AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರೇಮದ ಊರಲಿ’ ಚಿತ್ರ 15 ದಿನಕ್ಕೆ ಬರೋಬ್ಬರಿ 39 ಕೋಟಿ ರೂಪಾಯಿ ಗಳಿಕೆ

ರಂಗಾಯಣ ರಘು ಮೊದಲಾದವರ ಅಭಿನಯದ ಪ್ರೇಮದ ಊರಲಿ ಸಿನಿಮಾ ಬಾಕ್ಸ್‌ಆಫೀಸ್‌ನಲ್ಲಿ ಅಸಾಧಾರಣ ಯಶಸ್ಸು ಕಂಡಿದೆ. ಕೇವಲ ಹದಿನೈದು ದಿನಗಳಲ್ಲಿ ಅತಿ ಹೆಚ್ಚು ಗಳಿಕೆ ಮಾಡುವ ಮೂಲಕ ವಿಶ್ವಾದ್ಯಂತ ಮೂವತ್ತೊಂಬತ್ತು ಕೋಟಿ ರೂಪಾಯಿಗಳಿಗೂ ಅಧಿಕ ಹಣ ಬಾಚಿಕೊಂಡು ಸ್ಯಾಂಡಲ್‌ವುಡ್‌ನಲ್ಲಿ ಹೊಸ ದಾಖಲೆಯನ್ನು ಯಶಸ್ವಿಯಾಗಿ ನಿರ್ಮಿಸಿದೆ.

‘ಪ್ರೇಮದ ಊರಲಿ’ ಚಿತ್ರ 15 ದಿನಕ್ಕೆ ಬರೋಬ್ಬರಿ 39 ಕೋಟಿ ರೂಪಾಯಿ ಗಳಿಕೆ
ಪ್ರೇಮದ ಊರಲೊImage Credit source: Premada Oorali
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 10, 2026 | 10:56 AM

Share

ಕನ್ನಡ ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ‘ಪ್ರೇಮದ ಊರಲಿ’ ಸಿನಿಮಾ ಬಾಕ್ಸ್‌ಆಫೀಸ್‌ನಲ್ಲಿ ಅಚ್ಚರಿಯ ರೀತಿಯಲ್ಲಿ ಅಬ್ಬರಿಸುತ್ತಿದೆ. ರಂಗಾಯಣ ರಘು ಹಾಗೂ ಗೋವಿಂದೇ ಗೌಡ ನಟನೆಯ ಈ ಚಿತ್ರವು ದಿನದಿಂದ ದಿನಕ್ಕೆ ತನ್ನ ಪ್ರದರ್ಶನವನ್ನು ಹೆಚ್ಚಿಸಿಕೊಳ್ಳುತ್ತಾ, ಗಲ್ಲಾಪೆಟ್ಟಿಗೆಯಲ್ಲಿ ಕೋಟಿ ಕೋಟಿ ಹಣ ಬಾಚಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದೆ.

ಸಿನಿಮಾ ಬಿಡುಗಡೆಯಾದ ಆರಂಭದಲ್ಲಿ ನಿಧಾನವಾಗಿ ಗಳಿಕೆ ಆರಂಭಿಸಿದರೂ, ವೀಕ್ಷಕರ ಮೆಚ್ಚುಗೆ ಹಾಗೂ ಮೌತ್ ಪಬ್ಲಿಸಿಟಿಯಿಂದಾಗಿ ಚಿತ್ರದ ಕಲೆಕ್ಷನ್‌ನಲ್ಲಿ ಭಾರೀ ಏರಿಕೆಯಾಗಿದೆ. ಮೊದಲ ವಾರದಲ್ಲಿಯೂ ಉತ್ತಮ ಗಳಿಕೆ ಕಂಡ ಈ ಸಿನಿಮಾ, ಎರಡನೇ ವಾರಕ್ಕೆ ಕಾಲಿಡುತ್ತಿದ್ದಂತೆ ತನ್ನ ವೇಗವನ್ನು ದುಪ್ಪಟ್ಟುಗೊಳಿಸಿದೆ. ಪ್ರಸ್ತುತ ಈ ಚಿತ್ರವು ಒಟ್ಟು 39.05 ಕೋಟಿ ರೂಪಾಯಿಗಳಿಗೂ ಅಧಿಕ ಗ್ರಾಸ್ ಕಲೆಕ್ಷನ್ ಮಾಡುವ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ.

ಭರ್ಜರಿ ಕಲೆಕ್ಷ್: ಸಿನಿಮಾವು ಬಿಡುಗಡೆಯಾದ ಕೇವಲ 14 ದಿನಗಳಲ್ಲಿ ಅಂದರೆ ಎರಡು ವಾರಗಳ ಒಳಗೆ ಬರೋಬ್ಬರಿ 39.05 ಕೋಟಿ ರೂ ಗಳಿಕೆ ಹಾಗೂ 33.47 ಕೋಟಿ ರೂ. ನಿವ್ವಳ ಗಳಿಕೆ ದಾಖಲಿಸಿದೆ.

ಶೋಗಳ ಸಂಖ್ಯೆಯಲ್ಲಿ ಭರ್ಜರಿ ಏರಿಕೆ: ಕೇವಲ 60 ಶೋಗಳೊಂದಿಗೆ ಶುರುವಾದ ಈ ಸಿನಿಮಾದ ಯಶಸ್ಸು ಎಷ್ಟರ ಮಟ್ಟಿಗಿದೆ ಎಂದರೆ, ಎರಡನೇ ಗುರುವಾರದ ವೇಳೆಗೆ ಪ್ರದರ್ಶನಗಳ ಸಂಖ್ಯೆ ಬರೋಬ್ಬರಿ 968ಕ್ಕೆ ಏರಿಕೆಯಾಗಿದೆ. ವೀಕೆಂಡ್‌ಗಳಲ್ಲಿ ಹೌಸ್‌ಫುಲ್ ಪ್ರದರ್ಶನ: ಎರಡನೇ ಶನಿವಾರ ಮತ್ತು ಭಾನುವಾರ ಚಿತ್ರದ ಆಕ್ಯುಪೆನ್ಸಿ ಶೇ. 75 ಮತ್ತು ಶೇ. 84ರಷ್ಟು ದಾಖಲಾಗುವ ಮೂಲಕ ಥೇಟರ್‌ಗಳಲ್ಲಿ ಹೌಸ್‌ಫುಲ್ ಬೋರ್ಡ್ ಬೀಳುವಂತೆ ಮಾಡಿದೆ.

ಇದನ್ನೂ ಓದಿ: ಪ್ರೇಮದ ಊರಲಿ ಸಿನಿಮಾ ಎರಡು ವಾರದ ಕಲೆಕ್ಷನ್

ದೈನಂದಿನ ಗಳಿಕೆಯ ಗ್ರಾಫ್: ಮೊದಲ ದಿನ ಕೇವಲ 0.10 ಕೋಟಿ ರೂ. ಗಳಿಸಿದ್ದ ಸಿನಿಮಾ, ಎರಡನೇ ವಾರದ ಅಂತ್ಯಕ್ಕೆ ಏಕಾಏಕಿ ದಿನವೊಂದರ ಕಲೆಕ್ಷನ್ ಅನ್ನು 4 ಕೋಟಿ ರೂ ಗಡಿ ದಾಟಿಸುವ ಮೂಲಕ ದೊಡ್ಡ ದಾಖಲೆ ಬರೆದಿದೆ. 15ನೇ ದಿನ ಸಿನಿಮಾ 4.50 ಕೋಟಿ ರೂಪಾಯಿ ಬಾಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:55 am, Sat, 10 October 26

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ