ಕೋಟಿ ಸಂಭಾವನೆ ಕೊಟ್ಟರೂ ತೆರೆಮೇಲೆ ಪ್ರಿಯಾಮಣಿ ಕಿಸ್ ಮಾಡೋದಿಲ್ಲ ಏಕೆ? ನಟಿ ಕೊಟ್ರು ಉತ್ತರ

ಕಿಸ್ ದೃಶ್ಯಗಳಲ್ಲಿ, ಹಸಿಬಿಸಿ ದೃಶ್ಯಗಳಲ್ಲಿ ನಟಿಸೋಕೆ ಕೆಲವರು ನೋ ಎನ್ನುತ್ತಾರೆ. ಪ್ರಿಯಾಮಣಿ ಅವರು ಕೂಡ ಇದೇ ಸಾಲಿಗೆ ಸೇರುತ್ತಾರೆ.

ಕೋಟಿ ಸಂಭಾವನೆ ಕೊಟ್ಟರೂ ತೆರೆಮೇಲೆ ಪ್ರಿಯಾಮಣಿ ಕಿಸ್ ಮಾಡೋದಿಲ್ಲ ಏಕೆ? ನಟಿ ಕೊಟ್ರು ಉತ್ತರ
ಪ್ರಿಯಾಮಣಿ
Follow us
ರಾಜೇಶ್ ದುಗ್ಗುಮನೆ
|

Updated on:Jun 30, 2023 | 11:42 AM

ಭಾರತೀಯ ಚಿತ್ರರಂಗದಲ್ಲಿ ನಟಿ ಪ್ರಿಯಾಮಣಿಗೆ ಸಖತ್ ಬೇಡಿಕೆ ಇದೆ. ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ‘1 2 3 4 ಗೆಟ್ ಆನ್ ದಿ ಡ್ಯಾನ್ಸ್ ಫ್ಲೋರ್’ ಹಾಡಿನಲ್ಲಿ ಶಾರುಖ್ ಜೊತೆ ಹೆಜ್ಜೆ ಹಾಕಿ ಫೇಮಸ್ ಆದರು. ‘ದಿ ಫ್ಯಾಮಿಲಿ ಮ್ಯಾನ್’ (The Family Man) ಸರಣಿಯಲ್ಲಿ ಅವರು ಮಾಡಿದ ಸುಚಿತ್ರಾ ಪಾತ್ರ ಸಾಕಷ್ಟು ಗಮನ ಸೆಳೆದಿದೆ. ಅವರು ಚಿತ್ರರಂಗಕ್ಕೆ ಕಾಲಿಟ್ಟು 20 ವರ್ಷ ಕಳೆದಿದೆ. ಅವರಿಗೆ ರಾಷ್ಟ್ರ ಪ್ರಶಸ್ತಿ ಕೂಡ ಒಲಿದಿದೆ. ವಿಶೇಷ ಎಂದರೆ ಪ್ರಿಯಾಮಣಿ (Priyamani) ಸಿನಿಮಾಗಳಲ್ಲಿ ಕಿಸ್ ದೃಶ್ಯಗಳನ್ನು ಮಾಡೋಕೆ ಒಪ್ಪುವುದಿಲ್ಲ. ಈ ಬಗ್ಗೆ ಅವರು ಮಾತನಾಡಿದ್ದಾರೆ.

ಸಿನಿಮಾದಲ್ಲಿ ನಟಿಸುವಾಗ ಅದು ಕೇವಲ ಒಂದು ಪಾತ್ರ ಆಗಿರುತ್ತದೆ. ಈ ಕಾರಣಕ್ಕೆ ಕೆಲವರು ಎಂತಹುದೇ ದೃಶ್ಯ ಇದ್ದರೂ ನಟಿಸುತ್ತಾರೆ. ಆದರೆ, ಕೆಲವರು ಮಡಿವಂತಿಕೆ ಕಾಪಾಡಿಕೊಂಡಿದ್ದಾರೆ. ಕಿಸ್ ದೃಶ್ಯಗಳಲ್ಲಿ, ಹಸಿಬಿಸಿ ದೃಶ್ಯಗಳಲ್ಲಿ ನಟಿಸೋಕೆ ನೋ ಎನ್ನುತ್ತಾರೆ. ಪ್ರಿಯಾಮಣಿ ಅವರು ಎರಡನೇ ಸಾಲಿಗೆ ಸೇರುತ್ತಾರೆ.

ಇದನ್ನೂ ಓದಿ: ‘ಇದೇನಾ ಸಭ್ಯತೆ?’; ಬಿಗ್ ಬಾಸ್ ಮನೆಯಲ್ಲಿ ಅರ್ಧ ನಿಮಿಷ ಲಿಪ್ ಕಿಸ್ ಮಾಡಿದ ಸ್ಪರ್ಧಿಗಳು

ಈ ಬಗ್ಗೆ ಪ್ರಿಯಾಮಣಿ ಅವರು ಮಾತನಾಡಿದ್ದಾರೆ. ನ್ಯೂಸ್​18 ಇಂಗ್ಲಿಷ್​ಗೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ‘ತೆರೆಮೇಲೆ ನಾನು ಕಿಸ್ ಮಾಡಲ್ಲ. ಅದಕ್ಕೆ ನಾನು ಯಾವಾಗಲೂ ನೋ ಎನ್ನುತ್ತೇನೆ. ನನಗೆ ಗೊತ್ತು ಅದು ಕೇವಲ ಪಾತ್ರ ಮತ್ತು ಅದು ನನ್ನ ಕೆಲಸ. ಆದರೆ, ಬೇರೆ ಪುರುಷನೊಂದಿಗೆ ತೆರೆಮೇಲೆ ಕಿಸ್ ಮಾಡಲು ನನಗೆ ಇರಿಸುಮುರುಸು ಉಂಟಾಗುತ್ತದೆ. ನಾನು ಉತ್ತರ ಕೊಡಬೇಕಾಗಿರುವುದು ನನ್ನ ಗಂಡನಿಗೆ ಮಾತ್ರ’ ಎಂದಿದ್ದಾರೆ ಪ್ರಿಯಾಮಣಿ.

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್ ಇಂದಾಗಿ ಪ್ರಿಯಾಮಣಿಗೆ ಸಿಕ್ತು ಶಾರುಖ್ ಜೊತೆ ಕೆಲಸ ಮಾಡುವ ಅವಕಾಶ

ಆಗಸ್ಟ್ 2017ರಲ್ಲಿ ಮುಸ್ತಫಾ ರಾಜ್ ಅವರನ್ನು ಪ್ರಿಯಾಮಣಿ ಮದುವೆ ಆದರು. ಆ ಬಳಿಕ ಅವರು ಈ ರೀತಿಯ ಪಾತ್ರಗಳನ್ನು ಮಾಡುತ್ತಿಲ್ಲ. ‘ಆ ರೀತಿಯ ದೃಶ್ಯಗಳಲ್ಲಿ ಕಾಣಿಸಿಕೊಳ್ಳದೇ ಇರೋದು ನನ್ನ ಜವಾಬ್ದಾರಿ ಎನಿಸುತ್ತದೆ. ಇತ್ತೀಚೆಗೆ ನಿರ್ದೇಶಕರೊಬ್ಬರು ಬಂದು ಸಿನಿಮಾ ಕಥೆ ಹೇಳಿದರು. ಅದರಲ್ಲಿ ಕಿಸ್ ದೃಶ್ಯ ಇತ್ತು. ನಾನು ಮಾಡಲ್ಲ ಎಂದು ಸ್ಪಷ್ಟವಾಗಿ ಹೇಳಿದೆ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:26 am, Fri, 30 June 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ