
‘ಕೆಜಿಎಫ್’ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿರುವ ಪ್ರಶಾಂತ್ ನೀಲ್ಗೆ ಪರಭಾಷೆಯಲ್ಲಿ ಬೇಡಿಕೆ ಹೆಚ್ಚುತ್ತಿದೆ. ಈಗಾಗಲೇ ಅವರು ಟಾಲಿವುಡ್ ಸ್ಟಾರ್ ನಟ ಪ್ರಭಾಸ್ಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅವರು ನಿರ್ದೇಶನ ಮಾಡುತ್ತಿರುವ ‘ಸಲಾರ್’ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಹೀಗಿರುವಾಗಲೇ ಅವರು ಜ್ಯೂ.ಎನ್ಟಿಆರ್ ಜತೆ ಕೈ ಜೋಡಿಸಿದ್ದಾರೆ.
ಟಾಲಿವುಡ್ ಸ್ಟಾರ್ ನಟ ಜ್ಯೂ. ಎನ್ಟಿಆರ್ಗೆ ಇಂದು (ಮೇ 20) ಜನ್ಮದಿನದ ಸಂಭ್ರಮ. ಅವರು ಇಂದು 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ಅಭಿಮಾನಿಗಳು ಶುಭಾಶಯಗಳ ಸುರಿಮಳೆ ಹರಿಸುತ್ತಿದ್ದಾರೆ. ಆರ್ಆರ್ಆರ್ ಚಿತ್ರತಂಡದಿಂದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಇದರ ಜತೆಗೆ ಮುಂದಿನ ಚಿತ್ರದ ಬಗ್ಗೆ ದೊಡ್ಡ ಅನೌನ್ಸ್ಮೆಂಟ್ ಕೂಡ ಆಗಿದೆ.
ಹೌದು, ಜ್ಯೂ. ಎನ್ಟಿಆರ್ ಮುಂದಿನ ಚಿತ್ರಕ್ಕೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳೋಕೆ ರೆಡಿ ಆಗಿದ್ದಾರೆ. ಈ ವಿಚಾರವನ್ನು ಖುದ್ದು ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣ ಸಂಸ್ಥೆ ಖಚಿತಪಡಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಮೈತ್ರಿ ಮೂವೀ ಮೇಕರ್ಸ್, ಮುಂದಿನ ಸಿನಿಮಾಗೆ ಪ್ರಶಾಂತ್ ನೀಲ್-ಜ್ಯೂ.ಎನ್ಟಿಆರ್ ಕೈಜೋಡಿಸುತ್ತಿರುವ ಸೂಚನೆ ನೀಡಿದ್ದಾರೆ. ಅಲ್ಲದೆ, ಈ ಸಿನಿಮಾ ದೊಡ್ಡ ಬಜೆಟ್ನಲ್ಲಿ ತಯಾರಾಗುತ್ತಿದೆ ಎಂದು ಹೇಳಲಾಗುತ್ತಿದೆ. ಈಗ ಸಿದ್ಧಗೊಳ್ಳುತ್ತಿರುವ ಚಿತ್ರದಲ್ಲೂ ಆ್ಯಕ್ಷನ್ಗಳು ಯತೇಚ್ಛವಾಗಿ ಇರಲಿದೆಯಂತೆ.
ಕೊರೊನಾ ವೈರಸ್ ಹಾವಳಿ ಮಿತಿ ಮೀರುವುದರಿಂದ ಈ ಬಾರಿ ಸಾರ್ವಜನಿಕವಾಗಿ ಸಂಭ್ರಮಾಚರಣೆ ಮಾಡಲಾಗುತ್ತಿಲ್ಲ. ಈ ವೇಳೆ ಕೇವಲ ಸೋಶಿಯಲ್ ಮೀಡಿಯಾ ಮೂಲಕ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಲಾಗುತ್ತಿದೆ. ಈಗಾಗಲೇ ಅಭಿಮಾನಿಗಳು ಕಾಮನ್ ಡಿಪಿ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.
ಜ್ಯೂ. ಎನ್ಟಿಆರ್ ಸದ್ಯ, ಆರ್ಆರ್ಆರ್ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ಎಸ್.ಎಸ್. ರಾಜಮೌಳಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಇನ್ನು, ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್-2 ರಿಲೀಸ್ಗೆ ರೆಡಿ ಇದೆ. ಸಲಾರ್ ಸಿನಿಮಾದ ಶೂಟಿಂಗ್ ನಡೆಯುತ್ತಿದೆ.
ಇದನ್ನೂ ಓದಿ: ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ್ದ ಜೂ. ಎನ್ಟಿಆರ್ಗೆ ಕೊರೊನಾ ಸೋಂಕು ದೃಢ
Jr NTR Birthday: ಜ್ಯೂ. ಎನ್ಟಿಆರ್ಗೆ ಜನ್ಮದಿನದ ಸಂಭ್ರಮ; ಟಾಲಿವುಡ್ ಹೀರೋಗೆ ಸಿಕ್ತಿದೆ ಭರ್ಜರಿ ಗಿಫ್ಟ್