AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಸಿನಿಮಾದಲ್ಲಿ ಮಂದಾಕಿನಿ ಆದ ಪ್ರಿಯಾಂಕಾ ಚೋಪ್ರಾ

‘ಎಸ್​ಎಸ್​ಎಂಬಿ 29’ ಸಿನಿಮಾದಿಂದ ಪ್ರಿಯಾಂಕಾ ಚೋಪ್ರಾ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಪೋಸ್ಟರ್ ವೈರಲ್ ಆಗಿದೆ. ಮಂದಾಕಿನಿ ಎಂಬ ಪಾತ್ರವನ್ನು ಅವರು ಮಾಡುತ್ತಿದ್ದಾರೆ. ಎಸ್​ಎಸ್​ ರಾಜಮೌಳಿ ಅವರು ನಿರ್ದೇಶಿಸುತ್ತಿರುವ ಈ ಬಹುನಿರೀಕ್ಷಿತ ಸಿನಿಮಾ ಬಹಳ ಅದ್ದೂರಿಯಾಗಿ ಮೂಡಿಬರುತ್ತಿದೆ.

ರಾಜಮೌಳಿ ಸಿನಿಮಾದಲ್ಲಿ ಮಂದಾಕಿನಿ ಆದ ಪ್ರಿಯಾಂಕಾ ಚೋಪ್ರಾ
Priyanka Chopra
ಮದನ್​ ಕುಮಾರ್​
|

Updated on: Nov 12, 2025 | 10:38 PM

Share

ಅನೌನ್ಸ್ ಆದ ದಿನದಿಂದಲೂ ಮಹೇಶ್ ಬಾಬು (Mahesh Babu) ಅವರ ಹೊಸ ಸಿನಿಮಾ ಭಾರೀ ಹೈಪ್ ಸೃಷ್ಟಿ ಮಾಡಿದೆ. ಈ ಸಿನಿಮಾಗೆ ಎಸ್​ಎಸ್ ರಾಜಮೌಳಿ ಅವರು ನಿರ್ದೇಶನ ಮಾಡುತ್ತಿದ್ದಾರೆ ಎಂಬುದೇ ನಿರೀಕ್ಷೆ ಹೆಚ್ಚಲು ಕಾರಣ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಬಹಿರಂಗ ಆಗಿಲ್ಲ. ತಾತ್ಕಾಲಿಕವಾಗಿ ‘ಎಸ್​ಎಸ್​ಎಂಬಿ29’ (SSMB 29) ಎಂದು ಕರೆಯಲಾಗುತ್ತಿದೆ. ಘಟಾನುಘಟಿ ಸ್ಟಾರ್ ಕಲಾವಿದರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಅವರೆಲ್ಲರ ಫಸ್ಟ್ ಲುಕ್ ಪೋಸ್ಟರ್​ಗಳನ್ನು ರಿಲೀಸ್ ಮಾಡಲಾಗುತ್ತಿದೆ. ಈಗ ಪ್ರಿಯಾಂಕಾ ಚೋಪ್ರಾ ಅವರ ಪೋಸ್ಟರ್ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಮಂದಾಕಿನಿ ಎಂಬ ಪಾತ್ರ ಮಾಡುತ್ತಿದ್ದಾರೆ.

‘ಗ್ರ್ಯಾಂಡ್ ಗ್ಲೋಬ್ ಟ್ರಾಟರ್’ ಕಾರ್ಯಕ್ರಮದ ಮೂಲಕ ಈ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ರಾಜಮೌಳಿ ಅವರು ನಿರ್ಧರಿಸಿದ್ದಾರೆ. ನವೆಂಬರ್ 15ರಂದು ಆ ಕಾರ್ಯಕ್ರಮ ಬಹಳ ಗ್ರ್ಯಾಂಡ್ ಆಗಿ ನಡೆಯಲಿದೆ. ಅದಕ್ಕೂ ಮುನ್ನವೇ ಪ್ರಿಯಾಂಕಾ ಚೋಪ್ರಾ ಅವರ ಫಸ್ಟ್ ಲುಕ್ ಗಮನ ಸೆಳೆದಿದೆ. ಸೀರೆ ಧರಿಸಿ, ಗನ್ ಹಿಡಿದು ಅವರು ಈ ಪೋಸ್ಟರ್​​ನಲ್ಲಿ ಕಾಣಿಸಿಕೊಂಡಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾ ಮೂಲಕ ರಾಜಮೌಳಿ ಅವರು ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದರು. ಹಾಗಾಗಿ ಅವರ ಮುಂದಿನ ಸಿನಿಮಾ ಮೇಲೆ ವಿಶ್ವಾದ್ಯಂತ ಇರುವ ಪ್ರೇಕ್ಷಕರಿಗೆ ನಿರೀಕ್ಷೆ ಇದೆ. ಗ್ಲೋಬ್ ಟ್ರಾಟರ್ ಇವೆಂಟ್‌ ಘೋಷಿಸಿದಾಗಿನಿಂದಲೂ ಭಾರತವಷ್ಟೇ ಅಲ್ಲದೆ ಬೇರೆ ದೇಶಗಳ ಮಂದಿ ಕೂಡ ಕುತೂಹಲ ಇಟ್ಟುಕೊಂಡಿದ್ದಾರೆ. ಈಗಾಗಲೇ ಪೃಥ್ವಿರಾಜ್ ಸುಕುಮಾರನ್ ಅವರ ಫಸ್ಟ್ ಲುಕ್ ಸಾಕಷ್ಟು ಚರ್ಚೆ ಸೃಷ್ಟಿ ಮಾಡಿದೆ.

View this post on Instagram

A post shared by Priyanka (@priyankachopra)

ನವೆಂಬರ್ 15ರಂದು ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಬೃಹತ್‌ ಕಾರ್ಯಕ್ರಮ ನಡೆಯಲಿದೆ. ಇದು ಭಾರತೀಯ ಚಿತ್ರರಂಗದಲ್ಲೇ ಅತಿ ಗ್ರ್ಯಾಂಡ್ ಆದಂತಹ ಕಾರ್ಯಕ್ರಮ ಆಗಲಿದೆ. 50,000ಕ್ಕೂ ಹೆಚ್ಚು ಅಭಿಮಾನಿಗಳು ಇದರಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಅಂದು ರಾಜಮೌಳಿ ಅವರು ‘ಎಸ್​ಎಸ್​ಎಂಬಿ 29’ ಸಿನಿಮಾದ ಬಗ್ಗೆ ಅತಿ ಮುಖ್ಯವಾದ ಮಾಹಿತಿಗಳನ್ನು ಬಿಟ್ಟುಕೊಡುವ ನಿರೀಕ್ಷೆ ಇದೆ.

ಇದನ್ನೂ ಓದಿ: ಸಖತ್ ಎಂಜಾಯ್ ಮಾಡಿದ ಪ್ರಿಯಾಂಕಾ ಚೋಪ್ರಾ; ಫೋಟೋಗಳೇ ಸಾಕ್ಷಿ

ಪ್ರಿಯಾಂಕಾ ಚೋಪ್ರಾ ಅವರು ಭಾರತೀಯ ಸಿನಿಮಾಗಳಲ್ಲಿ ನಟಿಸದೇ ಬಹಳ ಸಮಯ ಕಳೆದಿತ್ತು. ಹಾಲಿವುಡ್ ಚಿತ್ರಗಳಲ್ಲೇ ಅವರು ಬ್ಯುಸಿ ಆಗಿದ್ದರು. ಆದರೆ ‘ಎಸ್​ಎಸ್​ಎಂಬಿ 29’ ಮೂಲಕ ಅವರು ಮತ್ತೆ ಕಮ್​​ಬ್ಯಾಕ್ ಮಾಡುತ್ತಿದ್ದಾರೆ. ಆ ಕಾರಣದಿಂದಲೂ ಈ ಚಿತ್ರ ನಿರೀಕ್ಷೆ ಹೆಚ್ಚಿಸಿದೆ. ಮಹೇಶ್ ಬಾಬು ಅವರ ಫಸ್ಟ್ ಲುಕ್ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು