AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ಸಿನಿಮಾದ 20 ನಿಮಿಷ ದೃಶ್ಯಕ್ಕೆ ಕತ್ತರಿ? ವಿಜಯ್​​​ಗೆ ನಿರಾಸೆ

Thalapathy Vijay: ‘ಜನ ನಾಯಗನ್’ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ರೀಮೇಕ್ ಸಿನಿಮಾ ಆಗಿದ್ದರೂ ಸಹ ಸಿನಿಮಾಕ್ಕೆ ಸೆನ್ಸಾರ್ ಪ್ರಮಾಣ ಪತ್ರವನ್ನು ಸಿಬಿಎಫ್​​ಸಿ ನಿರಾಕರಿಸಿದ್ದು, ಚಿತ್ರತಂಡ ನ್ಯಾಯಾಲಯದ ಮೆಟ್ಟಿಲೇರಿದೆ. ಆದರೆ ನ್ಯಾಯಾಲಯದಲ್ಲಿ ಸಹ ಚಿತ್ರತಂಡಕ್ಕೆ ನ್ಯಾಯ ವಿಳಂಬ ಆಗುತ್ತಿದೆ. ತಮಿಳುನಾಡು ವಿಧಾನಸಭೆ ಚುನಾವಣೆ ಸಹ ಸನಿಹದಲ್ಲೇ ಇದ್ದು, ಒಂದೊಮ್ಮೆ ಚುನಾವಣೆ ಘೋಷಣೆ ಆಗಿಬಿಟ್ಟರೆ ಸಿನಿಮಾ ಬಿಡುಗಡೆ ಎರಡು ತಿಂಗಳು ಮುಂದೂಡಲೇ ಬೇಕಾಗುತ್ತದೆ. ಇದೇ ಕಾರಣಕ್ಕೆ ಇದೀಗ ಚಿತ್ರತಂಡವು, ಆಗಿದ್ದು ಆಗಲೆಂದು 20 ನಿಮಿಷಗಳ ದೃಶ್ಯಕ್ಕೆ ಕತ್ತರಿ ಹಾಕಲು ಒಪ್ಪಿದೆ ಎನ್ನಲಾಗುತ್ತಿದೆ.

‘ಜನ ನಾಯಗನ್’ ಸಿನಿಮಾದ 20 ನಿಮಿಷ ದೃಶ್ಯಕ್ಕೆ ಕತ್ತರಿ? ವಿಜಯ್​​​ಗೆ ನಿರಾಸೆ
ಜನ ನಾಯಗನ್
ಮಂಜುನಾಥ ಸಿ.
|

Updated on: Feb 03, 2026 | 8:09 PM

Share

ದಳಪತಿ ವಿಜಯ್ (Thalapathy Vijay) ನಟನೆಯ ಕೊನೆಯ ಸಿನಿಮಾ ಎನ್ನಲಾಗಿರುವ ‘ಜನ ನಾಯಗನ್’ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ರೀಮೇಕ್ ಸಿನಿಮಾ ಆಗಿದ್ದರೂ ಸಹ ಸಿನಿಮಾಕ್ಕೆ ಸೆನ್ಸಾರ್ ಪ್ರಮಾಣ ಪತ್ರವನ್ನು ಸಿಬಿಎಫ್​​ಸಿ ನಿರಾಕರಿಸಿದ್ದು, ಚಿತ್ರತಂಡ ನ್ಯಾಯಾಲಯದ ಮೆಟ್ಟಿಲೇರಿದೆ. ಆದರೆ ನ್ಯಾಯಾಲಯದಲ್ಲಿ ಸಹ ಚಿತ್ರತಂಡಕ್ಕೆ ನ್ಯಾಯ ವಿಳಂಬ ಆಗುತ್ತಿದೆ. ತಮಿಳುನಾಡು ವಿಧಾನಸಭೆ ಚುನಾವಣೆ ಸಹ ಸನಿಹದಲ್ಲೇ ಇದ್ದು, ಒಂದೊಮ್ಮೆ ಚುನಾವಣೆ ಘೋಷಣೆ ಆಗಿಬಿಟ್ಟರೆ ಸಿನಿಮಾ ಬಿಡುಗಡೆ ಎರಡು ತಿಂಗಳು ಮುಂದೂಡಲೇ ಬೇಕಾಗುತ್ತದೆ. ಇದೇ ಕಾರಣಕ್ಕೆ ಇದೀಗ ಚಿತ್ರತಂಡವು, ಆಗಿದ್ದು ಆಗಲೆಂದು 20 ನಿಮಿಷಗಳ ದೃಶ್ಯಕ್ಕೆ ಕತ್ತರಿ ಹಾಕಲು ಒಪ್ಪಿದೆ ಎನ್ನಲಾಗುತ್ತಿದೆ.

‘ಜನ ನಾಯಗನ್’ ಸಿನಿಮಾವು ತೆಲುಗಿನ ‘ಭಗವಂತ ಕೇಸರಿ’ ಸಿನಿಮಾದ ರೀಮೇಕ್ ಆಗಿದೆ. ಆದರೆ ವಿಜಯ್ ಅವರಿಗೆ ರಾಜಕೀಯವಾಗಿ ಅನುಕೂಲವಾಗಲೆಂದು ಕೆಲವು ದೃಶ್ಯಗಳನ್ನು, ಸಂಭಾಷಣೆಗಳನ್ನು ಸೇರಿಸಲಾಗಿದೆಯಂತೆ. ವಿಜಯ್ ಅವರ ರಾಜಕೀಯ ಪಕ್ಷದ ಸಿದ್ಧಾಂತ, ಆದರ್ಶಗಳ ಪ್ರಚಾರ ಮಾಡುವಂಥ ಕೆಲವು ಸಂಭಾಷಣೆಗಳಿವೆ, ಜೊತೆಗೆ ವಿಪಕ್ಷಗಳನ್ನು ಟೀಕೆ ಮಾಡುವ ಕೆಲವು ಸಂಭಾಷಣೆ, ದೃಶ್ಯಗಳು ಸಿನಿಮಾನಲ್ಲಿದ್ದು ಇದೇ ಕಾರಣಕ್ಕೆ ಸಿಬಿಎಫ್​​ಸಿ ‘ಜನ ನಾಯಗನ್’ಗೆ ಸೆನ್ಸಾರ್ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕಿದೆ ಎನ್ನಲಾಗಿದೆ.

ನ್ಯಾಯಾಲಯದಲ್ಲಿ ಪ್ರಕರಣ ತಡವಾಗುವ ಸಂಭವ ಇರುವ ಕಾರಣ, ಚಿತ್ರತಂಡವು ಇದೀಗ ಎಲ್ಲ ರಾಜಕೀಯ ಸಂಬಂಧಿಸಿದ ದೃಶ್ಯಗಳಿಗೂ ಕತ್ತರಿ ಹಾಕಲು ನಿರ್ಧರಿಸಿದೆ ಎನ್ನಲಾಗುತ್ತಿದೆ. ಸಿನಿಮಾನಲ್ಲಿರುವ ರಾಜಕೀಯ ಅಂಶಗಳಿಂದಾಗಿಯೇ ಸಿನಿಮಾ ವಿವಾದಕ್ಕೆ ಸಿಲುಕಿದ್ದು, ವಿವಾದಕ್ಕೆ ಕಾರಣವಾದ ಎಲ್ಲ ದೃಶ್ಯಗಳು, ಸಂಭಾಷಣೆಗಳನ್ನು ತೆಗೆದು ಹಾಕಲು ನಿರ್ಮಾಪಕರು ನಿರ್ಧರಿಸಿದ್ದಾರಂತೆ. ಇದರಿಂದ, ನ್ಯಾಯಾಲಯದ ವಿಚಾರಣೆ ಇಲ್ಲದೆ, ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಲಿದ್ದು, ಸಿನಿಮಾ ಬಿಡುಗಡೆಗೆ ಯಾವುದೇ ಸಮಸ್ಯೆ ಆಗುವುದಿಲ್ಲ.

ಇದನ್ನೂ ಓದಿ:ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ

ದಳಪತಿ ವಿಜಯ್ ಅವರು ‘ತಮಿಳಗ ವೆಟ್ರಿ ಕಳಗಮ್’ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿದ್ದಾರೆ. ಕೆಲವೇ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ಘೋಷಣೆ ಆಗಲಿದ್ದು, ತಮಿಳುನಾಡಿನ ಎಲ್ಲ ಕ್ಷೇತ್ರದಿಂದಲೂ ವಿಜಯ್ ಅವರ ಪಕ್ಷದ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ. ‘ಜನ ನಾಯಗನ್’ ಸಿನಿಮಾವನ್ನು ತಮ್ಮ ಪಕ್ಷದ ಪ್ರಚಾರಕ್ಕೆ ಬಳಸುವ ಯೋಜನೆ ಹಾಕಿಕೊಂಡಿದ್ದರು ವಿಜಯ್, ಆದರೆ ಸಿನಿಮಾದ ಬಿಡುಗಡೆಯೇ ಇಕ್ಕಟ್ಟಿಗೆ ಸಿಲುಕಿದೆ.

‘ಜನ ನಾಯಗನ್’ ಸಿನಿಮಾವನ್ನು ಎಚ್ ವಿನೋದ್ ನಿರ್ದೇಶನ ಮಾಡಿದ್ದು, ಸಿನಿಮಾನಲ್ಲಿ ಪೂಜಾ ಹೆಗ್ಡೆ ನಾಯಕಿ. ಮತ್ತೊಂದು ಪ್ರಮುಖ ಪಾತ್ರದಲ್ಲಿ ಮಲಯಾಳಂ ಸ್ಟಾರ್ ನಟಿ ಮಮಿತಾ ಬಿಜು ನಟಿಸಿದ್ದಾರೆ. ಸಿನಿಮಾಕ್ಕೆ ಬಂಡವಾಳ ಹೂಡಿರುವುದು ಕೆವಿಎನ್​​ ನಿರ್ಮಾಣ ಸಂಸ್ಥೆಯ ಮಾಲೀಕ ವೆಂಕಟ್. ಸಂಗೀತ ನೀಡಿರುವುದು ಅನಿರುದ್ಧ್ ರವಿಚಂದ್ರನ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ