ಒಟ್ಟಿಗೆ ಸಿನಿಮಾ ಮಾಡ್ತಾರಾ ದೇವರಕೊಂಡ-ಪ್ರಶಾಂತ್​ ನೀಲ್​? ಕೌತುಕ ಮೂಡಿಸಿತು ಹೊಸ ಫೋಟೋ

Prashanth Neel | Vijay Deverakonda: ಪ್ರಶಾಂತ್​ ನೀಲ್​ ಅವರು ಹೆಚ್ಚಾಗಿ ಟಾಲಿವುಡ್​ ವಲಯದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಅವರಿಗೆ ಅಲ್ಲಿನ ಸ್ಟಾರ್​ ನಟ-ನಟಿಯರು, ನಿರ್ದೇಶಕರು ಹಾಗೂ ನಿರ್ಮಾಪಕರ ಸ್ನೇಹ ಹೆಚ್ಚುತ್ತಿದೆ.

ಒಟ್ಟಿಗೆ ಸಿನಿಮಾ ಮಾಡ್ತಾರಾ ದೇವರಕೊಂಡ-ಪ್ರಶಾಂತ್​ ನೀಲ್​? ಕೌತುಕ ಮೂಡಿಸಿತು ಹೊಸ ಫೋಟೋ
ಲೈಗರ್​ ಪಾರ್ಟಿ
Follow us
| Updated By: ಮದನ್​ ಕುಮಾರ್​

Updated on:Aug 25, 2022 | 7:28 AM

ನಟ ವಿಜಯ್​ ದೇವರಕೊಂಡ (Vijay Deverakonda) ಅವರು ಬಹುಬೇಡಿಕೆಯ ಹೀರೋ ಆಗಿ ಗುರುತಿಸಿಕೊಂಡಿದ್ದಾರೆ. ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೇ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅವರಿಗೆ ಜನಪ್ರಿಯತೆ ಸಿಕ್ಕಿದೆ. ‘ಲೈಗರ್’ (Liger Movie) ಸಿನಿಮಾ ಬಿಡುಗಡೆಗೂ ಮುನ್ನವೇ ಅವರು ದೇಶಾದ್ಯಂತ ಇರುವ ಅಭಿಮಾನಿಗಳ ಪ್ರೀತಿಗೆ ಶರಣಾಗಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರಕ್ಕೆ ಭಾರಿ ಕಲೆಕ್ಷನ್​ ಆಗುವ ನಿರೀಕ್ಷೆ ಇದೆ. ಈ ನಡುವೆ ಒಂದು ಫೋಟೋ ವೈರಲ್​ ಆಗಿದೆ. ಆ ಫೋಟೋದಲ್ಲಿ ‘ಕೆಜಿಎಫ್​: ಚಾಪ್ಟರ್​ 2’ ನಿರ್ದೇಶಕ ಪ್ರಶಾಂತ್​ ನೀಲ್​ (Prashanth Neel) ಕಾಣಿಸಿಕೊಂಡಿದ್ದಾರೆ. ಅದನ್ನು ನೋಡಿದ ಎಲ್ಲರಿಗೂ ಅಚ್ಚರಿ ಮೂಡಿದೆ. ಪ್ರಶಾಂತ್​ ನೀಲ್​ ಮತ್ತು ವಿಜಯ್​ ದೇವರಕೊಂಡ ಒಟ್ಟಾಗಿ ಸಿನಿಮಾ ಮಾಡುವ ಪ್ಲ್ಯಾನ್​ ಮಾಡಿಕೊಂಡಿದ್ದಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಪ್ರಶಾಂತ್​ ನೀಲ್​ ಅವರು ‘ಕೆಜಿಎಫ್​ 2’ ಯಶಸ್ಸಿನ ನಂತರ ಬಹುಬೇಡಿಕೆಯ ನಿರ್ದೇಶಕನಾಗಿದ್ದಾರೆ. ಅವರೀಗ ‘ಸಲಾರ್​’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅದಾದ ಬಳಿಕ ಜೂನಿಯರ್​ ಎನ್​ಟಿಆರ್​ ಜೊತೆಗಿನ ಸಿನಿಮಾಗೆ ಅವರು ನಿರ್ದೇಶನ ಮಾಡಲಿದ್ದಾರೆ. ಆ ನಂತರ ಏನಾದರೂ ಅವರು ವಿಜಯ್​ ದೇವರಕೊಂಡ ಜೊತೆ ಸಿನಿಮಾ ಮಾಡುವ ಸಾಧ್ಯತೆ ಇದೆಯೇ ಎಂದು ಫ್ಯಾನ್ಸ್​ ಕೇಳುತ್ತಿದ್ದಾರೆ.

‘ಲೈಗರ್​’ ಸಿನಿಮಾ ಇಂದು (ಆಗಸ್ಟ್​ 25) ಅದ್ದೂರಿಯಾಗಿ ರಿಲೀಸ್​ ಆಗಿದೆ. ಬಿಡುಗಡೆಗೂ ಮುನ್ನ ತಂಡ ಪಾ​ರ್ಟಿ ಮಾಡಿದೆ. ಈ ಪಾರ್ಟಿಯಲ್ಲಿ ವಿಜಯ್​ ದೇವರಕೊಂಡ, ನಿರ್ದೇಶಕ ಪುರಿ ಜಗನ್ನಾಥ್​, ಚಾರ್ಮಿ ಕೌರ್​, ನಟಿ ಅನನ್ಯಾ ಪಾಂಡೆ ಸೇರಿದಂತೆ ತಂಡದ ಹಲವರು ಭಾಗಿ ಆಗಿದ್ದಾರೆ. ಅವರೆಲ್ಲರ ಜೊತೆ ಪ್ರಶಾಂತ್​ ನೀಲ್​ ಕೂಡ ಸೇರಿಕೊಂಡಿದ್ದಾರೆ. ‘ಲೈಗರ್​’ ತಂಡಕ್ಕೆ ಸಂಬಂಧವೇ ಇಲ್ಲದ ಪ್ರಶಾಂತ್​ ನೀಲ್​ ಈ ಪಾರ್ಟಿಯಲ್ಲಿ ಏನು ಮಾಡುತ್ತಿದ್ದಾರೆ ಎಂಬುದಕ್ಕೆ ಈಗ ಉತ್ತರ ಸಿಗಬೇಕಿದೆ.

ಇದನ್ನೂ ಓದಿ
Image
‘ಲೈಗರ್’ ಸಿನಿಮಾದ ಖಳನಟ ವಿಶ್​ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಇಂಟರೆಸ್ಟಿಂಗ್​ ಮಾಹಿತಿ
Image
Liger Movie: ಪುನೀತ್​ ಸಮಾಧಿಗೆ ವಿಜಯ್​ ದೇವರಕೊಂಡ ಭೇಟಿ; ‘ಲೈಗರ್​’ ಪ್ರಚಾರಕ್ಕೆ ಬೆಂಗಳೂರಿಗೆ ಬಂದ ನಟ
Image
Liger: ‘ಲೈಗರ್ ಸಿನಿಮಾ ಬ್ಲಾಕ್​ ಬಸ್ಟರ್​’: ರಿಲೀಸ್​ಗೂ ಮುನ್ನ ಘೋಷಿಸಿದ ವಿಜಯ್​ ದೇವರಕೊಂಡ
Image
Vijay Devarakonda: ಒಂದೇ ದಿನದಲ್ಲಿ 5 ಕೋಟಿ​ಗಿಂತ ಹೆಚ್ಚು ಬಾರಿ ವೀಕ್ಷಣೆ ಕಂಡ ‘ಲೈಗರ್​’ ಟ್ರೇಲರ್​

ಪ್ರಶಾಂತ್​ ನೀಲ್​ ಅವರು ಹೆಚ್ಚಾಗಿ ಟಾಲಿವುಡ್​ ವಲಯದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಅವರಿಗೆ ಅಲ್ಲಿನ ಸ್ಟಾರ್​ ನಟ-ನಟಿಯರು, ನಿರ್ದೇಶಕರು ಹಾಗೂ ನಿರ್ಮಾಪಕರ ಸ್ನೇಹ ಹೆಚ್ಚುತ್ತಿದೆ. ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​ ಸೇರಿದಂತೆ ಅನೇಕರ ಜೊತೆ ಅವರಿಗೆ ಆಪ್ತತೆ ಬೆಳೆದಿದೆ. ಈಗ ಅವರು ವಿಜಯ್​ ದೇವರಕೊಂಡ ಪಕ್ಕದಲ್ಲಿ ನಿಂತು ಪೋಸ್​ ನೀಡಿರುವುದು ಒಂದಷ್ಟು ಗುಮಾನಿಗೆ ಕಾರಣ ಆಗಿದೆ.

ಒಂದು ವೇಳೆ ಪ್ರಶಾಂತ್​ ನೀಲ್​ ಮತ್ತು ವಿಜಯ್​ ದೇವರಕೊಂಡ ಜೊತೆಯಾಗಿ ಸಿನಿಮಾ ಮಾಡಿದ್ದೇ ಹೌದಾದರೆ ಅಭಿಮಾನಿಗಳ ಪಾಲಿಗೆ ಹಬ್ಬವಾಗಲಿದೆ. ಸದ್ಯಕ್ಕೆ ಎಲ್ಲರ ಗಮನ ‘ಲೈಗರ್​’ ಸಿನಿಮಾ ಮೇಲಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಈ ಚಿತ್ರ ರಿಲೀಸ್​ ಆಗಿದೆ. ಆಗಸ್ಟ್​ 25ರ ಸಂಜೆಯಿಂದ ಹಿಂದಿ ವರ್ಷನ್​ ಪ್ರದರ್ಶನ ಶುರುವಾಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:28 am, Thu, 25 August 22

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?