
ಬೆಂಗಳೂರು, ಸೆಪ್ಟೆಂಬರ್ 16: 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನಾರಿಗರುವ ಹಿರಿಯ ನಟ ಅನಂತ್ ನಾಗ್ ಅವರಿಗೆ ರಾಜಕೀಯ ನಾಯಕರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಆದಿಯಾಗಿ ಕೇಂದ್ರ ಸಚಿವರು, ಸಂಸದರು, ಕರ್ನಾಟಕದ ಸಿಎಂ ಸೇರಿ ಹಲವರು ಅಭಿನಂದನೆ ಸಲ್ಲಿಸಿದ್ದಾರೆ. ಡಾ. ರಾಜ್‌ಕುಮಾರ್ ಅವರ ಬಳಿಕ ಈ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ನಟನನ್ನು ಕೊಂಡಾಡಿದ್ದಾರೆ.
ಕನ್ನಡ ಚಿತ್ರರಂಗದ ಗರಿಮೆ, ಮೇರು ನಟ ಶ್ರೀ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ -2024’ ಲಭಿಸಿರುವುದು ಸಮಸ್ತ ಕನ್ನಡಿಗರಿಗೆ ಅತ್ಯಂತ ಹೆಮ್ಮೆಯ ಮತ್ತು ಸಂತಸದ ಕ್ಷಣ.
ತಮ್ಮ ನೈಜ ನಟನೆ, ಸಂಯಮ ಹಾಗೂ ವಿಶಿಷ್ಟ ಪಾತ್ರಗಳ ಮೂಲಕ ದಶಕಗಳ ಕಾಲ ಭಾರತೀಯ ಕಲಾರಂಗವನ್ನು ಶ್ರೀಮಂತಗೊಳಿಸಿದ… pic.twitter.com/t4351ZWbXm
— DK Shivakumar (@DKShivakumar) September 16, 2026
ಕನ್ನಡ ಚಿತ್ರರಂಗದ ಗರಿಮೆ, ಮೇರು ನಟ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ -2024’ ಲಭಿಸಿರುವುದು ಸಮಸ್ತ ಕನ್ನಡಿಗರಿಗೆ ಅತ್ಯಂತ ಹೆಮ್ಮೆಯ ಮತ್ತು ಸಂತಸದ ಕ್ಷಣ. ತಮ್ಮ ನೈಜ ನಟನೆ, ಸಂಯಮ ಹಾಗೂ ವಿಶಿಷ್ಟ ಪಾತ್ರಗಳ ಮೂಲಕ ದಶಕಗಳ ಕಾಲ ಭಾರತೀಯ ಕಲಾರಂಗವನ್ನು ಶ್ರೀಮಂತಗೊಳಿಸಿದ ಅನಂತ್ ನಾಗ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಈ ಗೌರವ ಕನ್ನಡ ಕಲಾಜಗತ್ತಿಗೆ ಸಂದ ಮಹಾನ್ ಮನ್ನಣೆ ಎಂದು ಕರ್ನಾಟಕ ಸಿಎಂ ಡಿಕೆಶಿ ಅಭಿಪ್ರಾಯಪಟ್ಟಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ಅನಂತ್ ನಾಗ್ ಅವರು ನೀಡಿರುವ ಅಪಾರ ಕೊಡುಗೆಗೆ ಸಂದ ಈ ಗೌರವ ಕನ್ನಡಿಗರೆಲ್ಲರಿಗೂ ಹೆಮ್ಮೆ ತಂದಿದೆ. ಅವರ ಕಲಾಸೇವೆ ಇನ್ನಷ್ಟು ಕಾಲ ಮುಂದುವರಿಯಲಿ ಎಂದು ಹಾರೈಸುವುದಾಗಿ ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಇದನ್ನೂ ಓದಿ: ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ಹಿರಿಯ ನಟ ಅನಂತ್ ನಾಗ್
Heartiest congratulations to Shri Anant Nag avaru on being conferred the prestigious Dadasaheb Phalke Award 2024.
A towering presence in Indian cinema, his remarkable body of work and enduring contribution to the world of films have inspired generations of audiences and artists… https://t.co/nh70ekh2IV
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) September 16, 2026
ಭಾರತೀಯ ಸಿನಿರಂಗದ ಧ್ರುವತಾರೆ, ಕನ್ನಡಿಗರ ನೆಚ್ಚಿನ ನಟ ಅನಂತ್ ನಾಗ್ ಅವರಿಗೆ ಭಾರತ ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿ ಒಲಿದಿರುವುದು ನಮಗೆಲ್ಲರಿಗೂ ಅತ್ಯಂತ ಹೆಮ್ಮೆಯ ಕ್ಷಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದರೆ, ತಮ್ಮ ಅದ್ಭುತ ಕಲಾ ಪಯಣ ಹಾಗೂ ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆಯ ಮೂಲಕ ಹಲವು ತಲೆಮಾರುಗಳ ಪ್ರೇಕ್ಷಕರು ಮತ್ತು ಕಲಾವಿದರಿಗೆ ಅನಂತ್ ನಾಗ್ ಸ್ಫೂರ್ತಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯರು ಹಾಗೂ ತಮ್ಮ ಸಹಜ ಮತ್ತು ವಿಭಿನ್ನ ಶೈಲಿಯ ನಟನೆಯ ಮೂಲಕವೇ ಕನ್ನಡಿಗರನ್ನು ತಲುಪಿರುವ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ʼದಾದಾ ಸಾಹೇಬ್ ಫಾಲ್ಕೆʼ ಪ್ರಶಸ್ತಿ ಬಂದಿರುವುದು ಕನ್ನಡಿಗರಾದ ನಮಗೆ ಅತ್ಯಂತ ಸಂತಸದ ಸಂಗತಿಯಾಗಿದ್ದು ಅವರಿಗೆ ಅಭಿನಂದನೆ ಸಲ್ಲಿಸೋದಾಗಿ ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಅನಂತ್ ನಾಗ್ ಅವರ ಶ್ರೇಷ್ಠ ಹಾಗೂ ಸುದೀರ್ಘ ಕಲಾ ಪಯಣಕ್ಕೆ ಸಂದಿರುವ ಈ ಗೌರವ ನಿಜಕ್ಕೂ ಅತ್ಯಂತ ಅರ್ಹವಾದದ್ದು ಎಂದು ಮತ್ತೋರ್ವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅಭಿಪ್ರಾಯಪಟ್ಟಿದ್ದಾರೆ. ಸಂಸದ ತೇಜಸ್ವಿ ಸೂರ್ಯ, ಪಿಸಿ ಮೋಹನ್ ಕೂಡ ಹಿರಿಯ ನಟನಿಗೆ ಅಭಿನಂದನೆ ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:09 pm, Wed, 16 September 26