Prashanth Neel: ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಚಿತ್ರಕ್ಕೆ 1000 ಕೋಟಿ ರೂಪಾಯಿ ಬಜೆಟ್?

ಪ್ರಶಾಂತ್ ನೀಲ್ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ಸಿಕ್ಕಿದೆ. ಅವರು ನಿರ್ಮಾಪಕ ದಿಲ್ ರಾಜು ಜೊತೆ ಸಿನಿಮಾ ಮಾಡುತ್ತಿದ್ದಾರೆ. ಇದನ್ನು ದಿಲ್ ರಾಜು ಕೂಡ ಖಚಿತಪಡಿಸಿದ್ದಾರೆ.

Prashanth Neel: ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಚಿತ್ರಕ್ಕೆ 1000 ಕೋಟಿ ರೂಪಾಯಿ ಬಜೆಟ್?
ಪ್ರಶಾಂತ್ ನೀಲ್

Updated on: Apr 12, 2023 | 7:15 AM

ಮುಖ್ಯಾಂಶಗಳು

  • ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇರುವ ಪ್ರಶಾಂತ್ ನೀಲ್
  • ಮತ್ತೊಮ್ಮೆ ಪ್ರಭಾಸ್ ಜೊತೆ ಕೆಲಸ ಮಾಡಲಿದ್ದಾರೆ ಪ್ರಶಾಂತ್
  • 1000 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತೆ ಸಿನಿಮಾ

ಪ್ರಶಾಂತ್ ನೀಲ್ (Prashanth Neel) ಅವರು ತಮ್ಮ ಕಸುಬುದಾರಿಕೆ ಏನು ಎಂಬುದನ್ನು ಜಗತ್ತಿಗೆ ತೋರಿಸಿದ್ದಾರೆ. ಅವರು ತೆರೆಗೆ ತಂದ ‘ಕೆಜಿಎಫ್ 2’ ಸಿನಿಮಾ (KGF 2 Movie) ಸೂಪರ್ ಹಿಟ್ ಆಯಿತು. ಈ ಚಿತ್ರ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿತು. ಕೇವಲ ನೂರಾರು ಕೋಟಿರೂಪಾಯಿ ಕಲೆಕ್ಷನ್ ಮಾಡುತ್ತಿದ್ದ ಕನ್ನಡ ಸಿನಿಮಾ ಮೊದಲ ಬಾರಿಗೆ 1200+ ಕೋಟಿ ರೂಪಾಯಿ ಗಳಿಕೆ ಮಾಡಿತು. ಈ ಕಾರಣಕ್ಕೆ ಪ್ರಶಾಂತ್ ನೀಲ್ ಕಾಲ್​ಶೀಟ್ ಪಡೆಯಲು ಅನೇಕ ನಿರ್ಮಾಪಕರು ಕಾದು ನಿಂತಿದ್ದಾರೆ. ಆದರೆ, ಅಷ್ಟು ಸುಲಭದಲ್ಲಿ ಅವರು ಸಿಗುವವರಲ್ಲ. ಈಗ ಪ್ರಶಾಂತ್ ನೀಲ್ 1000 ಕೋಟಿ ರೂಪಾಯಿ ಬಜೆಟ್​ನ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ ಎನ್ನುವ ಮಾತು ಹರಿದಾಡಿದೆ.

ಪ್ರಶಾಂತ್ ನೀಲ್ ಸದ್ಯ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾದ ಒಂದಷ್ಟು ಪೋಸ್ಟರ್ ಹಾಗೂ ರಿಲೀಸ್ ಡೇಟ್ ಘೋಷಣೆ ಆಗಿದ್ದು ಬಿಟ್ಟರೆ ಮತ್ತಾವುದೇ ಅಪ್​ಡೇಟ್ ಸಿಕ್ಕಿಲ್ಲ. ಹೀಗಿರುವಾಗಲೇ ಪ್ರಶಾಂತ್ ನೀಲ್ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ಸಿಕ್ಕಿದೆ. ಅವರು ನಿರ್ಮಾಪಕ ದಿಲ್ ರಾಜು ಜೊತೆ ಸಿನಿಮಾ ಮಾಡುತ್ತಿದ್ದಾರೆ. ಇದನ್ನು ದಿಲ್ ರಾಜು ಕೂಡ ಖಚಿತಪಡಿಸಿದ್ದಾರೆ.

ಪಿಂಕ್​ವಿಲ್ಲಾಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ದಿಲ್ ರಾಜು, ‘ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಮತ್ತೊಮ್ಮೆ ಒಂದಾಗುತ್ತಿದ್ದಾರೆ. ಇದೊಂದು ಪೌರಾಣಿಕ ಸಿನಿಮಾ. ತೆಲುಗು ಇಂಡಸ್ಟ್ರಿಯಲ್ಲಿ ಈವರೆಗೆ  ಮಾಡದೇ ಇರುವಷ್ಟು ದೊಡ್ಡ ಬಜೆಟ್​ನಲ್ಲಿ ಈ ಸಿನಿಮಾ ಸಿದ್ಧಗೊಳ್ಳಲಿದೆ’ ಎಂದಿದ್ದಾರೆ. ಈಗಾಗಲೇ ಪ್ರಭಾಸ್ ನಟನೆಯ ‘ಆದಿಪುರುಷ್​’ ಚಿತ್ರ 550 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿದೆ. ಆ ಬಜೆಟ್​ನೂ ಮೀರಿದ್ದು ಎಂದರೆ 1000 ಕೋಟಿ ರೂಪಾಯಿ ಎಂದು ಫ್ಯಾನ್ಸ್ ಊಹಿಸುತ್ತಿದ್ದಾರೆ.

ಇದನ್ನೂ ಓದಿ: ಮಹೇಶ್ ಬಾಬು, ಪವನ್ ಕಲ್ಯಾಣ್ ಇಂದಾಗಿ ಒಂದೇ ವರ್ಷದಲ್ಲಿ 25 ಕೋಟಿ ನಷ್ಟವಾಗಿತ್ತು: ನಿರ್ಮಾಪಕ ದಿಲ್ ರಾಜು

ಈ ಚಿತ್ರಕ್ಕೆ ಈಗಾಗಲೇ ಸ್ಕ್ರಿಪ್ಟ್ ಫೈನಲ್ ಆಗಿದೆ ಎನ್ನಲಾಗುತ್ತಿದೆ. ‘ಸಲಾರ್ ಬಳಿಕ ಪ್ರಶಾಂತ್ ನೀಲ್ ಅವರು ಜೂನಿಯರ್ ಎನ್​ಟಿಆರ್ ಜೊತೆ ಸಿನಿಮಾ ಮಾಡಲಿದ್ದಾರೆ. ಈ ಚಿತ್ರದ ಬಳಿಕ ಪ್ರಶಾಂತ್ ನೀಲ್ ಈ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ. ಸದ್ಯ ಇದೆಲ್ಲವೂ ಪ್ರಾಥಮಿಕ ಹಂತದಲ್ಲಿದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಯಶ್ ಜೊತೆ ಸಿನಿಮಾ ಮಾಡಲಿದ್ದಾರೆ ತೆಲುಗಿನ ಖ್ಯಾತ ನಿರ್ಮಾಪಕ​; ವಿಷಯ ಖಚಿತಪಡಿಸಿದ ದಿಲ್ ರಾಜು

ಅಂದಹಾಗೆ ‘ಸಲಾರ್’ ಸಿನಿಮಾ ಸೆಪ್ಟೆಂಬರ್​ನಲ್ಲಿ ತೆರೆಗೆ ಬರಲಿದೆ. ಜೂನಿಯರ್ ಎನ್​ಟಿಆರ್ ಅವರು ತಮ್ಮ 30ನೇ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಕೆಲಸಗಳು ಮುಗಿಯೋಕೆ ಇನ್ನೂ ಒಂದು ವರ್ಷ ಬೇಕಾಗಬಹುದು. ಆ ಬಳಿಕ ಅವರು ಪ್ರಶಾಂತ್ ನೀಲ್ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ. ಹೀಗಾಗಿ ಪ್ರಶಾಂತ್ ನೀಲ್ ಮತ್ತು ಪ್ರಭಾಸ್ ಮತ್ತೆ ಕೈ ಜೋಡಿಸೋದು ವಿಳಂಬ ಆಗಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us