ನಾನಿ ಸಿನಿಮಾ ಕ್ಲೈಮ್ಯಾಕ್ಸ್ ಶೂಟ್​ಗೆ ವ್ಯಯವಾಯ್ತು ಭರ್ಜರಿ ಹಣ; ಇದರಲ್ಲಿ ಮತ್ತೊಂದು ಸಿನಿಮಾ ಮಾಡಬಹುದು

ನಾನಿ ವೃತ್ತಿ ಜೀವನದಲ್ಲಿ ‘ದಸರಾ’ ಸಿನಿಮಾ ತುಂಬಾ ವಿಶೇಷ ಎನಿಸಿಕೊಳ್ಳಲಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ಶೂಟ್​ಗೆ 5 ಕೋಟಿ ರೂಪಾಯಿ ವ್ಯಯಿಸಲಾಗಿದೆ.

ನಾನಿ ಸಿನಿಮಾ ಕ್ಲೈಮ್ಯಾಕ್ಸ್ ಶೂಟ್​ಗೆ ವ್ಯಯವಾಯ್ತು ಭರ್ಜರಿ ಹಣ; ಇದರಲ್ಲಿ ಮತ್ತೊಂದು ಸಿನಿಮಾ ಮಾಡಬಹುದು
ದಸರಾ ಪೋಸ್ಟರ್
Follow us
ರಾಜೇಶ್ ದುಗ್ಗುಮನೆ
|

Updated on: Mar 25, 2023 | 6:30 AM

ಇತ್ತೀಚೆಗೆ ಪ್ಯಾನ್ ಇಂಡಿಯಾ ಸಿನಿಮಾ ಟ್ರೆಂಡ್ ಜೋರಾಗಿದೆ. ಹಲವು ಭಾಷೆಗಳಲ್ಲಿ ಸಿನಿಮಾ ಮಾಡುವಾಗ ಅದ್ದೂರಿತನಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ನಾನಿ ಹಾಗೂ ಕೀರ್ತಿ ಸುರೇಶ್ (Keerthy Suresh) ನಟನೆಯ ದಸರಾ’ ಸಿನಿಮಾ (Dasara Movie) ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಹಿಂದೆಂದೂ ಮಾಡಿರದ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಸದ್ದು ಮಾಡಿದೆ. ಈಗ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್ ಒಂದು ಕೇಳಿ ಬಂದಿದೆ. ಈ ಚಿತ್ರದ ಕ್ಲೈಮ್ಯಾಕ್ಸ್​ ಶೂಟ್​ಗೆ ನಿರ್ಮಾಪಕರು ಹಣವನ್ನು ನೀರಿನಂತೆ ಖರ್ಚು ಮಾಡಿದ್ದಾರೆ.

ಎಸ್​ಎಲ್​ವಿ ಸಿನಿಮಾಸ್ ಅವರು ‘ದಸರಾ’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಬರೋಬ್ಬರಿ 65 ಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಸಿನಿಮಾ ಸಿದ್ಧಗೊಂಡಿದೆ. ನಾನಿ ವೃತ್ತಿ ಜೀವನದಲ್ಲಿ ಈ ಸಿನಿಮಾ ತುಂಬಾ ವಿಶೇಷ ಎನಿಸಿಕೊಳ್ಳಲಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ಶೂಟ್​ಗೆ 5 ಕೋಟಿ ರೂಪಾಯಿ ವ್ಯಯಿಸಲಾಗಿದೆ. ಇದರಿಂದ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ. ಕ್ಲೈಮ್ಯಾಕ್ಸ್ ದೃಶ್ಯ ಎಷ್ಟು ಅದ್ದೂರಿತನದಿಂದ ಕೂಡಿರಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

‘ದಸರಾ’ ಸಿನಿಮಾ ತೆಲುಗು ಮಾತ್ರವಲ್ಲದೆ, ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ  ತೆರೆಗೆ ಬರುತ್ತಿದೆ. ಈ ಚಿತ್ರಕ್ಕಾಗಿ ನಾನಿ ಅವರು ದೊಡ್ಡ ಕಾಲ್​ಶೀಟ್ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಅವರು 20 ಕೋಟಿ ರೂಪಾಯಿ ಸಂಭಾವನೆ ಪಡೆದುಕೊಂಡಿದ್ದಾರೆ. ಸಿನಿಮಾ ಒಂದಕ್ಕೆ ಅವರು ಇಷ್ಟು ದೊಡ್ಡ ಸಂಭಾವನೆ ಪಡೆದಿದ್ದು ಇದೇ ಮೊದಲು ಎನ್ನಲಾಗುತ್ತಿದೆ.

ಇದನ್ನೂ ಓದಿ: Dasara Movie: ‘ದಸರಾ’ ಟ್ರೇಲರ್​ನಲ್ಲಿ ರಕ್ತಸಿಕ್ತ ಕಹಾನಿಯ ಝಲಕ್​; ಮಾಸ್​ ಆಗಿ ಅಬ್ಬರಿಸಿದ ನಾನಿ

‘ದಸರಾ’ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ. ಶ್ರೀಕಾಂತ್ ಒಡೆಲಾ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಮೊದಲ ಚಿತ್ರದಲ್ಲೇ ಅವರು ದೊಡ್ಡ ಆ್ಯಕ್ಷನ್ ಥ್ರಿಲ್ಲರ್ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಮಾರ್ಚ್  30ರಂದು ಸಿನಿಮಾ ರಿಲೀಸ್ ಆಗುತ್ತಿದೆ.

ಇದನ್ನೂ ಓದಿ: Dasara Movie Teaser: ‘ದಸರಾ’ ಟೀಸರ್​ ಝಲಕ್​ ತೋರಿಸ್ತಾರೆ ರಕ್ಷಿತ್​ ಶೆಟ್ಟಿ; ನಾನಿ ಚಿತ್ರಕ್ಕೆ ಸ್ಟಾರ್​ ನಟರ ಸಾಥ್​

ದಸರಾ ಸಿನಿಮಾದ ಅವಧಿ 2 ಗಂಟೆ 36 ನಿಮಿಷ ಇರಲಿದೆ. ಈ ಚಿತ್ರ ಭರ್ಜರಿ ಸ್ಪರ್ಧೆ ಎದುರಿಸಲಿದೆ. ಕನ್ನಡದಲ್ಲಿ ಧನಂಜಯ್ ನಟನೆಯ ‘ಹೊಯ್ಸಳ’, ಹಿಂದಿಯಲ್ಲಿ ಅಜಯ್ ದೇವಗನ್ ನಟನೆಯ ‘ಭೋಲಾ’ ಸಿನಿಮಾಗಳು ರಿಲೀಸ್ ಆಗುತ್ತಿವೆ. ಹೀಗಾಗಿ, ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಕ್ಲ್ಯಾಶ್ ಏರ್ಪಡುತ್ತಿದೆ. ಈ ಕಾರಣಕ್ಕೆ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡಲು ನಿರ್ಧರಿಸಲಾಗಿದೆ. ಮಾರ್ಚ್ 26ರಂದು ಅನಂತಪುರದಲ್ಲಿ ಅದ್ದೂರಿ ಪ್ರೀ-ರಿಲೀಸ್ ಇವೆಂಟ್ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ