ಮೈಸೂರು: ಪಠ್ಯ ಪುಸ್ತಕದಲ್ಲಿ ಅಪ್ಪು ಪಾಠ ಸೇರಿಸಲು ಸಹಿ ಸಂಗ್ರಹ; ಸಿಎಂಗೆ ಪತ್ರ ಬರೆದ ಅಭಿಮಾನಿ

ಪುನೀತ್ ರಾಜಕುಮಾರ್ ಅಪ್ರತಿಮ ನಟ. ಸರಳತೆ, ಸ್ನೇಹ ಆದರ್ಶ. ಇವರ ಸಾಮಾಜಿಕ ಸೇವೆಗಳು ಮಕ್ಕಳಿಗೆ ಸ್ಫೂರ್ತಿಯಾಗಬೇಕು. ಹೀಗಾಗಿ ಅವರ ಪಾಠ ಪಠ್ಯ ಪುಸ್ತಕದಲ್ಲಿ ಸೇರಿಸಬೇಕೆಂದು ಪುನೀತ್ ಅಭಿಮಾನಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಮೈಸೂರು: ಪಠ್ಯ ಪುಸ್ತಕದಲ್ಲಿ ಅಪ್ಪು ಪಾಠ ಸೇರಿಸಲು ಸಹಿ ಸಂಗ್ರಹ; ಸಿಎಂಗೆ ಪತ್ರ ಬರೆದ ಅಭಿಮಾನಿ
ಸಹಿ ಸಂಗ್ರಹ
Follow us
| Edited By: sandhya thejappa

Updated on:Nov 15, 2021 | 12:34 PM

ಮೈಸೂರು: ಪಠ್ಯ ಪುಸ್ತಕದಲ್ಲಿ ನಟ ಪುನೀತ್ ರಾಜ್ಕುಮಾರ್ ಬಗ್ಗೆ ಪಾಠ ಸೇರಿಸಲು ಪುನೀತ್ ಅಭಿಮಾನಿ ದೇವರಾಜ್ ಅರಸು ಒತ್ತಾಯಿಸುತ್ತಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರನ್ನು ಕನ್ನಡ ಪಠ್ಯ ಪುಸ್ತಕಕ್ಕೆ ಸೇರಿಸಬೇಕೆಂದು ಮನವಿ ಮಾಡಿದ್ದಾರೆ. ಟಿ.ನರಸೀಪುರದ ಮುಡುಕುತೊರೆ ಗ್ರಾಮದಲ್ಲಿ ಸಹಿ ಸಂಗ್ರಹಿಸುತ್ತಿರುವ ಪುನೀತ್ ಅಭಿಮಾನಿ ದೇವರಾಜ್ ಅರಸು, ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಬರೆದಿದ್ದಾರೆ.

ಪುನೀತ್ ರಾಜಕುಮಾರ್ ಅಪ್ರತಿಮ ನಟ. ಸರಳತೆ, ಸ್ನೇಹ ಆದರ್ಶ. ಇವರ ಸಾಮಾಜಿಕ ಸೇವೆಗಳು ಮಕ್ಕಳಿಗೆ ಸ್ಫೂರ್ತಿಯಾಗಬೇಕು. ಹೀಗಾಗಿ ಅವರ ಪಾಠ ಪಠ್ಯ ಪುಸ್ತಕದಲ್ಲಿ ಸೇರಿಸಬೇಕೆಂದು ಪುನೀತ್ ಅಭಿಮಾನಿ ಪತ್ರದಲ್ಲಿ ಆಗ್ರಹಿಸಿದ್ದಾರೆ. ಪುನೀತ್ ಬಾಲ್ಯದಲ್ಲಿ ಪ್ರತಿಭೆಯನ್ನು ಗುರುತಿಸಿ 1985ರಲ್ಲಿ ರಾಷ್ಟ್ರಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇವರಿಗೆ ಲಭಿಸಿದ ಪ್ರಶಸ್ತಿ ಕರುನಾಡ ಹಿರಿಮೆ ಮತ್ತಷ್ಟು ಇಮ್ಮಡಿಗೊಳಿಸಿತ್ತು. ಸಾಮಾಜಿಕ ಕಾರ್ಯದಲ್ಲಿ ಇವರ ಪಾತ್ರ ದೊಡ್ಡದು. ಇವರ ಬಾಲಕಲಾ ಸರಸ್ವತಿಯನ್ನು ಪರಿಗಣಿಸಿ ಕನ್ನಡ ಪಠ್ಯ ಪುಸ್ತಕಕ್ಕೆ ಸೇರಿಸಬೇಕೆಂದು ಮನವಿ ಮಾಡಿದರು.

ಪುನೀತ್ ನಮನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಾಳೆ ನಡೆಯುತ್ತಿರುವ ಪುನೀತ್ ನಮನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಸ್ಯಾಂಡಲ್ವುಡ್ನ 142 ಕಲಾವಿದರಿಗೆ ಆಹ್ವಾನ ನೀಡಲಾಗಿದೆ. ಪರಭಾಷೆಯ 40 ಕ್ಕೂ ಹೆಚ್ಚು ಕಲಾವಿದರಿಗೆ ಆಹ್ವಾನ ನೀಡಲಾಗಿದೆ. ಅನಗತ್ಯವಾಗಿ ಅವ್ಯವಸ್ಥೆ ಆದರೆ ಪೊಲೀಸ್ ಇಲಾಖೆ ಹೊಣೆಯಲ್ಲ ಅಂತ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪೋಲೀಸ್ ಇಲಾಖೆ ಖಡಕ್ ಸೂಚನೆ ನೀಡಿದೆ. ದೊಡ್ಮನೆ ಕುಟುಂಬ ಕಾರ್ಯಕ್ರಮದಲ್ಲಿ ಭಾಗಿಯಾಗಲಿದೆ. ವಿವಿಐಪಿ, ವಿಐಪಿ ಪಾಸ್ ಗಳಿರುತ್ತವೆ. ಪಾಸ್ ಇದ್ದವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. 2,000 ಜನರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. ಸಿಎಂ, ಮಾಜಿ ಸಿಎಂಗಳು ಹಾಗು ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ

ಮೈಸೂರು: ಕೋಡಿಯಲ್ಲಿ ಮೀನು ಹಿಡಿಯಲು ಮುಗಿಬಿದ್ದ ಯುವಕರು; ವಿಡಿಯೋ ನೋಡಿ

Viral Video: ಶಾಲೆ ಪುನರಾರಂಭ; ಬ್ಯಾಂಡ್ ಬೀಟ್​ಗೆ ಹೆಜ್ಜೆ ಹಾಕುತ್ತಾ ಶಾಲೆಯ ಒಳಗೆ ಸಾಗಿದ ಮಕ್ಕಳು; ವಿಡಿಯೋ ನೋಡಿ

Published On - 12:32 pm, Mon, 15 November 21

ತಾಜಾ ಸುದ್ದಿ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್