AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಕೊವಿಡ್​ ಸೋಂಕಿತರಿಗಾಗಿ ಜಾಗತಿಕ ಮಟ್ಟದಲ್ಲಿ ಧ್ವನಿ ಎತ್ತಿದ ಪ್ರಿಯಾಂಕಾ ಪತಿ ನಿಕ್​ ಜೋನಸ್​

ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋನಸ್​ ಮಾತಿನಿಂದ ಪ್ರೇರಣೆಗೊಂಡು ಅನೇಕರು ಹಣ ನೀಡುತ್ತಿದ್ದಾರೆ. ಅಭಿಯಾನ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಕೋಟ್ಯಂತರ ರೂ. ದೇಣಿಗೆ ಸಂಗ್ರಹ ಆಗಿದೆ.

ಭಾರತದ ಕೊವಿಡ್​ ಸೋಂಕಿತರಿಗಾಗಿ ಜಾಗತಿಕ ಮಟ್ಟದಲ್ಲಿ ಧ್ವನಿ ಎತ್ತಿದ ಪ್ರಿಯಾಂಕಾ ಪತಿ ನಿಕ್​ ಜೋನಸ್​
ಪ್ರಿಯಾಂಕಾ ಚೋಪ್ರಾ - ನಿಕ್​ ಜೋನಸ್
ಮದನ್​ ಕುಮಾರ್​
| Edited By: |

Updated on: Apr 30, 2021 | 3:07 PM

Share

ಭಾರತದಲ್ಲಿ ಕೊರೊನಾ ವೈರಸ್​ ಮಿತಿಮೀರಿ ಹಬ್ಬುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತಿದೆ. ಆದರೆ ಅದಕ್ಕೆ ತಕ್ಕಂತೆ ಯಾವುದೇ ವೈದ್ಯಕೀಯ ಸೌಲಭ್ಯ ಸರಿಯಾಗಿ ಸಿಗುತ್ತಿಲ್ಲ. ಆಕ್ಸಿಜನ್​ ಸಿಲಿಂಡರ್​ಗಳಿಗಾಗಿ ರೋಗಿಗಳು ಪರದಾಡುವಂತಾಗಿದೆ. ಈ ಸಂದರ್ಭದಲ್ಲಿ ಅಮೆರಿಕದ ಗಾಯಕ, ನಟಿ ಪ್ರಿಯಾಂಕಾ ಚೋಪ್ರಾ ಪತಿ ನಿಕ್​ ಜೋನಸ್​ ಅವರು ಭಾರತಕ್ಕಾಗಿ ಮಿಡಿಯುತ್ತಿದ್ದಾರೆ. ಭಾರತದಲ್ಲಿನ ಕೊವಿಡ್​ ಸೋಂಕಿತರಿಗೆ ಸಹಾಯ ಮಾಡಲು ಅವರು ಮುಂದೆ ಬಂದಿದ್ದಾರೆ.

ಪ್ರಿಯಾಂಕಾ ಚೋಪ್ರಾ ಅವರನ್ನು ಮದುವೆ ಆಗುವ ಮೂಲಕ ನಿಕ್​ ಜೋನಸ್​ ಭಾರತದ ಅಳಿಯನಾದರು. ಅಮೆರಿಕದಲ್ಲಿ ನೆಲೆಸಿದ್ದರೂ ಕೂಡ ಅವರು ಪ್ರಿಯಾಂಕಾ ಜೊತೆ ಸೇರಿ ಭಾರತೀಯ ಸಂಸ್ಕೃತಿಯನ್ನು ಪಾಲಿಸುತ್ತಿದ್ದಾರೆ. ಅವರು ಭಾರತದ ಪ್ರಮುಖ ಹಬ್ಬಗಳನ್ನು ಆಚರಿಸುತ್ತಾರೆ. ಹಾಗಂತ ಭಾರತದ ಬಗೆಗಿನ ಅವರ ಪ್ರೀತಿ ಕೇವಲ ಹಬ್ಬ ಮಾಡುವುದಕ್ಕಷ್ಟೇ ಸೀಮಿತ ಆಗಿಲ್ಲ. ಸದ್ಯ ದೇಶದಲ್ಲಿ ಕೊರೊನಾ ವೈರಸ್​ ಮರಣ ಮೃದಂಗ ಬಾರಿಸುತ್ತಿದ್ದು, ಈ ವೇಳೆ ಭಾರತಕ್ಕಾಗಿ ದೇಣಿಗೆ ಸಂಗ್ರಹ ಮಾಡಲು ನಿಕ್​ ಜೋನಸ್​ ಮುಂದಾಗಿದ್ದಾರೆ.

ಭಾರತಕ್ಕೆ ವ್ಯಾಕ್ಸಿನ್​ ಕಳಿಸಿಕೊಡಿ ಎಂದು ಅಮೆರಿಕಕ್ಕೆ ಪ್ರಿಯಾಂಕಾ ಚೋಪ್ರಾ ಇತ್ತೀಚೆಗೆ ಮನವಿ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ ಅವರೀಗ ಪತಿ ನಿಕ್​ ಜೋನಸ್​ ಜೊತೆ ಸೇರಿ ದೇಣಿಗೆ ಸಂಗ್ರಹಕ್ಕೆ ಕರೆ ನೀಡಿದ್ದಾರೆ. ಈ ಬಗ್ಗೆ ಪ್ರಿಯಾಂಕಾ ಮತ್ತು ನಿಕ್​ ಜೋನಸ್​ ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ನಿಮ್ಮ ಕೈಯಲ್ಲಿ ಎಷ್ಟು ಸಾಧ್ಯವೋ ಅಷ್ಟು ಸಹಾಯವನ್ನು ಮಾಡಿ ಎಂದು ಅವರು ಕೋರಿದ್ದಾರೆ.

‘ಕಳೆದ ತಿಂಗಳಿನಿಂದ ಕೊವಿಡ್​ ಪ್ರಕರಣಗಳ ಸಂಖ್ಯೆ ದಿಢೀರ್​ ಹೆಚ್ಚಾಗಿರುವುದನ್ನು ನಾವು ನೋಡಿದ್ದೇವೆ. ಭಾರತದಲ್ಲಿ ಪರಿಸ್ಥಿತಿ ಕೈ ಮೀರಿದೆ. ಸೋಂಕಿತರ ಸಂಖ್ಯೆ ನೋಡಿದರೆ ಶಾಕಿಂಗ್​ ಆಗಿದೆ. ಇದನ್ನು ಈಗಲೇ ತಡೆಯಬೇಕಿದೆ. ಪ್ರತಿಯೊಬ್ಬರೂ ಸುರಕ್ಷಿತವಾಗುವವರೆಗೆ ಇಲ್ಲಿ ಯಾರೂ ಸೇಫ್​ ಅಲ್ಲ’ ಎಂದು ಕೊವಿಡ್​ನ ಗಂಭೀರತೆಯನ್ನು ಅರ್ಥ ಮಾಡಿಸಲು ಈ ದಂಪತಿ ಪ್ರಯತ್ನಿಸಿದ್ದಾರೆ.

View this post on Instagram

A post shared by GiveIndia (@give_india)

‘ಗೀವ್​ ಇಂಡಿಯಾ’ ಪ್ಲಾಟ್​ಫಾರ್ಮ್​ ಮೂಲಕ ದೇಣಿಗೆ ಸಂಗ್ರಹಿಸಲಾಗುತ್ತಿದೆ. ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋನಸ್​ ಮಾತಿನಿಂದ ಪ್ರೇರಣೆಗೊಂಡು ಅನೇಕರು ಹಣ ನೀಡುತ್ತಿದ್ದಾರೆ. ಅಭಿಯಾನ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಕೋಟ್ಯಂತರ ರೂ. ದೇಣಿಗೆ ಸಂಗ್ರಹ ಆಗಿದೆ.

ಇದನ್ನೂ ಓದಿ: Priyanka Chopra: ಅಮೆರಿಕದಲ್ಲಿ ತಾವು ಸೇಫ್​ ಆಗಿದ್ರೂ ಭಾರತಕ್ಕಾಗಿ ಕಷ್ಟಪಡುತ್ತಿರುವ ಪ್ರಿಯಾಂಕಾ ಚೋಪ್ರಾ

ಪ್ರಿಯಾಂಕಾ ಚೋಪ್ರಾ ನನ್ನ ಅವಕಾಶ ಕಿತ್ತುಕೊಂಡರು; ಮೀರಾ ಚೋಪ್ರಾ ಗಂಭೀರ ಆರೋಪ

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ