Nick Jonas: ರೋಮ್​ನಲ್ಲಿ ಸಿಕ್ಕಾಪಟ್ಟೆ ರೊಮ್ಯಾಂಟಿಕ್​ ಆದ ನಿಕ್​ ಜೋನಸ್​; ಪ್ರಿಯಾಂಕಾ ಚೋಪ್ರಾ ತುಟಿಗೆ ಸಿಹಿ ಮುತ್ತು

ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋನಸ್​ ಅವರ ವಿಡಿಯೋ ವೈರಲ್​ ಆಗಿದೆ. ಇಬ್ಬರ ನಡುವಿನ ಪ್ರೀತಿ ಕಂಡು ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

Nick Jonas: ರೋಮ್​ನಲ್ಲಿ ಸಿಕ್ಕಾಪಟ್ಟೆ ರೊಮ್ಯಾಂಟಿಕ್​ ಆದ ನಿಕ್​ ಜೋನಸ್​; ಪ್ರಿಯಾಂಕಾ ಚೋಪ್ರಾ ತುಟಿಗೆ ಸಿಹಿ ಮುತ್ತು
ನಿಕ್ ಜೋನಸ್, ಪ್ರಿಯಾಂಕಾ ಚೋಪ್ರಾ

Updated on: Apr 21, 2023 | 10:54 AM

ಮುಖ್ಯಾಂಶಗಳು

  • ರೋಮ್​ ನಗರದಲ್ಲಿ ಕಾಲ ಕಳೆಯುತ್ತಿರುವ ಪ್ರಿಯಾಂಕಾ ಚೋಪ್ರಾ-ನಿಕ್​ ಜೋನಸ್​
  • ವೈರಲ್​ ಆಗಿದೆ ನಿಕ್​ ಜೋನಸ್​ ಹಂಚಿಕೊಂಡಿರುವ ರೊಮ್ಯಾಂಟಿಕ್​ ವಿಡಿಯೋ
  • ‘ಸಿಟಾಡೆಲ್​’ ವೆಬ್​ ಸಿರೀಸ್ ಬಿಡುಗಡೆಗೂ ಮುನ್ನ ಟ್ರಿಪ್​ ಮಾಡುತ್ತಿರುವ ಪ್ರಿಯಾಂಕಾ

​ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ನಿಕ್​ ಜೋನಸ್​ ಜೊತೆ ಹಾಯಾಗಿ ಸಂಸಾರ ಮಾಡುತ್ತಿದ್ದಾರೆ. ಸಿನಿಮಾ ಕೆಲಸಗಳ ಬಿಡುವಿನಲ್ಲಿ ಈ ದಂಪತಿ ಪ್ರವಾಸ ಕೈಗೊಂಡಿದ್ದಾರೆ. ಪ್ರಸ್ತುತ ಇವರು ರೋಮ್​ ನಗರದಲ್ಲಿ ಸುತ್ತಾಡುತ್ತಿದ್ದಾರೆ. ಆ ಖುಷಿಯ ಸಂದರ್ಭದ ವಿಡಿಯೋವನ್ನು ನಿಕ್​ ಜೋನಸ್​ (Nick Jonas) ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ರೋಮ್​ ನಗರಕ್ಕೆ ತೆರಳಿರುವ ನಿಕ್​ ಜೋನಸ್​ ಅವರು ಸಿಕ್ಕಾಪಟ್ಟೆ ರೊಮ್ಯಾಂಟಿಕ್​ ಮೂಡ್​ನಲ್ಲಿದ್ದಾರೆ. ಮುದ್ದಿನ ಪತ್ನಿ ಪ್ರಿಯಾಂಕಾ ಚೋಪ್ರಾ ತುಟಿಗೆ ಅವರು ಸಿಹಿ ಮುತ್ತು ನೀಡಿದ್ದಾರೆ. ಇಬ್ಬರ ನಡುವಿನ ಪ್ರೀತಿ ಕಂಡು ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ರೋಮ್​ ನಗರದಲ್ಲಿ ಬೀದಿಯಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋನಸ್​ ಅವರು ಐಸ್​ಕ್ರೀಂ ಸವಿದಿದ್ದಾರೆ. ಕೆಲವೇ ಗಂಟೆಗಳಲ್ಲಿ ಈ ವಿಡಿಯೋವನ್ನು (Priyanka Chopra Viral Video) ಲಕ್ಷಾಂತರ ಮಂದಿ ಲೈಕ್​ ಮಾಡಿದ್ದಾರೆ.

ಅಮೆರಿಕದಲ್ಲಿ ಪಾಪ್​ ಗಾಯಕನಾಗಿ ನಿಕ್​ ಜೋನಸ್​ ಗುರುತಿಸಿಕೊಂಡಿದ್ದಾರೆ. ಪ್ರಿಯಾಂಕಾ ಚೋಪ್ರಾ ಕೂಡ ಹಾಲಿವುಡ್​ ಮ್ಯೂಸಿಕ್​ ಇಂಡಸ್ಟ್ರಿಯಲ್ಲಿ ಖ್ಯಾತಿ ಗಳಿಸಬೇಕು ಎಂದುಕೊಂಡಿದ್ದರು. ಆದರೆ ಅವರಿಗೆ ಆ ಕ್ಷೇತ್ರದಲ್ಲಿ ಯಶಸ್ಸು ಸಿಗಲಿಲ್ಲ. ನಂತರ ಅವರು ಇಂಗ್ಲಿಷ್​​ ಸಿನಿಮಾ ಮತ್ತು ವೆಬ್​ ಸಿರೀಸ್​ಗಳ ಕಡೆಗೆ ಗಮನ ಹರಿಸಲು ಆರಂಭಿಸಿದರು. ಅದು ಅವರಿಗೆ ಫಲ ನೀಡಿದೆ.

ಇದನ್ನೂ ಓದಿ
Priyanka Chopra: ಫ್ಯಾನ್ಸ್​ ವಾವ್​ ಎನ್ನುವಂತೆ ಗ್ಲಾಮರ್​ ವೇಷ ಧರಿಸಿದ ಪ್ರಿಯಾಂಕಾ ಚೋಪ್ರಾ; ಇಲ್ಲಿವೆ ಫೋಟೋಗಳು
ಶಾಕಿಂಗ್​ ಸತ್ಯದ ಜತೆ ಮೊದಲ ಬಾರಿ ಮಗು ಫೋಟೋ ತೋರಿಸಿದ ಪ್ರಿಯಾಂಕಾ ಚೋಪ್ರಾ-ನಿಕ್​ ಜೋನಸ್​
ಪ್ರಿಯಾಂಕಾ ಚೋಪ್ರಾ ಮಗಳ ಹೆಸರು ಮಾಲ್ತಿ ಮೇರಿ ಚೋಪ್ರಾ ಜೋನಸ್​; ಏನು ಇದರ ಅರ್ಥ?
ಕಪ್ಪು ಸೀರೆ ಧರಿಸಿ ‘ಪ್ರೀ ಆಸ್ಕರ್​ ಪಾರ್ಟಿ’ಯಲ್ಲಿ ಮಿಂಚಿದ ‘ದೇಸಿ ಗರ್ಲ್​’ ಪ್ರಿಯಾಂಕಾ ಚೋಪ್ರಾ

ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋನಸ್​ ನಡುವೆ 10 ವರ್ಷಗಳ ವಯಸ್ಸಿನ ಅಂತರ ಇದೆ. ನಿಕ್​ ಅವರು ಪ್ರಿಯಾಂಕಾಗಿಂತ 10 ವರ್ಷ ಚಿಕ್ಕವರು. ಈ ಜೋಡಿಯ ಪ್ರೀತಿಗೆ ವಯಸ್ಸಿನ ಅಂತರದಿಂದ ಯಾವುದೇ ಅಡ್ಡಿ ಆಗಿಲ್ಲ. ಇಬ್ಬರೂ ಕೂಡ ಖುಷಿಯಾಗಿ ಕಾಲ ಕಳೆಯುತ್ತಿದ್ದಾರೆ. ಇಬ್ಬರ ದೇಶ ಬೇರೆ, ಧರ್ಮ ಕೂಡ ಬೇರೆ. ಇಷ್ಟೆಲ್ಲ ವ್ಯತ್ಯಾಸಗಳು ಇದ್ದರೂ ಕೂಡ ಇವರಿಬ್ಬರು ಅನೇಕರಿಗೆ ಮಾದರಿ ಜೋಡಿಯಾಗಿ ಬದುಕುತ್ತಿದ್ದಾರೆ.

ಇದನ್ನೂ ಓದಿ: Priyanka Chopra: ವಿವಾದದ ಬೆನ್ನಲ್ಲೇ ಮುಂಬೈನಲ್ಲಿನ 7 ಕೋಟಿ ರೂಪಾಯಿ ಆಸ್ತಿ ಮಾರಿಕೊಂಡ ಪ್ರಿಯಾಂಕಾ ಚೋಪ್ರಾ

‘ಸಿಟಾಡೆಲ್​’ ವೆಬ್​ ಸರಣಿಯಲ್ಲಿ ಪ್ರಿಯಾಂಕಾ ಚೋಪ್ರಾ ನಟಿಸಿದ್ದಾರೆ. ಇದರಲ್ಲಿ ರಿಚರ್ಡ್​ ಮ್ಯಾಡನ್​ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅಮೇಜಾನ್​ ಪ್ರೈಂ ವಿಡಿಯೋ ಮೂಲಕ ಏಪ್ರಿಲ್​ 28ರಿಂದ ಈ ಸೀರಿಸ್​ ಬಿತ್ತರ ಆಗಲಿದೆ. ಇತ್ತೀಚೆಗೆ ಇದರ ಪ್ರೀಮಿಯರ್​ ಶೋ ಲಂಡನ್​ನಲ್ಲಿ ನಡೆಯಿತು. ಆ ವೇಳೆ ಕೂಡ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್​ ಜೋನಸ್​ ಅವರು ಆಪ್ತವಾಗಿ ಫೋಟೋಶೂಟ್​ ಮಾಡಿಸಿದ್ದರು. ಆ ಫೋಟೋಗಳು ವೈರಲ್​ ಆಗಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:54 am, Fri, 21 April 23

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us