K. Manju: ರಾಜಕೀಯ ಪ್ರವೇಶಕ್ಕೆ ಸಜ್ಜಾದ ನಿರ್ಮಾಪಕ ಕೆ. ಮಂಜು; ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ?

‘ಹಿರಿಯರ ಆಶೀರ್ವಾದ ಪಡೆದು ಚುನಾವಣೆಗೆ ಸ್ಪರ್ಧಿಸುತ್ತೇನೆ. ಹಲವು ವರ್ಷಗಳಿಂದ ಸಾಮಾಜಿಕ ಸೇವೆ ಮಾಡುತ್ತಿದ್ದೇನೆ’ ಎಂದು ನಿರ್ಮಾಪಕ ಕೆ. ಮಂಜು ಹೇಳಿದ್ದಾರೆ.

K. Manju: ರಾಜಕೀಯ ಪ್ರವೇಶಕ್ಕೆ ಸಜ್ಜಾದ ನಿರ್ಮಾಪಕ ಕೆ. ಮಂಜು; ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ?
ನಿರ್ಮಾಪಕ ಕೆ. ಮಂಜು
Follow us
ಮದನ್​ ಕುಮಾರ್​
|

Updated on:Mar 31, 2023 | 12:38 PM

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election 2023) ಸ್ಪರ್ಧಿಸಲು ಸಿನಿಮಾರಂಗದ ಹಲವರು ಸಜ್ಜಾಗಿದ್ದಾರೆ. ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್​ ಸಿಗಲಿದೆ ಎಂಬುದು ಶೀಘ್ರದಲ್ಲೇ ಬಹಿರಂಗ ಆಗಲಿದೆ. ಈ ನಡುವೆ ನಿರ್ಮಾಪಕ ಕೆ. ಮಂಜು ಅವರು ರಾಜಕಾರಣಕ್ಕೆ ಎಂಟ್ರಿ ನೀಡುವ ಸೂಚನೆ ಸಿಕ್ಕಿದೆ. ಪದ್ಮನಾಭ ನಗರ (Padmanabha Nagar) ವಿಧಾನಸಭಾ ಕ್ಷೇತ್ರದಿಂದ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. ಈ ಬಗ್ಗೆ ಅವರು ಶೀಘ್ರದಲ್ಲೇ ಅಧಿಕೃತಯಾಗಿ ಘೋಷಣೆ ಮಾಡಲಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕನಾಗಿ ಕೆ. ಮಂಜು (K. Manju) ಅವರು ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಈಗ ಅವರು ರಾಜಕೀಯದ ಕಡೆಗೆ ಆಸಕ್ತಿ ತೋರಿಸುತ್ತಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಂತೆ ಚರ್ಚಿಸಲು ಅವರು ಶೀಘದಲ್ಲೇ ಕೆಲವು ರಾಜಕೀಯ ಮುಖಂಡರ ಜೊತೆ ಮಾತುಕತೆ ನಡೆಸಲಿದ್ದಾರೆ.

‘ನಮ್ಮ ಕೆಲವು ನಾಯಕರನ್ನ ಭೇಟಿ ಮಾಡುತ್ತೇನೆ. ಶೀಘ್ರದಲ್ಲೇ ಎಲ್ಲವೂ ಫೈನಲ್ ಆಗುತ್ತದೆ. ಪದ್ಮನಾಭ ನಗರದಲ್ಲಿ ಒಕ್ಕಲಿಗರ ಮತಗಳು ಜಾಸ್ತಿ ಇವೆ. ನನಗೆ ಹಲವು ನಾಯಕರ ಬೆಂಬಲ ಸಿಗುವ ಸಾಧ್ಯತೆ ಇದೆ. ಹೀಗಾಗಿ ಹಿರಿಯರ ಆಶೀರ್ವಾದ ಪಡೆದು ಚುನಾವಣೆಗೆ ಸ್ಪರ್ಧಿಸುತ್ತೇನೆ. ಹಲವು ವರ್ಷಗಳಿಂದ ಸಾಮಾಜಿಕ ಸೇವೆ ಮಾಡುತ್ತಿದ್ದೇನೆ’ ಎಂದು ಕೆ. ಮಂಜು ಹೇಳಿದ್ದಾರೆ.

ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಅಲರ್ಟ್ ಆದ ಪೊಲೀಸರು, ಗಡಿಭಾಗದ ಚೆಕ್​ಪೋಸ್ಟ್​​ಗಳಲ್ಲಿ ತಪಾಸಣೆ

ಒಂದುವೇಳೆ ಕೆ. ಮಂಜು ಅವರು ಪದ್ಮನಾಭ ನಗರದಿಂದ ಚುನಾವಣೆಗೆ ಸ್ಪರ್ಧಿಸಿದ್ದೇ ಹೌದಾದರೆ ಪೈಪೋಟಿ ಬಲವಾಗಲಿದೆ. ಯಾಕೆಂದರೆ, ಕಳೆದ ಚುನಾವಣೆಗಳಲ್ಲಿ ಈ ಕ್ಷೇತ್ರವು ಪ್ರಮುಖ ಪಕ್ಷಗಳ ಹೊಂದಾಣಿಕೆ ರಾಜಕೀಯಕ್ಕೆ ಸಾಕ್ಷಿ ಆಗಿತ್ತು. ಇದು ಬಿಜೆಪಿಯ ಆರ್​. ಅಶೋಕ್​ ಅವರ ಪ್ರಾಬಲ್ಯ ಇರುವಂತಹ ಕ್ಷೇತ್ರ. ಈ ಬಾರಿ ಕೂಡ ಅವರೇ ಸ್ಪರ್ಧಿಸುವುದು ಬಹುತೇಕ ಖಚಿತ. ಅಶೋಕ್​ ವಿರುದ್ಧ ಕಾಂಗ್ರೆಸ್​ನಿಂದ ಪಿಜಿಆರ್ ಸಿಂಧ್ಯಾ ಅವರು ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ. ಇನ್ನು, ಒಕ್ಕಲಿಗರ ಮತಗಳನ್ನು ಸೆಳಯಲು ಜೆಡಿಎಸ್​ನಿಂದ ಕೆ. ಮಂಜು ಸ್ಪರ್ಧಿಸಿದರೆ ಮೂರೂ ಪಕ್ಷಗಳ ನಡುವೆ ಹಣಾಹಣಿ ಜೋರಾಗಲಿದೆ.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

ವಿಧಾನಸಭಾ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:47 am, Fri, 31 March 23

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ