AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್​​ ನಾಗ್​​ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: ಹಿರಿಯ ನಟನಿಗೆ ಹರಿದುಬಂತು ಶುಭಾಶಯಗಳ ಮಹಾಪೂರ

2024ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯ ಗೌರವಕ್ಕೆ ಭಾಜನರಾಗಿರುವ ಹಿರಿಯ ನಟ ಅನಂತ್ ನಾಗ್ ಅವರಿಗೆ ಪ್ರಧಾನಿ ಮೋದಿ, ಕೇಂದ್ರ ಸಚಿವರು ಹಾಗೂ ರಾಜ್ಯದ ರಾಜಕೀಯ ಗಣ್ಯರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ತಮ್ಮ ನೈಜ ನಟನೆ, ಸಂಯಮ ಹಾಗೂ ವಿಶಿಷ್ಟ ಪಾತ್ರಗಳ ಮೂಲಕ ದಶಕಗಳ ಕಾಲ ಭಾರತೀಯ ಕಲಾರಂಗವನ್ನು ಶ್ರೀಮಂತಗೊಳಿಸಿದ ಅನಂತ್ ನಾಗ್ ಅವರನ್ನು ರಾಜಕೀಯ ನಾಯಕರು ಕೊಂಡಾಡಿದ್ದಾರೆ.

ಅನಂತ್​​ ನಾಗ್​​ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: ಹಿರಿಯ ನಟನಿಗೆ ಹರಿದುಬಂತು ಶುಭಾಶಯಗಳ ಮಹಾಪೂರ
ಅನಂತ್​​ ನಾಗ್​​Image Credit source: deccanchronicle.com
ಪ್ರಸನ್ನ ಹೆಗಡೆ
|

Updated on:Sep 16, 2026 | 7:17 PM

Share

ಬೆಂಗಳೂರು, ಸೆಪ್ಟೆಂಬರ್​​ 16: 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನಾರಿಗರುವ ಹಿರಿಯ ನಟ ಅನಂತ್​​ ನಾಗ್​​ ಅವರಿಗೆ ರಾಜಕೀಯ ನಾಯಕರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಆದಿಯಾಗಿ ಕೇಂದ್ರ ಸಚಿವರು, ಸಂಸದರು, ಕರ್ನಾಟಕದ ಸಿಎಂ ಸೇರಿ ಹಲವರು ಅಭಿನಂದನೆ ಸಲ್ಲಿಸಿದ್ದಾರೆ. ಡಾ. ರಾಜ್‌ಕುಮಾರ್ ಅವರ ಬಳಿಕ ಈ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ನಟನನ್ನು ಕೊಂಡಾಡಿದ್ದಾರೆ.

‘ಕನ್ನಡ ಚಿತ್ರರಂಗದ ಗರಿಮೆ’

ಕನ್ನಡ ಚಿತ್ರರಂಗದ ಗರಿಮೆ, ಮೇರು ನಟ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ -2024’ ಲಭಿಸಿರುವುದು ಸಮಸ್ತ ಕನ್ನಡಿಗರಿಗೆ ಅತ್ಯಂತ ಹೆಮ್ಮೆಯ ಮತ್ತು ಸಂತಸದ ಕ್ಷಣ. ತಮ್ಮ ನೈಜ ನಟನೆ, ಸಂಯಮ ಹಾಗೂ ವಿಶಿಷ್ಟ ಪಾತ್ರಗಳ ಮೂಲಕ ದಶಕಗಳ ಕಾಲ ಭಾರತೀಯ ಕಲಾರಂಗವನ್ನು ಶ್ರೀಮಂತಗೊಳಿಸಿದ ಅನಂತ್ ನಾಗ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಈ ಗೌರವ ಕನ್ನಡ ಕಲಾಜಗತ್ತಿಗೆ ಸಂದ ಮಹಾನ್ ಮನ್ನಣೆ ಎಂದು ಕರ್ನಾಟಕ ಸಿಎಂ ಡಿಕೆಶಿ ಅಭಿಪ್ರಾಯಪಟ್ಟಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ಅನಂತ್​​ ನಾಗ್​​ ಅವರು ನೀಡಿರುವ ಅಪಾರ ಕೊಡುಗೆಗೆ ಸಂದ ಈ ಗೌರವ ಕನ್ನಡಿಗರೆಲ್ಲರಿಗೂ ಹೆಮ್ಮೆ ತಂದಿದೆ. ಅವರ ಕಲಾಸೇವೆ ಇನ್ನಷ್ಟು ಕಾಲ ಮುಂದುವರಿಯಲಿ ಎಂದು ಹಾರೈಸುವುದಾಗಿ ಡಿಸಿಎಂ ಡಾ. ಜಿ. ಪರಮೇಶ್ವರ್​​ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ಹಿರಿಯ ನಟ ಅನಂತ್​​ ನಾಗ್​​

‘ಪ್ರೇಕ್ಷಕರು, ಕಲಾವಿದರಿಗೆ ಅನಂತ್​​ ನಾಗ್​​ ಸ್ಫೂರ್ತಿ’

ಭಾರತೀಯ ಸಿನಿರಂಗದ ಧ್ರುವತಾರೆ, ಕನ್ನಡಿಗರ ನೆಚ್ಚಿನ ನಟ ಅನಂತ್ ನಾಗ್ ಅವರಿಗೆ ಭಾರತ ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿ ಒಲಿದಿರುವುದು ನಮಗೆಲ್ಲರಿಗೂ ಅತ್ಯಂತ ಹೆಮ್ಮೆಯ ಕ್ಷಣ ಎಂದು ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಹೇಳಿದ್ದರೆ, ತಮ್ಮ ಅದ್ಭುತ ಕಲಾ ಪಯಣ ಹಾಗೂ ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆಯ ಮೂಲಕ ಹಲವು ತಲೆಮಾರುಗಳ ಪ್ರೇಕ್ಷಕರು ಮತ್ತು ಕಲಾವಿದರಿಗೆ ಅನಂತ್​​ ನಾಗ್​​ ಸ್ಫೂರ್ತಿ ಎಂದು ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯರು ಹಾಗೂ ತಮ್ಮ ಸಹಜ ಮತ್ತು ವಿಭಿನ್ನ ಶೈಲಿಯ ನಟನೆಯ ಮೂಲಕವೇ ಕನ್ನಡಿಗರನ್ನು ತಲುಪಿರುವ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ʼದಾದಾ ಸಾಹೇಬ್ ಫಾಲ್ಕೆʼ ಪ್ರಶಸ್ತಿ ಬಂದಿರುವುದು ಕನ್ನಡಿಗರಾದ ನಮಗೆ ಅತ್ಯಂತ ಸಂತಸದ ಸಂಗತಿಯಾಗಿದ್ದು ಅವರಿಗೆ ಅಭಿನಂದನೆ ಸಲ್ಲಿಸೋದಾಗಿ ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಅನಂತ್ ನಾಗ್ ಅವರ ಶ್ರೇಷ್ಠ ಹಾಗೂ ಸುದೀರ್ಘ ಕಲಾ ಪಯಣಕ್ಕೆ ಸಂದಿರುವ ಈ ಗೌರವ ನಿಜಕ್ಕೂ ಅತ್ಯಂತ ಅರ್ಹವಾದದ್ದು ಎಂದು ಮತ್ತೋರ್ವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್​​ ಅಭಿಪ್ರಾಯಪಟ್ಟಿದ್ದಾರೆ. ಸಂಸದ ತೇಜಸ್ವಿ ಸೂರ್ಯ, ಪಿಸಿ ಮೋಹನ್​​ ಕೂಡ ಹಿರಿಯ ನಟನಿಗೆ ಅಭಿನಂದನೆ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:09 pm, Wed, 16 September 26

Follow Us
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ