AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashanth Neel: ಕನ್ನಡ, ತೆಲುಗು ಬಳಿಕ ತಮಿಳಿಗೆ ಹೊರಟ ಪ್ರಶಾಂತ್ ನೀಲ್, ಸ್ಟಾರ್ ನಟನಿಗೆ ಸಿನಿಮಾ

Prashanth Neel: ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾಗಳ ಮೂಲಕ ಹೊಸ ಅಲೆ ಎಬ್ಬಿಸಿದ ಪ್ರಶಾಂತ್ ನೀಲ್ ಈಗ ತೆಲುಗಿನಲ್ಲಿ ಬ್ಯುಸಿ, ತೆಲುಗಿನಲ್ಲಿ ಎರಡು ಸಿನಿಮಾಗಳನ್ನು ಬಾಕಿ ಇರಿಸಿಕೊಂಡಿರುವಾಗಲೇ ತಮಿಳಿಗೆ ಹಾರಲು ನೀಲ್ ಸಿದ್ಧವಾಗಿದ್ದಾರೆ.

Prashanth Neel: ಕನ್ನಡ, ತೆಲುಗು ಬಳಿಕ ತಮಿಳಿಗೆ ಹೊರಟ ಪ್ರಶಾಂತ್ ನೀಲ್, ಸ್ಟಾರ್ ನಟನಿಗೆ ಸಿನಿಮಾ
ಮಂಜುನಾಥ ಸಿ.
|

Updated on: Jul 24, 2024 | 11:25 AM

Share

ಪ್ರಶಾಂತ್ ನೀಲ್, ಕನ್ನಡ ಚಿತ್ರರಂಗಕ್ಕೆ ಮೂರು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿ ಚಿತ್ರರಂಗದ ದಿಕ್ಕು ಬದಲಿಸಿದ ನಿರ್ದೇಶಕ. ನೀಲ್ ನಿರ್ದೇಶನದ ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾಗಳು ಕನ್ನಡ ಚಿತ್ರರಂಗವನ್ನು ಇತರೆ ಚಿತ್ರರಂಗಗಳು ನೋಡುತ್ತಿದ್ದ ರೀತಿಯನ್ನೇ ಬದಲಿಸಿದವು. ಬಳಿಕ ತೆಲುಗಿಗೆ ಹೊರಟ ನೀಲ್ ಅಲ್ಲಿ, ಪ್ರಭಾಸ್ ಜೊತೆ ಸೇರಿ ‘ಸಲಾರ್’ ಮೂಲಕ ಮತ್ತೊಂದು ಬ್ಲಾಕ್ ಬಸ್ಟರ್ ಅನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ಜೂ ಎನ್​ಟಿಆರ್ ಜೊತೆಗೂ ಸಿನಿಮಾ ಘೋಷಿಸಿರುವ ನೀಲ್, ಇದೀಗ ತಮಿಳಿಗೆ ಹೊರಡಲು ಸಜ್ಜಾಗಿದ್ದಾರೆ.

ತೆಲುಗಿನಲ್ಲಿ ಎರಡು ಸಿನಿಮಾ ನಿರ್ದೇಶುವುದನ್ನು ಬಾಕಿ ಉಳಿಸಿಕೊಂಡಿರುವ ನಿರ್ದೇಶಕ ಪ್ರಶಾಂತ್ ನೀಲ್ ತಮಿಳಿನ ಸ್ಟಾರ್ ನಟರೊಬ್ಬರಿಗೆ ಕತೆಯೊಂದನ್ನು ಹೇಳಿದ್ದು, ಸಿನಿಮಾ ಮಾಡಲು ಅಣಿಯಾಗಿದ್ದಾರೆ ಎನ್ನಲಾಗುತ್ತಿದೆ. ತಮಿಳಿನ ಸ್ಟಾರ್ ನಟ ಅಜಿತ್​ ಅವರನ್ನು ನಾಯಕರನ್ನಾಗಿಸಿಕೊಂಡು ಸಿನಿಮಾ ಕಟ್ಟಲು ನೀಲ್ ರೆಡಿಯಾಗಿದ್ದಾರೆ. ಅಜಿತ್ ಹಾಗೂ ನೀಲ್ ನಡುವೆ ಸಿನಿಮಾ ಬಗ್ಗೆ ಮಾತುಕತೆ ನಡೆದಿದ್ದು, ಅಜಿತ್ ಸಹ ಓಕೆ ಹೇಳಿದ್ದಾರೆ ಎನ್ನಲಾಗುತ್ತಿದೆ.

ವಿಶೇಷವೆಂದರೆ ಅಜಿತ್ ಜೊತೆಗೆ ಎರಡು ಸಿನಿಮಾಗಳನ್ನು ನೀಲ್ ನಿರ್ದೇಶನ ಮಾಡಲಿದ್ದು, ಈ ಎರಡೂ ಸಿನಿಮಾಗಳನ್ನು ಕನ್ನಡದ ಹೊಂಬಾಳೆ ಪ್ರೊಡಕ್ಷನ್ಸ್ ನಿರ್ಮಾಣ ಮಾಡಲಿದೆ. ‘ವಿದುಮಾರ್ಚಿ’ ಸಿನಿಮಾದ ಶೂಟಿಂಗ್​ನಲ್ಲಿರುವ ಅಜಿತ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ನೀಲ್, ಕತೆಯನ್ನು ಒಪ್ಪಿಸಿರುವುದಲ್ಲದೆ, ಎರಡೂ ಸಿನಿಮಾಕ್ಕೆ ಒಟ್ಟು ಮೂರು ವರ್ಷಗಳ ಡೇಟ್ಸ್​ ಅನ್ನು ಅಜಿತ್​ರಿಂದ ಕೇಳಿದ್ದಾರೆ. ಇದಕ್ಕೆ ಅಜಿತ್ ಸಹ ಒಪ್ಪಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಜಪಾನ್ ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸಿದ ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ

ಪ್ರಶಾಂತ್ ನೀಲ್ ಪ್ರಸ್ತುತ ‘ಸಲಾರ್ 2’ ಸಿನಿಮಾದ ಚಿತ್ರೀಕರಣಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ‘ಕಲ್ಕಿ 2898 ಎಡಿ’ ಗೆದ್ದಿರುವ ಖುಷಿಯಲ್ಲಿರುವ ಪ್ರಭಾಸ್, ಪ್ರಸ್ತುತ ‘ಸಲಾರ್ 2’ ಸೇರಿದಂತೆ ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದು, ಮೂರರಲ್ಲಿ ಯಾವುದು ಮೊದಲು ಪ್ರಾರಂಭಿಸಲಿದ್ದಾರೆ ಎಂಬ ಕುತೂಹಲ ಗರಿಗೆದರಿದೆ. ಪ್ರಭಾಸ್ ಹಾಗೂ ನೀಲ್ ನಡುವಿನ ಭಿನ್ನಾಭಿಪ್ರಾಯದಿಂದಾಗಿ ‘ಸಲಾರ್ 2’ ಪ್ರಾರಂಭವಾಗುತ್ತಿಲ್ಲ ಎಂಬ ಸುದ್ದಿಗಳು ಹರಿದಾಡಿದ್ದವು, ಆದರೆ ಅದು ಸುಳ್ಳೆಂದು ಹೊಂಬಾಳೆ ಸ್ಪಷ್ಟಪಡಿಸಿದೆ. ಆದರೆ ‘ಸಲಾರ್ 2’ ಯಾವಾಗ ಪ್ರಾರಂಭವಾಗಲಿದೆ ಎಂಬ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಆದಂತಿಲ್ಲ.

ಇನ್ನು ಪ್ರಶಾಂತ್ ನೀಲ್, ಜೂ ಎನ್​ಟಿಆರ್​ಗೆ ಸಿನಿಮಾ ಮಾಡುವುದಾಗಿ ಘೋಷಣೆ ಮಾಡಿ ಆಗಿದೆ. ಸಿನಿಮಾಕ್ಕೆ ‘ಡ್ರ್ಯಾಗನ್’ ಎಂದು ಹೆಸರಿಟ್ಟಿದ್ದು, ಸಿನಿಮಾದ ಒಂದು ಪೋಸ್ಟರ್ ಸಹ ಬಿಡುಗಡೆ ಆಗಿದೆ. ಸಿನಿಮಾವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿದ್ದಾರೆ. ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾದ ಚಿತ್ರೀಕರಣ ಬಳಿಕ ‘ಡ್ರ್ಯಾಗನ್’ ಸಿನಿಮಾದ ಚಿತ್ರೀಕರಣ ಪ್ರಾರಂಭ ಆಗಲಿದೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್