AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

370 ರೂ. ಬಿರಿಯಾನಿ ವಿವಾದ: ಮುಖ ಮುಚ್ಚಿಕೊಂಡು ತಿರುಗಾಡುವ ಹಂತಕ್ಕೆ ಬಂದ ಪ್ರಣೀತ್ ಮೋರೆ

ಈ ಮೊದಲು ಭಾರಿ ಹುಮ್ಮಸ್ಸಿನಲ್ಲಿ ಜೋಕ್ ಮಾಡುತ್ತಿದ್ದ ಪ್ರಣೀತ್ ಮೋರೆ ಈಗ ಮುಖ ಮುಚ್ಚಿಕೊಳ್ಳುವ ಪರಿಸ್ಥಿತಿ ಬಂದಿದೆ. ಮಾಧ್ಯಮದವರು ಕೇಳಿದ ಪ್ರಶ್ನೆಗೂ ಕೂಡ ಅವರು ಉತ್ತರ ನೀಡಿಲ್ಲ. ತಮ್ಮ ಶೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯವಾಗಿ ಕಾಮಿಡಿ ಮಾಡಿದ್ದಕ್ಕೆ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗವು ವಿಚಾರಣೆಗೆ ಕರೆಸಿದೆ.

370 ರೂ. ಬಿರಿಯಾನಿ ವಿವಾದ: ಮುಖ ಮುಚ್ಚಿಕೊಂಡು ತಿರುಗಾಡುವ ಹಂತಕ್ಕೆ ಬಂದ ಪ್ರಣೀತ್ ಮೋರೆ
Pranit More Image Credit source: PTI
ಮದನ್​ ಕುಮಾರ್​
|

Updated on: Jun 23, 2026 | 4:39 PM

Share

ನವದೆಹಲಿ: ಇಂಟರ್‌ನೆಟ್‌ನಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ‘370 ರೂಪಾಯಿ ಬಿರಿಯಾನಿ’ (Rs 370 Biryani) ವಿವಾದಕ್ಕೆ ಸಂಬಂಧಿಸಿದಂತೆ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಪ್ರಣೀತ್ ಮೋರೆ ಹಾಗೂ ಹಿಮಾಂಶು ಜಾಂಗ್ರಾ ಇತ್ತೀಚೆಗೆ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾಗಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಹಂಚಿಕೊಂಡಿರುವ ವಿಡಿಯೋದಲ್ಲಿ, ಆಯೋಗದ ಕಚೇರಿಗೆ ಆಗಮಿಸಿದ ಪ್ರಣೀತ್ ಮೋರೆ (Pranit More) ಮಾಸ್ಕ್ ಧರಿಸಿದ್ದು, ಮಾಧ್ಯಮ ಪ್ರತಿನಿಧಿಗಳು ಕೇಳಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದೆ ಮೌನವಾಗಿ ಕಚೇರಿಯೊಳಗೆ ಹೆಜ್ಜೆ ಹಾಕಿದ್ದಾರೆ. ಜೂನ್ 22ರ ಸಂಜೆ 4 ಗಂಟೆಗೆ ಇಬ್ಬರ ವಿಚಾರಣೆಯನ್ನು ಆಯೋಗ ನಿಗದಿಪಡಿಸಿತ್ತು.

ಕಾಮಿಡಿ ಶೋಗಳಲ್ಲಿ ಮಹಿಳೆಯರ ಘನತೆಗೆ ಧಕ್ಕೆ ತರುವಂತಹ ಮತ್ತು ಅತ್ಯಾಚಾರ, ಕೊಲೆಯಂತಹ ಗಂಭೀರ ಅಪರಾಧಗಳನ್ನು ಮನರಂಜನೆಯ ವಸ್ತುವನ್ನಾಗಿ ಬಿಂಬಿಸುವ ಪ್ರವೃತ್ತಿಯ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗ ತೀವ್ರ ಕಳವಳ ವ್ಯಕ್ತಪಡಿಸಿದೆ. ಮೂಲಗಳ ಪ್ರಕಾರ, ಆಯೋಗದ ಮುಂದೆ ಇಬ್ಬರೂ ಕ್ಷಮೆಯಾಚಿಸಿದರಾದರೂ, ಆಯೋಗ ಅದನ್ನು ತಿರಸ್ಕರಿಸಿದೆ ಎನ್ನಲಾಗಿದೆ.

ವಿಚಾರಣೆ ವೇಳೆ ಆಯೋಗದ ಅಧ್ಯಕ್ಷೆ ವಿಜಯಾ ರಾಹತ್ಕರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ‘ಸೃಜನಶೀಲ ಸ್ವಾತಂತ್ರ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಆಯೋಗ ಬೆಂಬಲಿಸುತ್ತದೆ. ಆದರೆ, ಕಾಮಿಡಿ ಹೆಸರಿನಲ್ಲಿ ಮಹಿಳೆಯರ ಘನತೆಗೆ ಧಕ್ಕೆ ತರುವುದನ್ನು ಅಥವಾ ಗಂಭೀರ ಅಪರಾಧಗಳನ್ನು ಸಾಮಾನ್ಯೀಕರಿಸುವುದನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ಕಡಕ್ ಸಂದೇಶ ನೀಡಿದ್ದಾರೆ.

ಏನಿದು 370 ರೂಪಾಯಿ ಬಿರಿಯಾನಿ ವಿವಾದ?

ಜೂನ್ ತಿಂಗಳ ಆರಂಭದಲ್ಲಿ ಪ್ರಣೀತ್ ಮೋರೆ ಅವರ ಕಾಮಿಡಿ ಶೋ ಒಂದರಲ್ಲಿ ಪ್ರೇಕ್ಷಕರ ಸಾಲಿನಲ್ಲಿದ್ದ ಹಿಮಾಂಶು ಜಾಂಗ್ರಾ ಎಂಬ 23 ವರ್ಷದ ಯುವಕನು ಮಹಿಳೆಯರ ಬಗ್ಗೆ ಅತ್ಯಂತ ಕೆಟ್ಟದಾಗಿ ಮಾತನಾಡಿದ್ದ. ‘ನಾನು ಯುವತಿಯೊಬ್ಬಳನ್ನು ಡೇಟ್‌ಗೆ ಕರೆದೊಯ್ದು 370 ರೂಪಾಯಿ ನೀಡಿ ಚಿಕನ್ ಬಿರಿಯಾನಿ ಕೊಡಿಸಿದ್ದೆ. ಹಾಗಾಗಿ ಆ ಹೂಡಿಕೆಗೆ ನನಗೆ ಲಾಭ ಸಿಗಬೇಕಿತ್ತು’ ಎಂದು ಆತ ಹೇಳಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: 370 ರೂ. ಬಿರಿಯಾನಿ ವಿವಾದ: ಇನ್‌ಸ್ಟಾಗ್ರಾಮ್ ಖಾತೆ ಡಿಆಕ್ಟಿವೇಟ್ ಮಾಡಿದ ಪ್ರಣಿತ್ ಮೋರೆ

ವಿವಾದ ದೊಡ್ಡದಾಗುತ್ತಿದ್ದಂತೆ ಹಿಮಾಂಶು ತನ್ನ ಸೋಶಿಯಲ್ ಮೀಡಿಯಾ ಖಾತೆಗಳನ್ನು ಡಿಲೀಟ್ ಮಾಡಿ ಕ್ಷಮೆ ಕೇಳಿದ್ದ. ಇತ್ತ ಕಾಮಿಡಿಯನ್ ಪ್ರಣೀತ್ ಕೂಡ ‘ಆತನ ಕಾಮೆಂಟ್ ನನ್ನ ವೈಯಕ್ತಿಕ ನಿಲುವಲ್ಲ’ ಎಂದು ಕ್ಷಮೆಯಾಚಿಸಿದ್ದರಾದರೂ, ರಾಷ್ಟ್ರೀಯ ಮಹಿಳಾ ಆಯೋಗವು ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ
ಮಹಾಲಯ ಅಮಾವಾಸ್ಯೆಯಂದೇ ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!
ಮಹಾಲಯ ಅಮಾವಾಸ್ಯೆಯಂದೇ ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!