ ಡೇ ಸೇಲ್​ ₹49,999ಕ್ಕೆ ಆ್ಯಪಲ್ ಐಫೋನ್ 15
ಫ್ಲಿಪ್​ಕಾರ್ಟ್​ ಬಿಗ್ ಬಿಲಿಯನ್ ಡೇ ಸೇಲ್​ ₹49,999ಕ್ಕೆ ಆ್ಯಪಲ್ ಐಫೋನ್ 15
ಸ್ಪರ್ಧಿಗಳ ಪಟ್ಟಿ ಸುದೀಪ್​ಗೆ ಸಿಗೋದು ಯಾವಾಗ? ಉತ್ತರಿಸಿದ ಕಿಚ್ಚ
ಸ್ಪರ್ಧಿಗಳ ಪಟ್ಟಿ ಸುದೀಪ್​ಗೆ ಸಿಗೋದು ಯಾವಾಗ? ಉತ್ತರಿಸಿದ ಕಿಚ್ಚ
ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು
ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು