AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್ ನೀಲ್-ಜೂನಿಯರ್ ಎನ್​ಟಿಆರ್ ಚಿತ್ರಕ್ಕೆ ರಿಲೀಸ್ ದಿನಾಂಕ ಫಿಕ್ಸ್

ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್‌ಟಿಆರ್ ಅವರ ಮುಂಬರುವ ಚಿತ್ರದ ಬಿಡುಗಡೆ ದಿನಾಂಕ ರಿವೀಲ್ ಆಗಿದೆ. ಹಲವು ವರ್ಷಗಳ ಕಾಯುವಿಕೆಯ ನಂತರ, ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಪ್ಯಾನ್ ಇಂಡಿಯಾ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಇಲ್ಲದಿದ್ದರೂ, #NTRNeel ಎಂಬ ಹೆಸರಿನಲ್ಲಿ ಚರ್ಚೆಯಾಗುತ್ತಿದೆ. 'ಡ್ರ್ಯಾಗನ್' ಎಂಬ ಇಂಗ್ಲಿಷ್ ಶೀರ್ಷಿಕೆಯೂ ಸಹ ಕೇಳಿಬಂದಿದೆ.

ಪ್ರಶಾಂತ್ ನೀಲ್-ಜೂನಿಯರ್ ಎನ್​ಟಿಆರ್ ಚಿತ್ರಕ್ಕೆ ರಿಲೀಸ್ ದಿನಾಂಕ ಫಿಕ್ಸ್
ನೀಲ್-ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Apr 29, 2025 | 2:26 PM

Share

ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​ಟಿಆರ್ (JR. NTR) ಸಿನಿಮಾ ಘೋಷಣೆ ಆಗಿ ಕೆಲವು ವರ್ಷಗಳೇ ಕಳೆದು ಹೋಗಿವೆ. ಆದರೆ, ಸಿನಿಮಾ ಇಷ್ಟು ದಿನ ಸೆಟ್ಟೇರಿರಲಿಲ್ಲ. ಈಗ ಚಿತ್ರದ ಶೂಟ್ ಭರದಿಂದ ಸಾಗುತ್ತಿದೆ. ಈಗ ಸಿನಿಮಾದ ರಿಲೀಸ್ ದಿನಾಂಕದ ಬಗ್ಗೆಯೂ ಮಾಹಿತಿ ಹೊರ ಬಿದ್ದಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಅಂದಹಾಗೆ ಈ ಸಿನಿಮಾ ವೀಕ್ಷಿಸಬೇಕು ಎಂದರೆ ಇನ್ನೂ ಒಂದು ವರ್ಷಗಳಿಗೂ ಅಧಿಕ ಕಾಲ ನೀವು ಕಾಯಲೇಬೇಕು.

ಪ್ರಶಾಂತ್ ನೀಲ್ ಅವರು ‘ಸಲಾರ್’ ಸಿನಿಮಾ ಬಳಿಕ ಒಂದು ಬ್ರೇಕ್ ಪಡೆದರು. ಅವರು ಮುಂಬರುವ ತಮ್ಮ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡರು. ಅವರು ‘ಸಲಾರ್ 2’ ಎತ್ತಿಕೊಳ್ಳುತ್ತಾರಾ ಅಥವಾ ‘ಕೆಜಿಎಫ್ 3’ ಮಾಡುತ್ತಾ ಎನ್ನುವ ಪ್ರಶ್ನೆ ಇತ್ತು. ಆದರೆ, ಹಳೆಯ ಕಮಿಟ್​​ಮೆಂಟ್​ಗಳಲ್ಲಿ ಒಂದಾದ ಜೂನಿಯರ್ ಎನ್​ಟಿಆರ್ ಜೊತೆಗಿನ ಚಿತ್ರವನ್ನು ಅವರು ಘೋಷಣೆ ಮಾಡಿದರು. ಈ ಸಿನಿಮಾ 2026ರ ಜೂನ್ 25ರಂದು ರಿಲೀಸ್ ಆಗಲಿದೆ.

ಇದನ್ನೂ ಓದಿ
Image
‘ಬಾಹುಬಲಿ 2’ ಚಿತ್ರಕ್ಕೆ 8 ವರ್ಷ; ರೀ-ರಿಲೀಸ್ ದಿನಾಂಕ ಘೋಷಣೆ
Image
ಅವನು ಗೆಳೆಯನಲ್ಲ, ಸಹೋದ್ಯೋಗಿ; ಅಕ್ಷಯ್-ಪರೇಶ್ ಮಧ್ಯೆ ಯಾವುದೂ ಸರಿ ಇಲ್ಲ?
Image
ಬಸ್ ಡ್ರೈವರ್ ಆಗಿದ್ದ ಯಶ್ ತಂದೆ ಈಗ ನಿರ್ಮಾಪಕ; ಹೊಸ ಬ್ಯಾನರ್ ಶುರು?
Image
ನಾನಿಗೆ ಕನ್ನಡ ಪಾಠ ಮಾಡಿದ ಶ್ರೀನಿಧಿ ಶೆಟ್ಟಿ; ಎಷ್ಟು ಕ್ಯೂಟ್ ನೋಡಿ

ಈ ಮೊದಲು ಪ್ರಶಾಂತ್ ನೀಲ್ ಸಿನಿಮಾ 2026ರ ಸಂಕ್ರಾಂತಿಗೆ ಬರಲಿದೆ ಮತ್ತು ದಳಪತಿ ವಿಜಯ್ ಸಿನಿಮಾ ಜೊತೆ ಕ್ಲ್ಯಾಶ್ ಮಾಡಿಕೊಳ್ಳಲಿದೆ ಎಂದು ವರದಿ ಆಗಿತ್ತು. ಆದರೆ, ಈಗಷ್ಟೇ ಚಿತ್ರದ ಶೂಟ್ ಆರಂಭ ಆಗಿದೆ. ಅಷ್ಟು ಬೇಗ ಸಿನಿಮಾ ರಿಲೀಸ್ ಮಾಡೋದು ಪ್ರಶಾಂತ್ ನೀಲ್​ಗೆ ಅಸಾಧ್ಯ. ಈ ಕಾರಣದಿಂದಲೇ 2026ರ ಜೂನ್​ಗೆ ಚಿತ್ರವನ್ನು ರಿಲೀಸ್ ಮಾಡಲಾಗುತ್ತಿದೆ.

ಪ್ರಶಾಂತ್ ನೀಲ್ ಅವರ ಈ ಮೊದಲ ಸಿನಿಮಾಗಳು ಅಂದುಕೊಂಡ ದಿನಾಂಕದಂದು ರಿಲೀಸ್ ಆಗದೇ ಇದ್ದ ಹಲವು ಉದಾಹರಣೆ ಇದೆ. ಪ್ರಶಾಂತ್ ನೀಲ್ ಸದ್ಯ ಒಂದು ವರ್ಷಕ್ಕೂ ಅಧಿಕ ಸಮಯ ತೆಗೆದುಕೊಂಡಿದ್ದಾರೆ. ಈ ಚಿತ್ರಕ್ಕೆ ಆ ರೀತಿ ಆಗದಿರಲಿ ಎಂಬುದು ಫ್ಯಾನ್ಸ್ ಕೋರಿಕೆ.

ಇದನ್ನೂ ಓದಿ: ಪ್ರಶಾಂತ್ ನೀಲ್ ಸಿನಿಮಾ ಪ್ರಾರಂಭಿಸಲಿರುವ ಜೂ ಎನ್​ಟಿಆರ್, ಮುಗಿಯುವುದು ಯಾವಾಗ?

ಈ ಸಿನಿಮಾದ ಟೈಟಲ್ ಏನೆಂಬುದು ಇನ್ನೂ ಬಹಿರಂಗ ಆಗಿಲ್ಲ. ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​ಟಿಆರ್​ ಕಾಂಬಿನೇಷನ್​ನ ಸಿನಿಮಾ ಆದ್ದರಿಂದ #NTRNeel ಎಂದು ಚಿತ್ರಕ್ಕೆ ತಾತ್ಕಾಲಿಕವಾಗಿ ಟೈಟಲ್ ಇಡಲಾಗಿದೆ. ಈ ಸಿನಿಮಾ ಪ್ಯಾನ್ ಇಂಡಿಯಾ ಚಿತ್ರ ಆಗಿರುವುದರಿಂದ ‘ಡ್ರ್ಯಾಗನ್’ ಎಂಬ ಇಂಗ್ಲಿಷ್ ಟೈಟಲ್ ಇಡಲಾಗಿದೆ ಎನ್ನುವ ಮಾತು ಕೂಡ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ