Puneeth Rajkumar Last Rites: ಪುನೀತ್ ಅಂತ್ಯಕ್ರಿಯೆ ವೇಳೆ ಶಿವಣ್ಣ ಆಕ್ರಂದನ; ಅಭಿಮಾನಿಗಳ ಕರುಳು ಹಿಂಡುವಂತಿತ್ತು ಆ ನೋವಿನ ಕ್ಷಣ
ಪುನೀತ್ ರಾಜ್ಕುಮಾರ್ ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಅಣ್ಣ ಶಿವರಾಜ್ಕುಮಾರ್, ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ ಹಾಗೂ ವಂದಿತಾ ಕಣ್ಣೀರು ಹಾಕುತ್ತಿರುವ ದೃಶ್ಯ ಮನ ಕಲಕುವಂತಿತ್ತು.
ಸಹೋದರ ಪುನೀತ್ ರಾಜ್ಕುಮಾರ್ ಬಗ್ಗೆ ಅಪಾರ ಅಭಿಮಾನ ಇಟ್ಟುಕೊಂಡಿದ್ದರು ನಟ ಶಿವರಾಜ್ಕುಮಾರ್. ಎಲ್ಲ ವೇದಿಕೆಗಳಲ್ಲೂ ಅವರು ಪುನೀತ್ ಬಗ್ಗೆ ಮಾತನಾಡುತ್ತಿದ್ದರು. ಆದರೆ ಅಂಥ ಹೆಮ್ಮೆಯ ತಮ್ಮನನ್ನೇ ಕಳೆದುಕೊಂಡ ಬಳಿಕ ಶಿವಣ್ಣನಿಗೆ ಮುಗಿಲು ಕಳಚಿ ತಲೆ ಮೇಲೆ ಬಿದ್ದಂತಾಗಿದೆ. ಸಹೋದರನ ಅಂತ್ಯಕ್ರಿಯೆ ವೇಳೆ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಶಿವರಾಜ್ಕುಮಾರ್ ಅವರನ್ನು ಈ ರೀತಿ ನೋಡುವಾಗ ಅಭಿಮಾನಿಗಳ ಕರುಳು ಹಿಂಡುತ್ತದೆ. ಆದರೆ ವಿಧಿಗೆ ಯಾವುದೇ ಕರುಣೆ ಇಲ್ಲ. ಎಲ್ಲರ ಪ್ರೀತಿಯ ನಟನನ್ನು ಜವರಾಯ ಹೊತ್ತೊಯ್ದಿದ್ದಾನೆ.
ಡಾ. ರಾಜ್ಕುಮಾರ್ ಸಮಾಧಿಯಿಂದ 125 ಅಡಿ ಅಂತರ ಹಾಗೂ ಪಾರ್ವತಮ್ಮ ರಾಜ್ಕುಮಾರ್ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್ ರಾಜ್ಕುಮಾರ್ ಅವರ ಅಂತ್ಯಕ್ರಿಯೆ ಮಾಡಲಾಗಿದೆ. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪುನೀತ್ ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ ಹಾಗೂ ವಂದಿತಾ ಕಣ್ಣೀರು ಹಾಕುತ್ತಿರುವ ದೃಶ್ಯ ಮನ ಕಲಕುವಂತಿತ್ತು. ಚಿತ್ರರಂಗ ಹಾಗೂ ರಾಜಕೀಯದ ಅನೇಕ ಗಣ್ಯರು ಭಾಗಿ ಆಗಿದ್ದರು. ಕಂಠೀರವ ಸ್ಟುಡಿಯೋ ಆವರಣದ ಒಳಗೆ ಕುಟುಂಬದವರಿಗೆ ಮತ್ತು ಗಣ್ಯರಿಗೆ ಮಾತ್ರ ಪ್ರವೇಶ ನೀಡಲಾಗಿತ್ತು.
ಇದನ್ನೂ ಓದಿ:
Puneeth Rajkumar: ಶಿವಣ್ಣನ ಎದುರು ಪುನೀತ್ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು

ವಿಐಪಿಗಳೆಂದು ಹೇಳಿಕೊಂಡು ಯಾರ್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ

ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ

ಶಿವರಾಜ್ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು

ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
