Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಜೊತೆಗಿನ ಸಿನಿಮಾಗೆ 30 ಕೋಟಿ ರೂ. ಸಂಭಾವನೆ ಪಡೆದ ಪ್ರಿಯಾಂಕಾ ಚೋಪ್ರಾ?

ಬಾಲಿವುಡ್ ಮತ್ತು ಹಾಲಿವುಡ್​ನಲ್ಲಿ ಗುರುತಿಸಿಕೊಂಡಿರುವ ನಟಿ ಪ್ರಿಯಾಂಕಾ ಚೋಪ್ರಾ ಅವರಿಗೆ ತುಂಬ ಬೇಡಿಕೆ ಇದೆ. ರಾಜಮೌಳಿ ನಿರ್ದೇಶನದ ಹೊಸ ಸಿನಿಮಾ ಅವರೇ ನಾಯಕಿ ಎಂದು ಹೇಳಲಾಗುತ್ತಿದೆ. ಈ ಸಿನಿಮಾಗಾಗಿ ಅವರು ದೊಡ್ಡ ಸಂಭಾವನೆ ಪಡೆಯುತ್ತಿದ್ದಾರೆ. ಮಹೇಶ್ ಬಾಬುಗೆ ಜೋಡಿಯಾಗಿ ಪ್ರಿಯಾಂಕಾ ಚೋಪ್ರಾ ನಟಿಸುತ್ತಾರೆ ಎನ್ನಲಾಗಿದೆ.

ಮಹೇಶ್ ಬಾಬು ಜೊತೆಗಿನ ಸಿನಿಮಾಗೆ 30 ಕೋಟಿ ರೂ. ಸಂಭಾವನೆ ಪಡೆದ ಪ್ರಿಯಾಂಕಾ ಚೋಪ್ರಾ?
Mahesh Babu, Priyanka Chopra
Follow us
ಮದನ್​ ಕುಮಾರ್​
|

Updated on: Jan 31, 2025 | 9:28 PM

ಎಸ್​.ಎಸ್​. ರಾಜಮೌಳಿ ಅವರು ‘ಆರ್​ಆರ್​ಆರ್​’ ಸಿನಿಮಾದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡರು. ಈಗ ಅವರ ಮುಂದಿನ ಸಿನಿಮಾ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಟಾಲಿವುಡ್​ ಸ್ಟಾರ್​ ನಟ ಮಹೇಶ್ ಬಾಬು ಜೊತೆ ರಾಜಮೌಳಿ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಪಾತ್ರವರ್ಗ ಮತ್ತು ತಾಂತ್ರಿಕ ಬಳಗದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ. ವರದಿಗಳ ಪ್ರಕಾರ, ಪ್ರಿಯಾಂಕಾ ಚೋಪ್ರಾ ಅವರು ಈ ಸಿನಿಮಾಗೆ ನಾಯಕಿಯಾಗಲಿದ್ದಾರೆ. ತಾತ್ಕಾಲಿಕವಾಗಿ ಈ ಚಿತ್ರವನ್ನು ‘ಎಸ್​ಎಸ್​ಎಂಬಿ 29’ ಎಂದು ಕರೆಯಲಾಗುತ್ತಿದೆ. ಈ ಸಿನಿಮಾಗೆ ಪ್ರಿಯಾಂಕಾ ಚೋಪ್ರಾ ಪಡೆಯುತ್ತಿರುವ ಸಂಭಾವನೆ ಮೊತ್ತ ಎಷ್ಟು ಎಂಬುದು ಕೇಳಿ ಎಲ್ಲರೂ ಹೌಹಾರಿದ್ದಾರೆ.

ವರದಿಗಳ ಪ್ರಕಾರ, ಪ್ರಿಯಾಂಕಾ ಚೋಪ್ರಾ ಅವರು ‘ಎಸ್​ಎಸ್​ಎಂಬಿ 29’ ಸಿನಿಮಾಗೆ ಬರೋಬ್ಬರಿ 30 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ. ಈ ಸಿನಿಮಾ ಅದ್ದೂರಿ ಬಜೆಟ್​ನಲ್ಲಿ ತಯಾರಾಗುತ್ತಿದೆ. ಹಾಗಾಗಿ ನಿರ್ಮಾಪಕರು ಪ್ರಿಯಾಂಕಾ ಚೋಪ್ರಾಗೆ ಇಷ್ಟು ಸಂಭಾವನೆ ನೀಡಲು ಸಿದ್ಧರಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಈ ಸಿನಿಮಾ ಸಲುವಾಗಿಯೇ ಪ್ರಿಯಾಂಕಾ ಚೋಪ್ರಾ ಅವರು ಅಮೆರಿಕದಿಂದ ಹೈದರಾಬಾದ್​ಗೆ ಬಂದಿದ್ದಾರೆ.

ಅಮೆರಿಕದ ಗಾಯಕ ನಿಕ್ ಜೋನಸ್ ಜೊತೆ ಮದುವೆ ಆದ ಬಳಿಕ ಪ್ರಿಯಾಂಕಾ ಚೋಪ್ರಾ ಅವರು ಅಮೆರಿಕದಲ್ಲಿ ನೆಲೆಸಿದ್ದಾರೆ. ಅವರು ಬಾಲಿವುಡ್ ಸಿನಿಮಾಗಳನ್ನು ಒಪ್ಪಿಕೊಳ್ಳದೇ ಬಹಳ ಸಮಯ ಆಗಿದೆ. ಈಗ ಅವರಿಗೆ ಹಾಲಿವುಡ್​ನಲ್ಲೂ ಡಿಮ್ಯಾಂಡ್ ಇದೆ. ಅದಕ್ಕೆ ತಕ್ಕಂತೆ ಸಂಭಾವನೆ ಕೂಡ ಜಾಸ್ತಿ ಆಗಿದೆ. ಟಾಲಿವುಡ್ ಸಿನಿಮಾದಲ್ಲಿ ಅವರು ನಟಿಸಿದರೆ ಜಾಗತಿಕ ಮಟ್ಟದಲ್ಲಿ ಚಿತ್ರಕ್ಕೆ ಹೈಪ್ ಸಿಗುತ್ತದೆ. ಹಾಗಾಗಿ ದೊಡ್ಡ ಸಂಭಾವನೆಗೆ ಅವರು ಬೇಡಿಕೆ ಇಟ್ಟಿದ್ದಾರೆ ಎಂಬ ಗಾಸಿಪ್ ಹಬ್ಬಿದೆ.

ಇದನ್ನೂ ಓದಿ: ರಾಜಮೌಳಿಯ ಮುಂದಿನ ಸಿನಿಮಾ ಬಗ್ಗೆ ತಂದೆ ಕೊಟ್ಟರು ಮಾಹಿತಿ

ಮಹೇಶ್ ಬಾಬು ಅವರು ‘ಎಸ್​ಎಸ್​ಎಂಬಿ 29’ ಸಿನಿಮಾಗಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರ ಗೆಟಪ್ ಕೂಡ ಬದಲಾಗಲಿದೆ. ಈಗಾಗಲೇ ಈ ಚಿತ್ರಕ್ಕೆ ಶೂಟಿಂಗ್ ನಡೆಯುತ್ತಿದ್ದು, ಆ ವಿಚಾರವನ್ನು ಗುಟ್ಟಾಗಿ ಇಡಲಾಗಿದೆ ಎಂದು ಕೂಡ ಹೇಳಲಾಗುತ್ತಿದೆ. ಎಂದಿನಂತೆ ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ ಅವರು ಈ ಸಿನಿಮಾಗೆ ಕಥೆ ಬರೆದಿದ್ದಾರೆ. ಎಂಎಂ ಕೀರವಾಣಿ ಅವರು ಸಂಗೀತ ನೀಡುತ್ತಿದ್ದಾರೆ. ರಾಜಮೌಳಿ ಮತ್ತು ಮಹೇಶ್ ಬಾಬು ಕಾಂಬಿನೇಷನ್ ಎಂಬ ಕಾರಣಕ್ಕೆ ಅಭಿಮಾನಿಗಳ ಮನದಲ್ಲಿ ಸಖತ್ ನಿರೀಕ್ಷೆ ಮನೆ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.