ಸದ್ಯಕ್ಕಂತೂ ಸೆಟ್ಟೇರಲ್ಲ ಪ್ರಶಾಂತ್ ನೀಲ್ ನಿರ್ದೇಶನದ ಈ ಸಿನಿಮಾ..

ಮೊದಲ ಭಾಗ ಫ್ಲಾಪ್ ಆದರೆ, ಎರಡನೇ ಭಾಗ ಮಾಡಲು ನಿರ್ಮಾಪಕರು ಮುಂದಾಗುವುದಿಲ್ಲ. ಆದರೆ ‘ಸಲಾರ್’ ಒಳ್ಳೆಯ ಬಿಸ್ನೆಸ್ ಮಾಡಿದೆ. ಒಟಿಟಿ ಮೊದಲಾದ ಹಕ್ಕುಗಳ ಮಾರಾಟದಿಂದ ಚಿತ್ರಕ್ಕೆ ಒಳ್ಳೆಯ ಆದಾಯ ಬಂದಿದೆ. ಈ ಎಲ್ಲಾ ಕಾರಣದಿಂದ ಎರಡನೇ ಭಾಗ ಮಾಡುವುದು ಚಿತ್ರತಂಡಕ್ಕೆ ಲಾಭದಾಯಕವೇ. ಆದರೂ ಪ್ರಶಾಂತ್ ಈ ವಿಚಾರದಲ್ಲಿ ಆತುರ ತೋರುತ್ತಿಲ್ಲ ಎನ್ನಲಾಗಿದೆ.

ಸದ್ಯಕ್ಕಂತೂ ಸೆಟ್ಟೇರಲ್ಲ ಪ್ರಶಾಂತ್ ನೀಲ್ ನಿರ್ದೇಶನದ ಈ ಸಿನಿಮಾ..
ಪ್ರಶಾಂತ್​ ನೀಲ್​
Follow us
 ಶ್ರೀಲಕ್ಷ್ಮೀ ಎಚ್
| Updated By: ಮದನ್​ ಕುಮಾರ್​

Updated on: Feb 19, 2024 | 11:40 AM

ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ ‘ಸಲಾರ್’ ಸಿನಿಮಾ (Salaar Movie) ಜನರಿಂದ ಮೆಚ್ಚುಗೆ ಪಡೆದಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 600 ಕೋಟಿ ರೂಪಾಯಿ ಕಲೆ ಹಾಕಿದೆ. ಈ ಚಿತ್ರ ನೆಟ್​ಫ್ಲಿಕ್ಸ್​ನಲ್ಲಿಯೂ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರಕ್ಕೆ ಎರಡನೇ ಪಾರ್ಟ್ ಬರಲಿದೆ ಎಂದು ತಂಡ ಈ ಮೊದಲೇ ಘೋಷಣೆ ಮಾಡಿದೆ. ಮೊದಲ ಭಾಗದ ಕ್ಲೈಮ್ಯಾಕ್ಸ್​ನಲ್ಲಿ ದೊಡ್ಡ ಟ್ವಿಸ್ಟ್​ನೊಂದಿಗೆ ಸಿನಿಮಾ ಪೂರ್ಣಗೊಳಿಸಲಾಗಿದೆ. ಹೀಗಾಗಿ ಎರಡನೇ ಪಾರ್ಟ್ (Salaar 2 Movie) ಬಗ್ಗೆ ನಿರೀಕ್ಷೆ ಮೂಡಿದೆ. ಆದರೆ, ಈ ಸಿನಿಮಾ ಸದ್ಯಕ್ಕಂತೂ ಸೆಟ್ಟೇರುವುದಿಲ್ಲ ಎನ್ನಲಾಗುತ್ತಿದೆ.

ಪ್ರಶಾಂತ್ ನೀಲ್ ಅವರು ‘ಕೆಜಿಎಫ್’ ಮೊದಲ ಭಾಗ ಮುಗಿದ ತಕ್ಷಣ ಎರಡನೇ ಪಾರ್ಟ್​ನ ಕೆಲಸದಲ್ಲಿ ತೊಡಗಿಕೊಂಡರು. ಆದರೆ, ‘ಸಲಾರ್’ ವಿಚಾರದಲ್ಲಿ ಅವರು ಆ ರೀತಿ ಮಾಡುತ್ತಿಲ್ಲ. ಇದಕ್ಕೆ ಕಾರಣ ಹಲವು. ಅವರು ಜೂನಿಯರ್ ಎನ್​ಟಿಆರ್ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿವೆ. ಜೂನಿಯರ್ ಎನ್​ಟಿಆರ್​ ‘ದೇವರ’ ಹಾಗೂ ‘ವಾರ್ 2’ ಕೆಲಸ ಮುಗಿದ ಬಳಿಕ ಪ್ರಶಾಂತ್ ನೀಲ್ ಕೈಗೆ ಸಿಗಲಿದ್ದಾರೆ. ಅದಕ್ಕೆ ಇನ್ನೂ ಸಾಕಷ್ಟು ಸಮಯಬೇಕಿದೆ.

‘ಸಲಾರ್ 2’ ಮಾಡಬೇಕಾದರೆ ಪ್ರಭಾಸ್ ಅವರ ಕಾಲ್​ಶೀಟ್ ಕೂಡ ಮುಖ್ಯ. ಸದ್ಯ ಅವರು ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ತೊಡಗಿಕೊಂಡಿದ್ದಾರೆ. ಇದಲ್ಲದೆ ‘ದಿ ರಾಜಾ ಸಾಬ್’ ಹಾಗೂ ‘ಸ್ಪಿರಿಟ್’ ಸಿನಿಮಾಗಳೂ ಅವರ ಕೈಯಲ್ಲಿವೆ. ಈ ಎಲ್ಲಾ ಕಾರಣದಿಂದ ಪ್ರಭಾಸ್ ಸದ್ಯಕ್ಕಂತೂ ಯಾರ ಕೈಗೂ ಸಿಗುವುದಿಲ್ಲ.

ಇದನ್ನೂ ಓದಿ: ‘ನಾನು ಬ್ಯಾಡ್ ಹಸ್ಬಂಡ್’; ಓಪನ್ ಆಗಿ ಮಾತನಾಡಿದ ಪ್ರಶಾಂತ್ ನೀಲ್

‘ಕೆಜಿಎಫ್ 2’ ಕ್ಲೈ ಮ್ಯಾಕ್ಸ್​ನಲ್ಲಿ ಮೂರನೇ ಭಾಗದ ಬಗ್ಗೆ ಸೂಚನೆ ನೀಡಲಾಗಿತ್ತು. ಈ ಕ್ರೇಜ್ ಕಡಿಮೆ ಆಗುವ ಮೊದಲು ಮೂರನೇ ಭಾಗ ಮಾಡಬೇಕಾದ ಅನಿವಾರ್ಯತೆ ತಂಡಕ್ಕೆ ಇದೆ. ಹೀಗಾಗಿ, 2025ರ ವೇಳೆಗಾದರೂ ‘ಕೆಜಿಎಫ್ 3’ ಸೆಟ್ಟೇರಬೇಕಿದೆ. ಈ ಎಲ್ಲಾ ಕಾರಣದಿಂದ ಪ್ರಶಾಂತ್ ನೀಲ್ ಅವರು ಈ ಬಗ್ಗೆ ಗಮನ ಹರಿಸಬಹುದು ಎನ್ನಲಾಗುತ್ತಿದೆ. ಜೂನಿಯರ್ ಎನ್​ಟಿಆರ್ ಜೊತೆಗಿನ ಸಿನಿಮಾ ಪೂರ್ಣಗೊಂಡ ಬಳಿಕ ಅವರು ‘ಕೆಜಿಎಫ್ 3’ ಕೈಗೆತ್ತಿಕೊಂಡಿದ್ದು ಹೌದಾದಲ್ಲಿ ‘ಸಲಾರ್ 2’ ಸೆಟ್ಟೇರೋದು ಮತ್ತಷ್ಟು ವಿಳಂಬ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ