AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿಯ ಅನುಮಾನಾಸ್ಪದ ಸಾವು: 23 ವರ್ಷಗಳ ಬಳಿಕ ಆರೋಪಿಗೆ ಶಿಕ್ಷೆ

Actress Prathyusha: ಸ್ಟಾರ್ ನಟಿಯಾಗಿ ಬೆಳೆಯುತ್ತಿರುವ ಹೊತ್ತಿನಲ್ಲಿ 2002ರ ಫೆಬ್ರವರಿ 22 ರಂದು ನಟಿ ಪ್ರತ್ಯುಷ ಅನುಮಾನಾಸ್ಪದವಾಗಿ ನಿಧನ ಹೊಂದಿದರು. ಅವರ ಸಾವು ಆಗ ಅವಿಭಜಿತ ಆಂಧ್ರ ಪ್ರದೇಶದಲ್ಲಿ ದೊಡ್ಡ ಸುದ್ದಿಯಾಗಿತ್ತು. ಇದೀಗ 24 ವರ್ಷಗಳ ಬಳಿಕ ನಟಿಯ ಸಾವಿನ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದೆ. ಪ್ರತ್ಯುಷ ಸಾವಿನ ಪ್ರಕರಣದಲ್ಲಿ ನಟಿಯ ಗೆಳೆಯನಾಗಿದ್ದ ಸಿದ್ಧಾರ್ಥ್ ರೆಡ್ಡಿ ದೋಷಿ ಎಂದು ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಹೇಳಿದೆ.

ನಟಿಯ ಅನುಮಾನಾಸ್ಪದ ಸಾವು: 23 ವರ್ಷಗಳ ಬಳಿಕ ಆರೋಪಿಗೆ ಶಿಕ್ಷೆ
Prathyusha
ಮಂಜುನಾಥ ಸಿ.
|

Updated on:Feb 17, 2026 | 4:47 PM

Share

‘ಸ್ನೇಹಮಂಟೆ ಇದೆರ’, ‘ರಾಯುಡು’, ‘ಕಲಸುಕೋವಾಲನಿ’ ಇನ್ನೂ ಕೆಲವು ಸೂಪರ್ ಹಿಟ್ ಸಿನಿಮಾಗಳಲ್ಲಿ (Cinema) ಆಗಿನ ಸ್ಟಾರ್ ನಟರುಗಳ ಜೊತೆಗೆ ನಾಯಕಿಯಾಗಿ ನಟಿಸಿದ್ದ ನಟಿ ಪ್ರತ್ಯುಷ, ಸ್ಟಾರ್ ನಟಿಯಾಗಿ ಬೆಳೆಯುತ್ತಿರುವ ಹೊತ್ತಿನಲ್ಲಿ 2002ರ ಫೆಬ್ರವರಿ 22 ರಂದು ನಟಿ ಅನುಮಾನಾಸ್ಪದವಾಗಿ ನಿಧನ ಹೊಂದಿದರು. ಅವರ ಸಾವು ಆಗ ಅವಿಭಜಿತ ಆಂಧ್ರ ಪ್ರದೇಶದಲ್ಲಿ ದೊಡ್ಡ ಸುದ್ದಿಯಾಗಿತ್ತು. ಇದೀಗ 24 ವರ್ಷಗಳ ಬಳಿಕ ನಟಿಯ ಸಾವಿನ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದೆ. ಪ್ರತ್ಯುಷ ಸಾವಿನ ಪ್ರಕರಣದಲ್ಲಿ ನಟಿಯ ಗೆಳೆಯನಾಗಿದ್ದ ಸಿದ್ಧಾರ್ಥ್ ರೆಡ್ಡಿ ದೋಷಿ ಎಂದು ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಹೇಳಿದೆ.

ಸಾವಿಗೀಡಾಗಿರುವ ನಟಿ ಪ್ರತ್ಯುಷ ಹಾಗೂ ಈಗ ಶಿಕ್ಷೆಗೆ ಗುರಿಯಾಗಿರುವ ಸಿದ್ಧಾರ್ಥ್ ಪರಸ್ಪರ ಪ್ರೀತಿಸುತ್ತಿದ್ದು, ಇಬ್ಬರ ಮದುವೆಗೆ ಸಿದ್ಧಾರ್ಥ್ ರೆಡ್ಡಿ ಕುಟುಂಬದವರು ಒಪ್ಪಲಿಲ್ಲವೆಂದು ಇಬ್ಬರೂ ಸಹ ಕೂಲ್​​ಡ್ರಿಂಕ್ಸ್​​ನಲ್ಲಿ ವಿಷ ಬೆರೆಸಿ ಕುಡಿದಿದ್ದು, ಪ್ರತ್ಯುಷ ಸಾವಿಗೀಡಾದರೆ, ಸಿದ್ಧಾರ್ಥ್ ರೆಡ್ಡಿ ಬದುಕಿ ಉಳಿದಿದ್ದರು ಎನ್ನಲಾಗಿತ್ತು. ಆದರೆ ಇದನ್ನು ಒಪ್ಪದ ಪ್ರತ್ಯುಷ ತಾಯಿ ಸರೋಜಿನಿ ನ್ಯಾಯಾಲಯಗಳ ಮೂಲಕ ಸತತ ಹೋರಾಟ ಮಾಡಿ ಇದೀಗ ಕೊನೆಗೂ ಸಿದ್ಧಾರ್ಥ್​​ಗೆ ಶಿಕ್ಷೆ ಆಗುವಂತೆ ಮಾಡಿದ್ದಾರೆ.

ಪ್ರತ್ಯುಷ ತಾಯಿ ಹೇಳಿದ್ದಂತೆ, ಪ್ರತ್ಯುಷಗೆ ‘ಜಯಂ’ ಸಿನಿಮಾನಲ್ಲಿ ನಾಯಕಿಯಾಗಿ ನಟಿಸುವ ಅವಕಾಶ ಸಿಕ್ಕಿತ್ತಂತೆ. ಆ ಖುಷಿಯಲ್ಲಿದ್ದ ಪ್ರತ್ಯುಷ ಗೆಳತಿಯ ಜೊತೆಗೆ ಪಾರ್ಲರ್​​ಗೆ ಹೋಗಿದ್ದರಂತೆ. ಅಲ್ಲಿಗೆ ಬಂದ ಸಿದ್ಧಾರ್ಥ್ ರೆಡ್ಡಿ ಪ್ರತ್ಯುಷರನ್ನು ಕರೆದುಕೊಂಡು ಹೋಗಿದ್ದಾನೆ. ಆ ಬಳಿಕ ಗೆಳತಿ, ಪ್ರತ್ಯುಷಗೆ ಕರೆ ಮಾಡಿದ್ದಾಳೆ, ಆಗಲೂ ಸಹ ಪ್ರತ್ಯುಷ ಕೆಲವೇ ನಿಮಿಷಗಳಲ್ಲಿ ಬರುವುದಾಗಿ ಹೇಳಿದ್ದಾರೆ. ಆದರೆ ಅದಾದ ಕೆಲವೇ ನಿಮಿಷಗಳ ಬಳಿಕ ಪ್ರತ್ಯುಷಳನ್ನು ಸ್ವತಃ ಸಿದ್ಧಾರ್ಥ್ ಆಸ್ಪತ್ರೆಗೆ ದಾಖಲಿಸಿದ್ದ. ಇದು ಹಲವು ಅನುಮಾನಗಳಿಗೆ ಕಾರಣವಾಗಿತ್ತು.

ಇದನ್ನೂ ಓದಿ:ಒಟ್ಟೊಟ್ಟಿಗೆ ಐದು ಸಿನಿಮಾ ಹಿಡಿದು ಬಂದ ರಕ್ಷಿತ್ ಶೆಟ್ಟಿ

ಸಿದ್ಧಾರ್ಥ್ ನೀಡಿರುವ ಹೇಳಿಕೆಯಂತೆ ಇಬ್ಬರೂ ಸಹ ಕೂಲ್​​ಡ್ರಿಂಕ್ಸ್​​ನಲ್ಲಿ ವಿಷ ಬೆರೆಸಿ ಕುಡಿದಿದ್ದರು. ಆದರೆ ಪ್ರತ್ಯುಷ ಅಲ್ಲಿಯೇ ನಿಧನ ಹೊಂದಿದರು. ಸಿದ್ಧಾರ್ಥ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಬದುಕುಳಿದಿದ್ದರು. ಈ ಹಿಂದೆಯೇ ಮೆಟ್ರೊಪಾಲಿಟಿನ್ ಕೋರ್ಟ್, ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ ಸಿದ್ಧಾರ್ಥ್​​ಗೆ ಐದು ವರ್ಷಗಳ ಸಜೆ ನೀಡಿತ್ತು. ಅದಾದ ಬಳಿಕ ಸಿದ್ಧಾರ್ಥ್ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದರು. ಅಲ್ಲಿ ಆತನಿಗೆ ಎರಡು ವರ್ಷಗಳ ಸಾದಾ ಸಜೆ ವಿಧಿಸಲಾಯ್ತು. ಬಳಿಕ ಪ್ರತ್ಯುಷ ತಾಯಿ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಹಲವು ವರ್ಷಗಳ ವಿಚಾರಣೆ ಬಳಿಕ ಇದೀಗ ತೀರ್ಪು ಹೊರಬಿದ್ದಿದೆ.

ಪ್ರಕರಣದಲ್ಲಿ ಸಿದ್ಧಾರ್ಥ್ ಅನ್ನು ಆತ್ಮಹತ್ಯೆಗೆ ಪ್ರಚೋದನೆ, ಆತ್ಮಹತ್ಯೆಗೆ ಸಹಾಯ ಮಾಡಿದ ಆರೋಪಗಳಿಗೆ ಸುಪ್ರೀಂಕೋರ್ಟ್ ದೋಷಿ ಎಂದು ಪರಿಗಣಿಸಿದ್ದು, ಸಿದ್ಧಾರ್ಥ್ ರೆಡ್ಡಿ ಇನ್ನು ನಾಲ್ಕು ವಾರಗಳಲ್ಲಿ ಪೊಲೀಸರಿಗೆ ಶರಣಾಗಬೇಕು ಎಂದಿದೆ. ಆದರೆ ಶಿಕ್ಷೆಯ ಪ್ರಮಾಣವನ್ನು ಇನ್ನೂ ಪ್ರಕಟಿಸಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:12 pm, Tue, 17 February 26

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್