ದಳಪತಿ ಜೊತೆ ಪ್ರಿಯಾಂಕಾ ಚೋಪ್ರಾ; ಅಪರೂಪದ ಫೋಟೋ ಹಂಚಿಕೊಂಡ ಹಾಲಿವುಡ್ ನಟಿ

2002ರ ಏಪ್ರಿಲ್ 12ರಂದು ‘ತಮಿಳನ್’ ಸಿನಿಮಾ ರಿಲೀಸ್ ಆಯಿತು. ಮಜಿತ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾ ರಿಲೀಸ್ ಆಗಿ ಬರೋಬ್ಬರಿ 22 ವರ್ಷಗಳು ಕಳೆದಿವೆ. ಹಾಲಿವುಡ್ ಅಂಗಳಕ್ಕೆ ಹೋದರೂ ಪ್ರಿಯಾಂಕಾ ತಮಗೆ ಮೊದಲು ಅವಕಾಶ ನೀಡಿದ ತಂಡವನ್ನು ಮರೆತಿಲ್ಲ.

ದಳಪತಿ ಜೊತೆ ಪ್ರಿಯಾಂಕಾ ಚೋಪ್ರಾ; ಅಪರೂಪದ ಫೋಟೋ ಹಂಚಿಕೊಂಡ ಹಾಲಿವುಡ್ ನಟಿ
ಪ್ರಿಯಾಂಕಾ ಚೋಪ್ರಾ-ವಿಜಯ್
Follow us
ರಾಜೇಶ್ ದುಗ್ಗುಮನೆ
|

Updated on: Apr 13, 2024 | 5:16 PM

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಹಿಂದಿ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ಅವರಿಗೆ ಹಿಂದಿ ಸಿನಿಮಾ ರಂಗದಲ್ಲಿ ಸಖತ್ ಬೇಡಿಕೆ ಇದೆ. ವಿಶೇಷ ಎಂದರೆ ಅವರು ಬಣ್ಣದ ಬದುಕು ಆರಂಭಿಸಿದ್ದು ತಮಿಳಿನ ‘ತಮಿಳನ್’ ಸಿನಿಮಾ ಮೂಲಕ. ಈ ಸಿನಿಮಾ ರಿಲೀಸ್ ಆಗಿ 22 ವರ್ಷಗಳು ಕಳೆದಿವೆ. ಇದನ್ನು ಪ್ರಿಯಾಂಕಾ ಚೋಪ್ರಾ ಸೋಶಿಯಲ್ ಮೀಡಿಯಾದಲ್ಲಿ ನೆನಪಿಸಿಕೊಂಡಿದ್ದಾರೆ. ಅಪರೂಪದ ಫೋಟೋನ ಅವರು ಶೇರ್ ಮಾಡಿದ್ದಾರೆ.

2002ರ ಏಪ್ರಿಲ್ 12ರಂದು ‘ತಮಿಳನ್’ ಸಿನಿಮಾ ರಿಲೀಸ್ ಆಯಿತು. ಮಜಿತ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ವಿಜಯ್ ಈ ಚಿತ್ರದ ಹೀರೋ. ಈ ಸಿನಿಮಾ ರಿಲೀಸ್ ಆಗಿ ಬರೋಬ್ಬರಿ 22 ವರ್ಷಗಳು ಕಳೆದಿವೆ. ಹಾಲಿವುಡ್ ಅಂಗಳಕ್ಕೆ ಹೋದರೂ ಪ್ರಿಯಾಂಕಾ ತಮಗೆ ಮೊದಲು ಅವಕಾಶ ನೀಡಿದ ತಂಡವನ್ನು ಮರೆತಿಲ್ಲ. ಇನ್​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ಅವರು ಈ ಫೋಟೊ ಹಂಚಿಕೊಂಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ಅವರು 2000ನೇ ಇಸ್ವಿಯಲ್ಲಿ ‘ಮಿಸ್ ವರ್ಲ್ಡ್’ ಆದರು. ಆ ಬಳಿಕ ಅವರು ಒಪ್ಪಿಕೊಂಡ ಮೊದಲ ಸಿನಿಮಾ. ಈ ಚಿತ್ರದಿಂದ ಅವರ ಜನಪ್ರಿಯತೆ ಹೆಚ್ಚಿತು. 2003ರಲ್ಲಿ ‘ಅಂದಾಜ್’ ಸಿನಿಮಾದಲ್ಲಿ ನಟಿಸಿದರು. ಈ ಚಿತ್ರದಲ್ಲಿ ಅಕ್ಷಯ್ ಕುಮಾರ್, ಲಾರಾ ದತ್ತ ಕೂಡ ಬಣ್ಣ ಹಚ್ಚಿದ್ದರು. ಆ ಬಳಿಕ ಪ್ರಿಯಾಂಕಾ ಚೋಪ್ರಾ ಹಾಲಿವುಡ್​ನಲ್ಲಿ ಬ್ಯುಸಿ ಆದರು.

ಪ್ರಿಯಾಂಕಾ ಚೋಪ್ರಾ ಅಮೆರಿಕದ ಪಾಪ್ ಸಿಂಗ್ ನಿಕ್ ಜೋನಸ್​ನ ಮದುವೆ ಆದರು. ಆ ಬಳಿಕ ಅವರು ವಿದೇಶದಲ್ಲಿ ಸೆಟಲ್ ಆದರು. ಸದ್ಯ ಹಾಲಿವುಡ್​ ಸಿನಿಮಾಗಳಲ್ಲಿ ಪ್ರಿಯಾಂಕಾ ನಟಿಸುತ್ತಿದ್ದಾರೆ. ‘ಹೆಡ್ಸ್ ಆಫ್ ಸ್ಟೇಟ್’ ಶೂಟ್​ಗಾಗಿ ಅವರು ಫ್ರಾನ್ಸ್​ನಲ್ಲಿದ್ದಾರೆ. ಇದರ ಜೊತೆ ಮಗಳು ಮಾಲ್ತಿ ಮೇರಿ ಚೋಪ್ರಾ ಜೋನಸ್ ಬಗ್ಗೆಯೂ ಕಾಳಜಿವಹಿಸುತ್ತಿದ್ದಾರೆ.

ಇದನ್ನೂ ಓದಿ: 14 ವರ್ಷಗಳ ಬಳಿಕ ಶೂಟಿಂಗ್​ಗಾಗಿ ಕೇರಳಕ್ಕೆ ಬಂದ ದಳಪತಿ ವಿಜಯ್; ಸಿಕ್ತು ಭರ್ಜರಿ ಸ್ವಾಗತ

ವಿಜಯ್ ವಿಚಾರಕ್ಕೆ ಬರೋದಾದರೆ ಅವರು ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದಾದ ಬಳಿಕ ಅವರು ರಾಜಕೀಯದಲ್ಲಿ ತೊಡಗಿಕೊಳ್ಳಲಿದ್ದಾರೆ. 2026ರ ತಮಿಳುನಾಡು ವಿಧಾನಸಭೆ ಚುನಾವಣೆಗೆ ಅವರು ಸ್ಪರ್ಧೆ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ