AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅತ್ಯಂತ ಹಿಂಸಾತ್ಮಕ ವ್ಯಕ್ತಿ ಬರುತ್ತಿದ್ದಾನೆ’; ‘ಸಲಾರ್’ ರಿಲೀಸ್ ದಿನಾಂಕ ತಿಳಿಸಿದ ಹೊಂಬಾಳೆ ಫಿಲ್ಮ್ಸ್​

Salaar Movie Release Date: ‘ಸಲಾರ್’ ಚಿತ್ರವನ್ನು ‘ಕೆಜಿಎಫ್ 2’ಗಿಂತಲೂ ಅದ್ದೂರಿಯಾಗಿ ನಿರ್ಮಾಣ ಮಾಡುವ ಕೆಲಸವನ್ನು ಹೊಂಬಾಳೆ ಫಿಲ್ಮ್ಸ್ ಮಾಡುತ್ತಿದೆ. ಈಗ ಸಿನಿಮಾ ರಿಲೀಸ್ ದಿನಾಂಕ ರಿವೀಲ್ ಆಗಿದೆ.

‘ಅತ್ಯಂತ ಹಿಂಸಾತ್ಮಕ ವ್ಯಕ್ತಿ ಬರುತ್ತಿದ್ದಾನೆ’; ‘ಸಲಾರ್’ ರಿಲೀಸ್ ದಿನಾಂಕ ತಿಳಿಸಿದ ಹೊಂಬಾಳೆ ಫಿಲ್ಮ್ಸ್​
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on:Apr 06, 2023 | 7:54 AM

Share

ಮುಖ್ಯಾಂಶಗಳು

  • ಸಲಾರ್ ಸಿನಿಮಾ ರಿಲೀಸ್ ದಿನಾಂಕ ರಿವೀಲ್
  • ಪ್ರಭಾಸ್ ಹೀರೋ ಆಗಿ ನಟಿಸಿರೋ ಸಿನಿಮಾ
  • ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾಗೆ ಸಖತ್ ಬೇಡಿಕೆ

ಪ್ರಭಾಸ್ ನಟನೆಯ, ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ ‘ಸಲಾರ್’ ಸಿನಿಮಾ ಬಗ್ಗೆ ಅಪ್​ಡೇಟ್ ತಿಳಿಯಲು ಫ್ಯಾನ್ಸ್ ಕಾದಿದ್ದರು. ಆದರೆ, ಸಿನಿಮಾ ಬಗ್ಗೆ ಚಿತ್ರತಂಡ ಯಾವುದೇ ಅಪ್​ಡೇಟ್ ಬಿಟ್ಟುಕೊಟ್ಟಿರಲಿಲ್ಲ. ಕಳೆದ ವರ್ಷ ಚಿತ್ರದ ಟೀಸರ್ ರಿಲೀಸ್ ಆಗಲಿದೆ ಎಂದು ಹೇಳಲಾಗಿತ್ತು. ಅದು ಕೂಡ ನಿಜವಾಗಿಲ್ಲ. ಈಗ ‘ಸಲಾರ್’ ಸಿನಿಮಾದ (Salaar Movie) ರಿಲೀಸ್ ಡೇಟ್ ರಿವೀಲ್ ಆಗಿದೆ. ಸಿನಿಮಾ ಅಪ್​​ಡೇಟ್​ಗಾಗಿ ಕಾದಿದ್ದ ಫ್ಯಾನ್ಸ್​ಗೆ ಖುಷಿ ಸುದ್ದಿ ಸಿಕ್ಕಿದೆ. ‘ಕೆಜಿಎಫ್ 2’ ಬಳಿಕ ಪ್ರಶಾಂತ್ ನೀಲ್ ತೆರೆಗೆ ತರುತ್ತಿರುವ ಮುಂದಿನ ಸಿನಿಮಾ ಇದು ಎನ್ನುವ ಕಾರಣಕ್ಕೂ ನಿರೀಕ್ಷೆ ಹೆಚ್ಚಿದೆ.

‘ಕೆಜಿಎಫ್ 2’ ಚಿತ್ರವನ್ನು ಬಹಳ ಅದ್ದೂರಿಯಾಗಿ ಕಟ್ಟಿಕೊಟ್ಟರು ಪ್ರಶಾಂತ್ ನೀಲ್. ಇದಾದ ಬಳಿಕ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸಿನಿಮಾ ‘ಸಲಾರ್’. ಈ ಚಿತ್ರವನ್ನು ‘ಕೆಜಿಎಫ್ 2’ಗಿಂತಲೂ ಅದ್ದೂರಿಯಾಗಿ ನಿರ್ಮಾಣ ಮಾಡುವ ಕೆಲಸವನ್ನು ಹೊಂಬಾಳೆ ಫಿಲ್ಮ್ಸ್ ಮಾಡುತ್ತಿದೆ. ‘ಸಲಾರ್​’ ಈ ವರ್ಷ ಸೆಪ್ಟೆಂಬರ್ 28ರಂದು ರಿಲೀಸ್ ಆಗಲಿದೆ. ‘ಅತ್ಯಂತ ಹಿಂಸಾತ್ಮಕ ವ್ಯಕ್ತಿ ಬರುತ್ತಿದ್ದಾನೆ’ ಎಂದು ಹೊಂಬಾಳೆ ಫಿಲ್ಮ್ಸ್ ಬರೆದುಕೊಂಡಿದೆ.

ರಿಲೀಸ್ ದಿನಾಂಕ ರಿವೀಲ್ ಮಾಡಲು ವಿಡಿಯೋ ಒಂದನ್ನು ಪೋಸ್ಟ್ ಮಾಡಲಾಗಿದೆ. ಈ ವಿಡಿಯೋದಲ್ಲಿ ಸಿನಿಮಾದ ಪೋಸ್ಟರ್ಸ್​​ ಇದೆ. ಇದೆಲ್ಲವೂ ಈ ಮೊದಲು ರಿಲೀಸ್ ಆದ ಪೋಸ್ಟರ್​ಗಳೇ. ಹೀಗಾಗಿ, ಹೊಸ ಪೋಸ್ಟರ್​ಗಳನ್ನು ತಂಡ ರಿವೀಲ್ ಮಾಡಬಹುದಿತ್ತು ಎನ್ನುವ ಅಭಿಪ್ರಾಯ ಕೆಲವರಿಂದ ವ್ಯಕ್ತವಾಗಿದೆ. ಒಟ್ಟಿನಲ್ಲಿ ಸಿನಿಮಾ ರಿಲೀಸ್ ದಿನಾಂಕ ರಿವೀಲ್ ಆದ ಖುಷಿಯಲ್ಲಿ ಫ್ಯಾನ್ಸ್ ಇದ್ದಾರೆ.

ಇದನ್ನೂ ಓದಿ: SSMB28: ಪ್ರಭಾಸ್, ರಾಮ್ ಚರಣ್ ಜೊತೆ ಮಹೇಶ್ ಬಾಬು ಕ್ಲ್ಯಾಶ್​; ಮತ್ತೆ ಸ್ಟಾರ್​ ವಾರ್?

ಪ್ರಭಾಸ್ ಅವರು ‘ಸಲಾರ್’ ಸಿನಿಮಾದಲ್ಲಿ ದ್ವಿಪಾತ್ರ ಮಾಡುತ್ತಿದ್ದಾರೆ ಎಂದು ವರದಿ ಆಗಿದೆ. ಸಿನಿಮಾದ ಶೂಟಿಂಗ್​ಗಾಗಿ ಇಡೀ ತಂಡ ಇಟಲಿಗೆ ತೆರಳಿದೆ ಎಂದು ಇತ್ತೀಚೆಗೆ ವರದಿ ಆಗಿತ್ತು. ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಈ ಕಾರಣಕ್ಕೂ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಆ್ಯಕ್ಷನ್​ ಪ್ರಿಯರು ಈ ಸಿನಿಮಾ ರಿಲೀಸ್​​ಗಾಗಿ ಕಾದಿದ್ದಾರೆ.

ಇದನ್ನೂ ಓದಿ: ವಿದೇಶದಲ್ಲಿ ‘ಆರ್​ಆರ್​ಆರ್​’ ಚಿತ್ರಕ್ಕಿಂತಲೂ ಹೆಚ್ಚು ಬೇಡಿಕೆ ಸೃಷ್ಟಿಸಿಕೊಂಡ ‘ಸಲಾರ್​’; ಎಷ್ಟಾಯಿತು ಬಿಸ್ನೆಸ್​?

ಪ್ರಭಾಸ್ ಅವರು ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ‘ಸಲಾರ್​’ಗೂ ಮೊದಲು ಅವರ ನಟನೆಯ ‘ಆದಿಪುರುಷ್’ ರಿಲೀಸ್ ಆಗಲಿದೆ. ಈಗಾಗಲೇ ಟೀಸರ್ ಹಾಗೂ ಪೋಸ್ಟರ್​ ರಿಲೀಸ್ ಮಾಡಿ ‘ಆದಿಪುರುಷ್​’ ಸಿನಿಮಾ ಟೀಕೆಗೆ ಒಳಗಾಗಿದೆ. ಹೀಗಾಗಿ, ಈ ಚಿತ್ರ ಗೆಲ್ಲುತ್ತದೆಯೋ ಅಥವಾ ಇಲ್ಲವೋ ಎನ್ನುವ ಪ್ರಶ್ನೆ ಮೂಡಿದೆ. ‘ಸಲಾರ್​’ ಸಿನಿಮಾದಿಂದ ಪ್ರಭಾಸ್​ಗೆ ಗೆಲುವು ಪಕ್ಕಾ ಅನ್ನೋದು ಅನೇಕರ ವಾದ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:15 am, Thu, 6 April 23

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ