AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ನಿರ್ಮಾಪಕರಿಗೆ ಪ್ರಮುಖ ಜವಾಬ್ದಾರಿ ವಹಿಸಿದ ಸಿಎಂ ವಿಜಯ್

Producer K Venkat Narayan: ವಿಜಯ್ ನಟಿಸಿರುವ ‘ಜನ ನಾಯಗನ್’ ಸಿನಿಮಾದ ನಿರ್ಮಾಪಕ, ಕೆವಿಎನ್ ಪ್ರೊಡಕ್ಷನ್​​ನ ಮಾಲೀಕ ಕೆ ವೆಂಕಟ್ ನಾರಾಯಣ ಅವರಿಗೆ ವಿಜಯ್ ಅವರು ಮಹತ್ವದ ಜವಾಬ್ದಾರಿಯನ್ನು ವಹಿಸಿದ್ದಾರೆ. ವೆಂಕಟ್ ಅವರನ್ನು ನವದೆಹಲಿಯಲ್ಲಿ ತಮಿಳುನಾಡು ಸರ್ಕಾರದ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ನೇಮಕಾತಿಯು ರಾಜಕೀಯ ಮತ್ತು ಸಿನಿಮಾ ವಲಯದಲ್ಲಿ ಸಾಕಷ್ಟು ಗಮನ ಸೆಳೆದಿದೆ. ಚರ್ಚೆಗೂ ಸಹ ಕಾರಣವಾಗಿದೆ.

‘ಜನ ನಾಯಗನ್’ ನಿರ್ಮಾಪಕರಿಗೆ ಪ್ರಮುಖ ಜವಾಬ್ದಾರಿ ವಹಿಸಿದ ಸಿಎಂ ವಿಜಯ್
Kvn Vijay
ಮಂಜುನಾಥ ಸಿ.
|

Updated on: Jun 27, 2026 | 9:55 PM

Share

ದಳಪತಿ ವಿಜಯ್ (Thalapathy Vijay) ಅವರು ಸಿಎಂ ಆದ ಬಳಿಕ ಕೆಲವು ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದಾರೆ. ವಿವಿಧ ಹುದ್ದೆಗೆ ಕೆಲವು ಪ್ರತಿಭಾವಂತರನ್ನು, ಗೌರವಾನ್ವಿತರನ್ನು, ತಮ್ಮ ಆಪ್ತರಗಳನ್ನು ನೇಮಿಸುವ ಕಾರ್ಯವನ್ನೂ ಸಹ ಜೊತೆ-ಜೊತೆಯಾಗಿ ಮಾಡುತ್ತಿದ್ದಾರೆ. ಇದೀಗ ನಟ ವಿಜಯ್ ಅವರ ನಿರ್ಣಯವೊಂದು ಹಲವರಿಗೆ ಅಚ್ಚರಿ ತಂದಿದೆ. ವಿಜಯ್ ಅವರು ತಮ್ಮ ಕೊನೆಯ ಸಿನಿಮಾ, ಇನ್ನೂ ಬಿಡುಗಡೆ ಆಗದ ‘ಜನ ನಾಯಗನ್’ನ ನಿರ್ಮಾಪಕರಿಗೆ ಸರ್ಕಾರದ ಪ್ರಮುಖ ಜವಾಬ್ದಾರಿಯೊಂದನ್ನು ವಹಿಸಿದ್ದಾರೆ.

ವಿಜಯ್ ನಟಿಸಿರುವ ‘ಜನ ನಾಯಗನ್’ ಸಿನಿಮಾದ ನಿರ್ಮಾಪಕ, ಕೆವಿಎನ್ ಪ್ರೊಡಕ್ಷನ್​​ನ ಮಾಲೀಕ ಕೆ ವೆಂಕಟ್ ನಾರಾಯಣ ಅವರಿಗೆ ವಿಜಯ್ ಅವರು ಮಹತ್ವದ ಜವಾಬ್ದಾರಿಯನ್ನು ವಹಿಸಿದ್ದಾರೆ. ವೆಂಕಟ್ ಅವರನ್ನು ನವದೆಹಲಿಯಲ್ಲಿ ತಮಿಳುನಾಡು ಸರ್ಕಾರದ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ನೇಮಕಾತಿಯು ರಾಜಕೀಯ ಮತ್ತು ಸಿನಿಮಾ ವಲಯದಲ್ಲಿ ಸಾಕಷ್ಟು ಗಮನ ಸೆಳೆದಿದೆ. ಚರ್ಚೆಗೂ ಸಹ ಕಾರಣವಾಗಿದೆ.

ತಮಿಳುನಾಡು ಸರ್ಕಾರವು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ವೆಂಕಟ್ ನಾರಾಯಣ ಅವರು ತಮ್ಮ ಹೊಸ ಹುದ್ದೆಯ ಮೂಲಕ ನವದೆಹಲಿಯಲ್ಲಿ ತಮಿಳುನಾಡು ಸರ್ಕಾರವನ್ನು ಪ್ರತಿನಿಧಿಸಲಿದ್ದಾರೆ. ಈ ಹುದ್ದೆಯು ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವಿನ ಸಂಪರ್ಕವನ್ನು ಬಲಪಡಿಸುವ ಹುದ್ದೆಯಾಗಿರಲಿದೆ. ವೆಂಕಟ್ ಅವರ ಆಡಳಿತಾತ್ಮಕ ಅನುಭವ ಮತ್ತು ರಾಜಕೀಯ ಸಂಪರ್ಕಗಳನ್ನು ಪರಿಗಣಿಸಿ ಈ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾಗಳು: ಪಟ್ಟಿ ಇಲ್ಲಿದೆ

ಕೆ ವೆಂಕಟ್ ನಾರಾಯಣ್ ಅವರು ಉದ್ಯಮಿ ಆಗಿದ್ದವರು. ಬಳಿಕ ಸಿನಿಮಾ ನಿರ್ಮಾಣಕ್ಕೆ ಇಳಿದರು. ಈಗ ಅವರು ಸಿನಿಮಾ ರಂಗದಿಂದ ನೇರವಾಗಿ ಸರ್ಕಾರದ ಆಡಳಿತಾತ್ಮಕ ಮಟ್ಟಕ್ಕೆ ಏರಿದ್ದಾರೆ. ಚಿತ್ರರಂಗದ ವ್ಯಕ್ತಿಗಳು ರಾಜಕೀಯದಲ್ಲಿ ಸಕ್ರಿಯರಾಗುವುದು ಹೊಸದೇನಲ್ಲ. ಇಂತಹ ಉನ್ನತ ಸರ್ಕಾರಿ ಹುದ್ದೆಯಲ್ಲಿ ನಿರ್ಮಾಪಕರೊಬ್ಬರು ನೇಮಕವಾಗಿರುವುದು ತಮಿಳುನಾಡಿನಲ್ಲಿ ಚರ್ಚೆಗೆ ಗ್ರಾಸವಾಗಿದೆ.

ತಮ್ಮ ನೇಮಕಾತಿಯ ಕುರಿತು ಪ್ರತಿಕ್ರಿಯಿಸಿರುವ ವೆಂಕಟ ನಾರಾಯಣ, ಸರ್ಕಾರ ತಮಗೆ ನೀಡಿರುವ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವುದಾಗಿ ಮತ್ತು ತಮಿಳುನಾಡಿನ ಅಭಿವೃದ್ಧಿಗಾಗಿ ದೆಹಲಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. ಅವರ ಈ ಹೊಸ ಪ್ರಯಾಣವು ಯಶಸ್ವಿಯಾಗಲಿ ಎಂದು ಸಿನಿಮಾ ಉದ್ಯಮದ ಕೆಲ ಗಣ್ಯರು ಶುಭ ಹಾರೈಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ