
ಪ್ರಭಾಸ್ ನಟನೆಯ, ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ ‘ಸಲಾರ್’ ಸಿನಿಮಾ ಬಗ್ಗೆ ಅಪ್ಡೇಟ್ ತಿಳಿಯಲು ಫ್ಯಾನ್ಸ್ ಕಾದಿದ್ದರು. ಆದರೆ, ಸಿನಿಮಾ ಬಗ್ಗೆ ಚಿತ್ರತಂಡ ಯಾವುದೇ ಅಪ್ಡೇಟ್ ಬಿಟ್ಟುಕೊಟ್ಟಿರಲಿಲ್ಲ. ಕಳೆದ ವರ್ಷ ಚಿತ್ರದ ಟೀಸರ್ ರಿಲೀಸ್ ಆಗಲಿದೆ ಎಂದು ಹೇಳಲಾಗಿತ್ತು. ಅದು ಕೂಡ ನಿಜವಾಗಿಲ್ಲ. ಈಗ ‘ಸಲಾರ್’ ಸಿನಿಮಾದ (Salaar Movie) ರಿಲೀಸ್ ಡೇಟ್ ರಿವೀಲ್ ಆಗಿದೆ. ಸಿನಿಮಾ ಅಪ್ಡೇಟ್ಗಾಗಿ ಕಾದಿದ್ದ ಫ್ಯಾನ್ಸ್ಗೆ ಖುಷಿ ಸುದ್ದಿ ಸಿಕ್ಕಿದೆ. ‘ಕೆಜಿಎಫ್ 2’ ಬಳಿಕ ಪ್ರಶಾಂತ್ ನೀಲ್ ತೆರೆಗೆ ತರುತ್ತಿರುವ ಮುಂದಿನ ಸಿನಿಮಾ ಇದು ಎನ್ನುವ ಕಾರಣಕ್ಕೂ ನಿರೀಕ್ಷೆ ಹೆಚ್ಚಿದೆ.
‘ಕೆಜಿಎಫ್ 2’ ಚಿತ್ರವನ್ನು ಬಹಳ ಅದ್ದೂರಿಯಾಗಿ ಕಟ್ಟಿಕೊಟ್ಟರು ಪ್ರಶಾಂತ್ ನೀಲ್. ಇದಾದ ಬಳಿಕ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸಿನಿಮಾ ‘ಸಲಾರ್’. ಈ ಚಿತ್ರವನ್ನು ‘ಕೆಜಿಎಫ್ 2’ಗಿಂತಲೂ ಅದ್ದೂರಿಯಾಗಿ ನಿರ್ಮಾಣ ಮಾಡುವ ಕೆಲಸವನ್ನು ಹೊಂಬಾಳೆ ಫಿಲ್ಮ್ಸ್ ಮಾಡುತ್ತಿದೆ. ‘ಸಲಾರ್’ ಈ ವರ್ಷ ಸೆಪ್ಟೆಂಬರ್ 28ರಂದು ರಿಲೀಸ್ ಆಗಲಿದೆ. ‘ಅತ್ಯಂತ ಹಿಂಸಾತ್ಮಕ ವ್ಯಕ್ತಿ ಬರುತ್ತಿದ್ದಾನೆ’ ಎಂದು ಹೊಂಬಾಳೆ ಫಿಲ್ಮ್ಸ್ ಬರೆದುಕೊಂಡಿದೆ.
ರಿಲೀಸ್ ದಿನಾಂಕ ರಿವೀಲ್ ಮಾಡಲು ವಿಡಿಯೋ ಒಂದನ್ನು ಪೋಸ್ಟ್ ಮಾಡಲಾಗಿದೆ. ಈ ವಿಡಿಯೋದಲ್ಲಿ ಸಿನಿಮಾದ ಪೋಸ್ಟರ್ಸ್ ಇದೆ. ಇದೆಲ್ಲವೂ ಈ ಮೊದಲು ರಿಲೀಸ್ ಆದ ಪೋಸ್ಟರ್ಗಳೇ. ಹೀಗಾಗಿ, ಹೊಸ ಪೋಸ್ಟರ್ಗಳನ್ನು ತಂಡ ರಿವೀಲ್ ಮಾಡಬಹುದಿತ್ತು ಎನ್ನುವ ಅಭಿಪ್ರಾಯ ಕೆಲವರಿಂದ ವ್ಯಕ್ತವಾಗಿದೆ. ಒಟ್ಟಿನಲ್ಲಿ ಸಿನಿಮಾ ರಿಲೀಸ್ ದಿನಾಂಕ ರಿವೀಲ್ ಆದ ಖುಷಿಯಲ್ಲಿ ಫ್ಯಾನ್ಸ್ ಇದ್ದಾರೆ.
ಇದನ್ನೂ ಓದಿ: SSMB28: ಪ್ರಭಾಸ್, ರಾಮ್ ಚರಣ್ ಜೊತೆ ಮಹೇಶ್ ಬಾಬು ಕ್ಲ್ಯಾಶ್; ಮತ್ತೆ ಸ್ಟಾರ್ ವಾರ್?
ಪ್ರಭಾಸ್ ಅವರು ‘ಸಲಾರ್’ ಸಿನಿಮಾದಲ್ಲಿ ದ್ವಿಪಾತ್ರ ಮಾಡುತ್ತಿದ್ದಾರೆ ಎಂದು ವರದಿ ಆಗಿದೆ. ಸಿನಿಮಾದ ಶೂಟಿಂಗ್ಗಾಗಿ ಇಡೀ ತಂಡ ಇಟಲಿಗೆ ತೆರಳಿದೆ ಎಂದು ಇತ್ತೀಚೆಗೆ ವರದಿ ಆಗಿತ್ತು. ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಈ ಕಾರಣಕ್ಕೂ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಆ್ಯಕ್ಷನ್ ಪ್ರಿಯರು ಈ ಸಿನಿಮಾ ರಿಲೀಸ್ಗಾಗಿ ಕಾದಿದ್ದಾರೆ.
ಇದನ್ನೂ ಓದಿ: ವಿದೇಶದಲ್ಲಿ ‘ಆರ್ಆರ್ಆರ್’ ಚಿತ್ರಕ್ಕಿಂತಲೂ ಹೆಚ್ಚು ಬೇಡಿಕೆ ಸೃಷ್ಟಿಸಿಕೊಂಡ ‘ಸಲಾರ್’; ಎಷ್ಟಾಯಿತು ಬಿಸ್ನೆಸ್?
ಪ್ರಭಾಸ್ ಅವರು ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ‘ಸಲಾರ್’ಗೂ ಮೊದಲು ಅವರ ನಟನೆಯ ‘ಆದಿಪುರುಷ್’ ರಿಲೀಸ್ ಆಗಲಿದೆ. ಈಗಾಗಲೇ ಟೀಸರ್ ಹಾಗೂ ಪೋಸ್ಟರ್ ರಿಲೀಸ್ ಮಾಡಿ ‘ಆದಿಪುರುಷ್’ ಸಿನಿಮಾ ಟೀಕೆಗೆ ಒಳಗಾಗಿದೆ. ಹೀಗಾಗಿ, ಈ ಚಿತ್ರ ಗೆಲ್ಲುತ್ತದೆಯೋ ಅಥವಾ ಇಲ್ಲವೋ ಎನ್ನುವ ಪ್ರಶ್ನೆ ಮೂಡಿದೆ. ‘ಸಲಾರ್’ ಸಿನಿಮಾದಿಂದ ಪ್ರಭಾಸ್ಗೆ ಗೆಲುವು ಪಕ್ಕಾ ಅನ್ನೋದು ಅನೇಕರ ವಾದ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:15 am, Thu, 6 April 23