Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್ ಸ್ಟಾರ್ ನಟನಿಗೆ ಸೂಪರ್ ಸ್ಟಾರ್ ನಟ ನಿರ್ದೇಶನ: ಕತೆ ಒಪ್ಪಿ ಆಯ್ತೆ ಪ್ರಭಾಸ್?

Prabhas: ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್​ಗಾಗಿ ಮತ್ತೊಬ್ಬ ಪ್ಯಾನ್ ಇಂಡಿಯಾ ಸ್ಟಾರ್ ಸಿನಿಮಾ ನಿರ್ದೇಶನ ಮಾಡಲಿದ್ದಾರೆ!

ಸೂಪರ್ ಸ್ಟಾರ್ ನಟನಿಗೆ ಸೂಪರ್ ಸ್ಟಾರ್ ನಟ ನಿರ್ದೇಶನ: ಕತೆ ಒಪ್ಪಿ ಆಯ್ತೆ ಪ್ರಭಾಸ್?
ಪ್ರಭಾಸ್
Follow us
ಮಂಜುನಾಥ ಸಿ.
|

Updated on: Jul 26, 2023 | 9:08 PM

ನಟರೊಬ್ಬರಿಗೆ ಮತ್ತೊಬ್ಬ ನಟರೇ ನಿರ್ದೇಶನ (Direction) ಮಾಡುವುದು ಹೊಸದಲ್ಲ. ಕನ್ನಡಲ್ಲಂತೂ ಈ ರೀತಿಯ ಹಲವು ಉದಾಹರಣೆಗಳನ್ನು ನೀಡಬಹುದು. ರಾಜ್​ಕುಮಾರ್ (Rajkumar) ಅವರಿಗೆ ಸಿನಿಮಾ ನಿರ್ದೇಶಿಸಿದ್ದ ಶಂಕರ್ ನಾಗ್ ಇಂದ ಆರಂಭಿಸಿ ಕಮಲ್​ಗಾಗಿ ಸಿನಿಮಾ ಮಾಡಿದ ರಮೇಶ್ ಅರವಿಂದ್, ಈಗ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಕಿರಿಕ್ ಪಾರ್ಟಿ ಮಾಡಿದ ರಿಷಬ್ ಶೆಟ್ಟಿ ಹೀಗೆ ಇನ್ನೂ ಹಲವು ಉದಾಹರಣೆ ನೀಡಬಹುದು. ಪರಭಾಷೆಗಳಲ್ಲಿಯೂ ಇದು ನಡೆದೇ ಬಂದಿದೆ. ಆದರೆ ಇದೀಗ ಒಬ್ಬ ಸೂಪರ್ ಸ್ಟಾರ್ (Super Star) ನಟನಿಗೆ ಮತ್ತೊಬ್ಬ ಸೂಪರ್ ಸ್ಟಾರ್ ನಟ ನಿರ್ದೇಶನ ಮಾಡಲು ಮುಂದಾಗಿದ್ದಾರೆ.

ಮಲಯಾಳಂನ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್, ಮಲಯಾಳಂ ಸಿನಿಮಾಗಳಿಗೆ ಮಾತ್ರವೇ ಸೀಮಿತವಾಗದೆ ತಮಿಳು, ಹಿಂದಿ ಇನ್ನೂ ಕೆಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ. ಮಲಯಾಳಂನ ಸ್ಟಾರ್ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಳ್ಳುವ ಪೃಥ್ವಿರಾಜ್ ಸುಕುಮಾರ್ ಒಳ್ಳೆಯ ಸಿನಿಮಾ ನಿರ್ದೇಶಕರೂ ಹೌದು. ಈಗಾಗಲೇ ಮೋಹನ್​ಲಾಲ್ ನಟನೆಯ ‘ಲೂಸಿಫರ್’ ಸಿನಿಮಾ ನಿರ್ದೇಶಿಸಿ ಭೇಷ್ ಎನಿಸಿಕೊಂಡಿದ್ದಾರೆ. ‘ಲೂಸಿಫರ್’ ಸಿನಿಮಾ ಸೂಪರ್-ಡೂಪರ್ ಹಿಟ್ ಆಗಿದ್ದಲ್ಲದೆ ತೆಲುಗಿಗೆ ರೀಮೇಕ್ ಸಹ ಆಯ್ತು. ಆ ನಂತರ ಹಾಸ್ಯಮಯ ಕೌಟುಂಬಿಕ ಸಿನಿಮಾ ನಿರ್ದೇಶನ ಮಾಡಿದ ಪೃಥ್ವಿರಾಜ್ ಸುಕುಮಾರನ್ ಈಗ ಪ್ರಭಾಸ್​ಗಾಗಿ ಸಿನಿಮಾ ಮಾಡಲು ಮುಂದಾಗಿದ್ದಾರೆ.

ಇದನ್ನೂ ಓದಿ:Prabhas: 50 ದಿನಗಳ ಬಳಿಕ ಭಾರತಕ್ಕೆ ಮರಳಿದ ಪ್ರಭಾಸ್; ‘ಸಲಾರ್’ ತಂಡದ ಚಿಂತೆ ದೂರ

ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾದಲ್ಲಿ ಪೃಥ್ವಿರಾಜ್ ಸುಕುಮಾರನ್ ಹಾಗೂ ಪ್ರಭಾಸ್ ಒಟ್ಟಿಗೆ ನಟಿಸಿದ್ದು, ಈ ಸಂದರ್ಭದಲ್ಲಿ ಪೃಥ್ವಿರಾಜ್ ಸುಕುಮಾರನ್, ಪ್ರಭಾಸ್​ಗೆ ಕತೆಯೊಂದನ್ನು ಹೇಳಿದ್ದಾರೆ ಎನ್ನಲಾಗುತ್ತಿದೆ. ಭೂಗತ ಲೋಕಕ್ಕೆ ಸಂಬಂಧಿಸಿದ ಕತೆಯೊಂದನ್ನು ಪ್ರಭಾಸ್​ಗಾಗಿ ಪೃಥ್ವಿರಾಜ್ ಸುಕುಮಾರನ್ ಹೆಣೆದಿದ್ದು, ಸಿನಿಮಾವನ್ನು ಪೃಥ್ವಿರಾಜ್ ಅವರೇ ನಿರ್ದೇಶನ ಮಾಡಲಿದ್ದಾರಂತೆ. ಈ ಸಿನಿಮಾ ಸಹ ಪ್ಯಾನ್ ಇಂಡಿಯಾ ಸಿನಿಮಾ ಆಗಿರಲಿದೆ ಎಂದು ವಿಶೇಷವಾಗಿ ಹೇಳುವ ಅಗತ್ಯವೇನಿಲ್ಲ.

ಪೃಥ್ವಿರಾಜ್ ಸುಕುಮಾರ್ ಒಳ್ಳೆಯ ನಟರಾಗಿರುವ ಜೊತೆಗೆ ನಿರ್ದೇಶನದ ಬಗೆಗೂ ಆಸಕ್ತಿ ಹೊಂದಿದ್ದಾರೆ. ಸ್ವತಃ ನಿರ್ಮಾಣ ಸಂಸ್ಥೆಯನ್ನೂ ಹೊಂದಿರುವ ಪೃಥ್ವಿರಾಜ್ ಸುಕುಮಾರನ್, ಪ್ರಭಾಸ್ ಸಿನಿಮಾವನ್ನು ತಮ್ಮ ನಿರ್ಮಾಣ ಸಂಸ್ಥೆಯಿಂದಲೇ ನಿರ್ಮಿಸುತ್ತಾರೆಯೇ ಕಾದು ನೋಡಬೇಕಿದೆ. ಪ್ರಭಾಸ್ ಸಹ ನಿರ್ಮಾಣ ಸಂಸ್ಥೆ ಹೊಂದಿದ್ದು ಈ ಇಬ್ಬರೂ ನಟರು ಪರಸ್ಪರ ಒಟ್ಟಿಗೆ ಸೇರಿ ನಿರ್ಮಾಣ ಮಾಡಿದರೂ ಅಚ್ಚರಿಯಿಲ್ಲ. ಪ್ರಸ್ತತ ಇಬ್ಬರೂ ನಟರು ‘ಸಲಾರ್’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದಾರೆ.

ಪ್ರಭಾಸ್ ಪ್ರಸ್ತುತ, ನಾಗ್ ಅಶ್ವಿನ್ ನಟನೆಯ ‘ಕಲ್ಕಿ’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾದ ಚಿತ್ರೀಕರಣ ಮುಗಿಸಿದ್ದು, ಕೆಲವೇ ದಿನಗಳಲ್ಲಿ ಸಿನಿಮಾದ ಪ್ರಚಾರ ಆರಂಭಿಸಲಿದ್ದಾರೆ. ‘ಕಲ್ಕಿ’ ಸಿನಿಮಾದ ಬಳಿಕ ಹಾರರ್ ಸಿನಿಮಾ ಒಂದರಲ್ಲಿ ಪ್ರಭಾಸ್ ನಟಿಸಲಿದ್ದಾರೆ. ಅದರ ಜೊತೆಗೆ ಹೃತಿಕ್ ರೋಷನ್ ಜೊತೆಗೆ ಒಂದು ಸಿನಿಮಾದಲ್ಲಿ ನಟಿಸಿದ ಬಳಿಕವಷ್ಟೆ ಪೃಥ್ವಿರಾಜ್ ಸುಕುಮಾರ್ ಸಿನಿಮಾದಲ್ಲಿ ಪ್ರಭಾಸ್ ನಟಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ