ಅಶ್ವಿನಿ ಕುರಿತ ಅವಹೇಳನಕಾರಿ ಟ್ವೀಟ್; ಕಮಿಷನರ್ಗೆ ದೂರು ನೀಡಿದ ಅಪ್ಪು ಹುಡುಗರು
ಮೊದಲು ಟ್ವೀಟ್ ಮಾಡುವಾಗ Gajapade-ಗಜಪಡೆ (@GAJAPADE6) ಎಂದು ಇತ್ತು. ಈ ಟ್ವೀಟ್ ವೈರಲ್ ಆದ ಬಳಿಕ ಖಾತೆಯನ್ನು ಪ್ರೈವೆಟ್ ಮಾಡಿದ್ದೂ ಅಲ್ಲದೆ, ‘ಸುದೀಪ್ ಅಭಿಮಾನಿ’ ಎಂದು ಬದಲಾಯಿಸಲಾಗಿದೆ. ಈ ಬಗ್ಗೆಯೂ ದೂರಿನಲ್ಲಿ ಯಲ್ಲೇಖಿಸಲಾಗಿದೆ.
ಅಶ್ವಿನಿ ಪುನೀತ್ ರಾಜ್ಕುಮಾರ್ (Ashwini Puneeth Rajkumar) ಅವರು ಇತ್ತೀಚೆಗೆ ಆರ್‌ಸಿಬಿ ಅನ್ಬಾಕ್ಸಿಂಗ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆ ಬಳಿಕ ನಡೆದ ಪಂದ್ಯಗಳಲ್ಲಿ ಆರ್‌ಸಿಬಿ ಸೋಲು ಕಾಣುತ್ತಿದೆ. ನಾಲ್ಕು ಪಂದ್ಯಗಳ ಪೈಕಿ ಮೂರು ಪಂದ್ಯಗಳನ್ನು ಬೆಂಗಳೂರು ತಂಡ ಸೋತಿದೆ. ಇದಕ್ಕೆ ಕೆಲವರು ಅಶ್ವಿನಿ ಪುನೀತ್ ರಾಜ್ಕುಮಾರ್ ಅವರನ್ನು ಹೊಣೆ ಮಾಡಿದ್ದರು. ಅವರ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಲಾಗಿತ್ತು. ಇದನ್ನು ಅಪ್ಪು ಫ್ಯಾನ್ಸ್ ಖಂಡಿಸಿದ್ದಾರೆ. ‘ಅಪ್ಪು ಹುಡುಗರು ಕರ್ನಾಟಕ’ ಕಡೆಯಿಂದ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.
ದೂರಿನಲ್ಲಿ ಏನಿದೆ?
‘ಕಳೆದ ಮಾರ್ಚ್ ತಿಂಗಳ 19ನೇ ತಾರೀಕಿನಂದು ಬೆಂಗಳೂರಿನ ಆರ್‌ಸಿಬಿ ತಂಡದ ಜೆರ್ಸಿ ಉದ್ಘಾಟನೆ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರನ್ನು ಆಹ್ವಾನಿಸಲಾಗಿತ್ತು. ಅದರಂತೆ ಅಶ್ವಿನಿ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡವು ಕೆಲ ಪಂದ್ಯಗಳಲ್ಲಿ ಸೋತ ಕಾರಣ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ನಲ್ಲಿ ‘ಗಜ ಪಡೆ’ ಎಂಬ ನಕಲಿ ಖಾತೆ ಸೃಷ್ಟಿಸಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಆ ಕಾರ್ಯಕ್ರಮಕ್ಕೆ ಬಂದಿದ್ದೇ ಆರ್‌ಸಿಬಿ ತಂಡದ ಸೋಲಿಗೆ ಕಾರಣ ಎಂದು ಅಶ್ವಿನಿ ಅವರನ್ನು ಸೋಲಿನ ಹೊಣೆ ಮಾಡಿದರು. ಜೊತೆ ಅವರನ್ನು ಕೆಟ್ಟದಾಗಿ ನಿಂದಿಸಿ ಪೋಸ್ಟ್ ಮಾಡಲಾಗಿದೆ’ ಎಂದು ದೂರಿನಲ್ಲಿ ವಿವರಿಸಲಾಗಿದೆ.
‘ಇದಾದ ನಂತರ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದಾಗ ಆ ನಕಲಿ ಖಾತೆಯ ಹೆಸರನ್ನು ‘ಸುದೀಪ್ ಅಭಿಮಾನಿ’ ಎಂದು ಬದಲಾಯಿಸಿ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳು ಹಾಗೂ ಸುದೀಪ್ ಅವರ ಅಭಿಮಾನಿಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗುವಂತೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಸೃಷ್ಟಿಸಿರುತ್ತಾನೆ. ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ಸುದೀಪ್ ಅವರಿಗೆ ಅವಮಾನ ಮಾಡಿರುತ್ತಾನೆ. ಈ ಘಟನೆಯಿಂದ ಕರ್ನಾಟಕದ ರಾಜವಂಶದ ಅಭಿಮಾನಿಗಳಿಗೆ ತುಂಬಾ ನೋವು ಉಂಟಾಗಿದೆ. ಹಾಗಾಗಿ ಅವನನ್ನು ಶೀಘ್ರದಲ್ಲಿ ಬಂಧಿಸಿ ಅವನಿಗೆ ತಕ್ಕ ಶಿಕ್ಷೆ ನೀಡಬೇಕಾಗಿ ಕೋರುತ್ತಿದ್ದೇವೆ’ ಎಂದು ದೂರಿನಲ್ಲಿ ಬರೆಯಲಾಗಿದೆ.
ಇದನ್ನೂ ಓದಿ: Exclusive: ಅಶ್ವಿನಿ ಪುನೀತ್ ಕುರಿತ ಪೋಸ್ಟ್ ನೋಡಿ ಬೇಸರಗೊಂಡ ದರ್ಶನ್; ಕೊಟ್ಟ ಸೂಚನೆ ಏನು?
ಖಾತೆಯ ಹೆಸರು ಬದಲಾವಣೆ
ಮೊದಲು ಟ್ವೀಟ್ ಮಾಡುವಾಗ Gajapade-ಗಜಪಡೆ (@GAJAPADE6) ಎಂದು ಇತ್ತು. ಈ ಟ್ವೀಟ್ ವೈರಲ್ ಆದ ಬಳಿಕ ಖಾತೆಯನ್ನು ಪ್ರೈವೆಟ್ ಮಾಡಿದ್ದೂ ಅಲ್ಲದೆ, ‘ಸುದೀಪ್ ಅಭಿಮಾನಿ’ ಎಂದು ಬದಲಾಯಿಸಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ