‘ಸಲಾರ್​’ ಸಿನಿಮಾಗೆ ಸೀಕ್ವೆಲ್ ಬೇಕೋ ಅಥವಾ ಬೇಡವೋ ಎಂಬುದನ್ನು ನಿರ್ಧರಿಸಲಿದೆ ಈ ವಿಚಾರ

‘ಸಲಾರ್​’ ಚಿತ್ರಕ್ಕೆ ಸೀಕ್ವೆಲ್ ಸಿದ್ಧಗೊಳ್ಳಲಿದೆ ಎಂದು ಈ ಮೊದಲೇ ಹೇಳಲಾಗಿತ್ತು. ಆದರೆ, ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಕೆಲವರು ‘ಸಲಾರ್​’ಗೆ ಸೀಕ್ವೆಲ್ ಬರಲಿದೆ ಎಂದು ಹೇಳಿದರೆ, ಇನ್ನೂ ಕೆಲವರು ‘ಸಲಾರ್​’ಗೆ ಸೀಕ್ವೆಲ್ ಇಲ್ಲ ಎಂದು ಹೇಳುತ್ತಿದ್ದಾರೆ.

‘ಸಲಾರ್​’ ಸಿನಿಮಾಗೆ ಸೀಕ್ವೆಲ್ ಬೇಕೋ ಅಥವಾ ಬೇಡವೋ ಎಂಬುದನ್ನು ನಿರ್ಧರಿಸಲಿದೆ ಈ ವಿಚಾರ
ಪ್ರಭಾಸ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 24, 2022 | 1:48 PM

ಪ್ರಭಾಸ್ (Prabhas) ನಟನೆಯ ‘ಸಲಾರ್​’ ಸಿನಿಮಾ ಘೋಷಣೆ ಆಗಿ ಬಹಳ ಸಮಯ ಕಳೆದಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ವರ್ಷ ಏಪ್ರಿಲ್​ನಲ್ಲಿ ಸಿನಿಮಾ ರಿಲೀಸ್ ಆಗುತ್ತಿತ್ತು. ಆದರೆ, ಲೆಕ್ಕಾಚಾರ ಉಲ್ಟಾ ಆಗಿತ್ತು. ಕೊರೊನಾ ಅಲೆ​ ಹಾಗೂ ‘ಕೆಜಿಎಫ್ 2’ ಸಿನಿಮಾ ಕೆಲಸಗಳ ಕಾರಣದಿಂದ ಈ ಚಿತ್ರದ ಕೆಲಸಗಳು ವಿಳಂಬ ಆದವು. ಆದರೆ, ನಿರ್ದೇಶಕ ಪ್ರಶಾಂತ್ ನೀಲ್ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಅವರು ಸಾಕಷ್ಟು ಸಮಯ ತೆಗೆದುಕೊಂಡು ಅಚ್ಚುಕಟ್ಟಾಗಿ ‘ಸಲಾರ್​’ ಸಿನಿಮಾ (Salaar Movie) ಕೆಲಸಗಳನ್ನು ಮಾಡಿ ಮುಗಿಸುತ್ತಿದ್ದಾರೆ. ಈ ಮಧ್ಯೆ ‘ಸಲಾರ್​’ ಚಿತ್ರದ ಬಗ್ಗೆ ಹೊಸ ಅಪ್​ಡೇಟ್ ಒಂದು ಸಿಕ್ಕಿದೆ.

‘ಸಲಾರ್​’ ಚಿತ್ರಕ್ಕೆ ಸೀಕ್ವೆಲ್ ಸಿದ್ಧಗೊಳ್ಳಲಿದೆ ಎಂದು ಈ ಮೊದಲೇ ಹೇಳಲಾಗಿತ್ತು. ಆದರೆ, ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಕೆಲವರು ‘ಸಲಾರ್​’ಗೆ ಸೀಕ್ವೆಲ್ ಬರಲಿದೆ ಎಂದು ಹೇಳಿದರೆ, ಇನ್ನೂ ಕೆಲವರು ‘ಸಲಾರ್​’ಗೆ ಸೀಕ್ವೆಲ್ ಇಲ್ಲ ಎಂದು ಹೇಳುತ್ತಿದ್ದಾರೆ. ಈಗ ‘ಸಲಾರ್​ 2’ ಬರುತ್ತದೆಯೋ ಅಥವಾ ಇಲ್ಲವೋ ಎಂಬುದನ್ನು ನಿರ್ಧರಿಸುವ ವಿಚಾರ ಯಾವುದು ಎಂಬುದಕ್ಕೆ ಉತ್ತರ ಸಿಕ್ಕಿದೆ.

‘ಸಲಾರ್’ ಸಿನಿಮಾದ ಶೇ.85 ಶೂಟಿಂಗ್ ಪೂರ್ಣಗೊಂಡಿದೆ. ಜನವರಿ ವೇಳೆಗೆ ಪೂರ್ಣ ಪ್ರಮಾಣದ ಚಿತ್ರೀಕರಣ ಮುಗಿಯಲಿದೆಯಂತೆ. ನಂತರ ಆರು ತಿಂಗಳುಗಳ ಕಾಲ ವಿಎಫ್​ಎಕ್ಸ್ ಹಾಗೂ ಮೊದಲಾದ ಕೆಲಸಗಳಿಗಾಗಿ ಪ್ರಶಾಂತ್ ನೀಲ್ ಸಮಯ ಮೀಸಲಿಡಲಿದ್ದಾರೆ. ಕೊನೆಯ ಪ್ರತಿ ವೀಕ್ಷಿಸಿದ ಬಳಿಕವೇ ‘ಸಲಾರ್​’ಗೆ ಸೀಕ್ವೆಲ್ ಬೇಕೋ ಅಥವಾ ಬೇಡವೋ ಎಂದು ತಂಡ ನಿರ್ಧಾರ ಮಾಡಲಿದೆ. ಸಿನಿಮಾ ರಿಲೀಸ್ ವೇಳೆ ಈ ವಿಚಾರವನ್ನು ಟೀಂ ಘೋಷಣೆ ಮಾಡಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ:  ‘ಸಲಾರ್’ ಚಿತ್ರದ ಸೆಟ್​​ಗೆ ಹೊಸ ನಿಯಮ ಜಾರಿಗೆ ತಂದ ಪ್ರಶಾಂತ್ ನೀಲ್​; ಚಿಂತೆಗೊಳಗಾಯ್ತು ತಾಂತ್ರಿಕ ವರ್ಗ

‘ಕೆಜಿಎಫ್ 2​’ ರಿಲೀಸ್ ಆದ ನಂತರದಲ್ಲಿ ಪ್ರಶಾಂತ್ ನೀಲ್ ಕೆಲಸದ ಬಗ್ಗೆ ಎಲ್ಲರಿಗೂ ನಂಬಿಕೆ ಬಂದಿದೆ. ಹೀಗಾಗಿ, ಸಹಜವಾಗಿಯೇ ‘ಸಲಾರ್​’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ‘ಸಲಾರ್​’ ಸಿನಿಮಾ ಕನ್ನಡದ ‘ಉಗ್ರಂ’ ಚಿತ್ರದ ರಿಮೇಕ್ ಎಂದು ಹೇಳಲಾಗಿತ್ತು. ಆದರೆ, ಇದನ್ನು ಪ್ರಶಾಂತ್ ನೀಲ್ ಒಪ್ಪಿಕೊಂಡಿಲ್ಲ. ಪ್ರಭಾಸ್ ಅವರು ‘ಸಲಾರ್​’ ಮಾತ್ರವಲ್ಲದೆ ಇನ್ನೂ ಹಲವು ಪ್ರಾಜೆಕ್ಟ್​​ಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ