AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ಸಿನಿಮಾಕ್ಕೆ ನಿರ್ಮಾಪಕರೇ ಇರಲಿಲ್ಲ, ಈಗ ಕೋಟಿಗಳಲ್ಲಿ ಗಳಿಕೆ

Maa Inti Bangaram: ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಬಿಡುಗಡೆ ಆಯ್ತು. ಸಿನಿಮಾ ಒಂದು ವಾರದ ಒಳಗೆ 50 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಸಿನಿಮಾ ಅನ್ನು ಕುಟುಂಬ ಪ್ರೇಕ್ಷಕರು ವೀಕ್ಷಿಸುತ್ತಿದ್ದಾರೆ. ವಿಶೇಷವಾಗಿ ಮಹಿಳೆಯರು ಗುಂಪು-ಗುಂಪಾಗಿ ಬಂದು ಸಿನಿಮಾ ನೋಡುತ್ತಿದ್ದಾರೆ. ಅಂದಹಾಗೆ ಈ ಸಿನಿಮಾಕ್ಕೆ ನಿರ್ಮಾಪಕರೇ ಸಿಕ್ಕಿರಲಿಲ್ಲಿವಂತೆ. ಈ ಬಗ್​ಗೆ ಖುದ್ದು ಸಮಂತಾರ ಪತಿ ರಾಜ್ ನಿಧಿಮೋರು ಹೇಳಿಕೊಂಡಿದ್ದಾರೆ.

ಸಮಂತಾ ಸಿನಿಮಾಕ್ಕೆ ನಿರ್ಮಾಪಕರೇ ಇರಲಿಲ್ಲ, ಈಗ ಕೋಟಿಗಳಲ್ಲಿ ಗಳಿಕೆ
Samantha Raj
ಮಂಜುನಾಥ ಸಿ.
|

Updated on: Jun 26, 2026 | 3:24 PM

Share

ಸಮಂತಾ ಋತ್ ಪ್ರಭು (Samantha Ruth Prabhu) ದಕ್ಷಿಣ ಭಾರತದ ಬಲು ಬೇಡಿಕೆಯ ನಟಿಯಾಗಿದ್ದವರು. ಆದರೆ ಕಳೆದ ಕೆಲ ವರ್ಷಗಳಿಂದ ಅವರಿಗೆ ಬೇಡಿಕೆ ಕಡಿಮೆ ಆಗಿದೆ. ಈ ಬಗ್ಗೆ ಕೆಲ ಬಾರಿ ಅವರೇ ಹೇಳಿಕೊಂಡಿದ್ದರು. ಇತ್ತೀಚೆಗೆ ಅವಕಾಶಗಳು ಕಡಿಮೆ ಆಗಿವೆ ಎಂದು. ಇತ್ತೀಚೆಗಷ್ಟೆ ಅವರ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಬಿಡುಗಡೆ ಆಯ್ತು. ಸಿನಿಮಾ ಒಂದು ವಾರದ ಒಳಗೆ 50 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಸಿನಿಮಾ ಅನ್ನು ಕುಟುಂಬ ಪ್ರೇಕ್ಷಕರು ವೀಕ್ಷಿಸುತ್ತಿದ್ದಾರೆ. ವಿಶೇಷವಾಗಿ ಮಹಿಳೆಯರು ಗುಂಪು-ಗುಂಪಾಗಿ ಬಂದು ಸಿನಿಮಾ ನೋಡುತ್ತಿದ್ದಾರೆ. ಅಂದಹಾಗೆ ಈ ಸಿನಿಮಾಕ್ಕೆ ನಿರ್ಮಾಪಕರೇ ಸಿಕ್ಕಿರಲಿಲ್ಲಿವಂತೆ. ಈ ಬಗ್​ಗೆ ಖುದ್ದು ಸಮಂತಾರ ಪತಿ ರಾಜ್ ನಿಧಿಮೋರು ಹೇಳಿಕೊಂಡಿದ್ದಾರೆ.

‘ಮಾ ಇಂಟಿ ಬಂಗಾರಂ’ ಸಿನಿಮಾಕ್ಕೆ ಯಾವುದೇ ಬೆಂಬಲ ಇರಲಿಲ್ಲ. ವಾಸ್ತವವಾಗಿ, ಕೆಲ ನಿರ್ಮಾಪಕರು ನಮ್ಮ ಚಿತ್ರದಿಂದ ಹಿಂದೆ ಸರಿದಿದ್ದರು. ಈ ಚಿತ್ರವು ಒಂದು ರೀತಿಯಲ್ಲಿ ಸ್ವಂತ ದುಡ್ಡಿನಿಂದ ನಿರ್ಮಾಣ ಆಗಿರುವ ಸಿನಿಮಾ. ಏಕೆಂದರೆ ಯಾರೂ ರಿಸ್ಕ್ ತೆಗೆದುಕೊಳ್ಳಲು ಬಯಸಲಿಲ್ಲ. ಆದರೆ ನನ್ನ ವೃತ್ತಿ ಜೀವನದಲ್ಲಿ ಇಂಥಹಾ ರಿಸ್ಕ್​​ಗಳನ್ನು ನಾನು ತೆಗೆದುಕೊಂಡೇ ಬಂದಿದ್ದೀನಿ, ಹಾಗಾಗಿ ನಾವು ಖುದ್ದು ಈ ಸಿನಿಮಾ ನಿರ್ಮಾಣ ಮಾಡಿದೆವು’ ಎಂದು ರಾಜ್ ನಿಧಿಮೋರು ಹೇಳಿದ್ದಾರೆ.

ಸಿನಿಮಾದ ಸಹ ಚಿತ್ರಕತೆಗಾರರೂ ಆಗಿರುವ ರಾಜ್ ನಿಧಿಮೋರು, ಈ ಸಿನಿಮಾಕ್ಕೆ ಬಂಡವಾಳವನ್ನೂ ಹೂಡಿದ್ದಾರೆ. ‘ಮಾ ಇಂಟಿ ಬಂಗಾರಂ’ ಸಿನಿಮಾವನ್ನು ಬಹಳ ಮಿತವ್ಯಯದಲ್ಲಿ ಮಾಡಲಾಗಿದೆ. ದೊಡ್ಡ ಬಜೆಟ್ ಎಂದರೆ ತಮಗೆ ಭಯವಾಗುತ್ತದೆ. ಸ್ವತಂತ್ರ ನಿರ್ಮಾಪಕನಾಗಿ, ನಾನು ಯಾವಾಗಲೂ ಬಜೆಟ್ ಮಿತವಾಗಿರಬೇಕು ಎಂದು ನಂಬುತ್ತೇನೆ. ಬಜೆಟ್ ಸರಿಹೊಂದದ ಚಿತ್ರವನ್ನು ನಾವು ಎಂದಿಗೂ ಮಾಡಿಲ್ಲ. ದೊಡ್ಡ ಬಜೆಟ್‌ಗಳು ನಮಗೆ ಭಯ ತರುತ್ತವೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಸಮಂತಾ ಮೇಲೆ ವೈಯಕ್ತಿಕ ದಾಳಿ ಮಾಡಿದವರಿಗೆ ಕಾಲವೇ ಕೊಟ್ಟಿತು ತಕ್ಕ ಉತ್ತರ

‘ಚಿತ್ರವನ್ನು ಸ್ವತಃ ನಿರ್ಮಾಣ ಮಾಡುವುದು ದೊಡ್ಡ ರಿಸ್ಕ್ ಎಂದು ಎನಿಸಿದರೂ, ಈಗ ಚಿತ್ರದ ಬಾಕ್ಸ್ ಆಫೀಸ್ ಕಲೆಕ್ಷನ್ ಮತ್ತು ಪ್ರೇಕ್ಷಕರಿಂದ ಸಿಗುತ್ತಿರುವ ಪ್ರೀತಿಯನ್ನು ನೋಡುತ್ತಿದ್ದರೆ ಖುಷಿಯಾಗುತ್ತಿದೆ. ವಾಸ್ತವವಾಗಿ, ಮಹಿಳಾ ಪ್ರಧಾನ ಚಿತ್ರಗಳಿಗೆ ಆರಂಭಿಕ ಗಳಿಕೆ ಇರುವುದಿಲ್ಲ ಮತ್ತು ಅವು ಕೇವಲ ಪ್ರಚಾರದಿಂದ ನಂತರ ಯಶಸ್ವಿಯಾಗುತ್ತವೆ ಎಂಬ ಮಿಥ್ಯೆಯನ್ನು ಈ ಚಿತ್ರವು ಮುರಿದಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಚಿತ್ರವು ದಾಖಲೆಗಳನ್ನು ಮುರಿಯುತ್ತಿರುವುದನ್ನು ಕಂಡು, ಅವರು ಮುಂದಿನ ಚಿತ್ರದಲ್ಲಿ ಮಹಿಳಾ ಪ್ರಧಾನ ಸಿನಿಮಾಗಳನ್ನೇ ಮಾಡುವುದಾಗಿಯೂ ಭರವಸೆ ನೀಡಿದ್ದಾರೆ. ‘ಮಾ ಇಂಟಿ ಬಂಗಾರಂ’ ಸಿನಿಮಾ ಹಿಟ್ ಆದ ಬೆನ್ನಲ್ಲೆ, ಸಮಂತಾ ತಾವು ತಾಯಿ ಆಗುತ್ತಿರುವ ಘೋಷಣೆಯನ್ನೂ ಸಹ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ