ಪುನೀತ್​ ನಟನೆಯ ‘ಜೇಮ್ಸ್​’ ಶೂಟಿಂಗ್​ ಮುಕ್ತಾಯ; ರಿಲೀಸ್​ ಡೇಟ್​ ತಿಳಿಯಲು ಕಾದಿರುವ ಅಭಿಮಾನಿಗಳು

ಬಹುನಿರೀಕ್ಷಿತ ಜೇಮ್ಸ್​ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ. ಪುನೀತ್​ ರಾಜ್​ಕುಮಾರ್​ ನಟನೆಯ ಈ ಚಿತ್ರದ ಬಗ್ಗೆ ಫ್ಯಾನ್ಸ್​ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಪುನೀತ್​ ನಟನೆಯ ‘ಜೇಮ್ಸ್​’ ಶೂಟಿಂಗ್​ ಮುಕ್ತಾಯ; ರಿಲೀಸ್​ ಡೇಟ್​ ತಿಳಿಯಲು ಕಾದಿರುವ ಅಭಿಮಾನಿಗಳು
| Updated By: ಮದನ್​ ಕುಮಾರ್​

Updated on:Jan 22, 2022 | 10:06 AM

‘ಜೇಮ್ಸ್​’ ಸಿನಿಮಾ (James Kannada Movie) ಬಗ್ಗೆ ನಿರೀಕ್ಷೆ ಮೂಡಲು ಅನೇಕ ಕಾರಣಗಳಿವೆ. ಇದೇ ಮೊದಲ ಬಾರಿಗೆ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರಿಗೆ ಚೇತನ್​ ಕುಮಾರ್​ ಆ್ಯಕ್ಷನ್​-ಕಟ್​ ಹೇಳಿದ ಚಿತ್ರವಿದು. ಪುನೀತ್​ ನಿಧನಕ್ಕೂ ಮುನ್ನ ಬಿಡುಗಡೆಯಾಗಿದ್ದ ಪೋಸ್ಟರ್​ಗಳಿಂದ ಭಾರಿ ಹೈಟ್​ ಸೃಷ್ಟಿ ಆಗಿತ್ತು. ಅದ್ದೂರಿ ಆ್ಯಕ್ಷನ್​ ಸಿನಿಮಾಗಳನ್ನು ಕಟ್ಟಿಕೊಡುವಲ್ಲಿ ಚೇತನ್​ ಕುಮಾರ್​ ಫೇಮಸ್​. ಈಗ ಈ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ. ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ದೃಶ್ಯಗಳ ಶೂಟಿಂಗ್​ ಈ ಮೊದಲೇ ಮುಕ್ತಾಯ ಆಗಿತ್ತು. ಅವರ ಪಾತ್ರಕ್ಕೆ ಶಿವಣ್ಣ ಧ್ವನಿ ನೀಡುವ ಸಾಧ್ಯತೆ ದಟ್ಟವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ವರ್ಷ ಪುನೀತ್​ ರಾಜ್​ಕುಮಾರ್​ ಹುಟ್ಟುಹಬ್ಬದ ದಿನವೇ (ಮಾ.17) ‘ಜೇಮ್ಸ್​’ ರಿಲೀಸ್​ ಆಗುವ ಸಾಧ್ಯತೆ ಇದೆ. ಆ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಬರಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ಶಿವರಾಜ್​ಕುಮಾರ್​ (Shivarajkumar) ಹಾಗೂ ರಾಘವೇಂದ್ರ ರಾಜ್​ಕುಮಾರ್​ ಕೂಡ ನಟಿಸಿದ್ದಾರೆ ಎಂಬುದು ವಿಶೇಷ.

ಇದನ್ನೂ ಓದಿ:

‘ಪುನೀತ್​ ಇಲ್ಲದೇ ‘ಜೇಮ್ಸ್​’ ಶೂಟಿಂಗ್​ ಮಾಡೋದು ಕಷ್ಟ ಆಗ್ತಿದೆ’: ನಟ ಅವಿನಾಶ್​ ಭಾವುಕ ನುಡಿ

ಸಂಕ್ರಾಂತಿ ಹಬ್ಬದಲ್ಲಿ ಪುನೀತ್​ ರಾಜ್​ಕುಮಾರ್​ ನೆನಪು; ಫ್ಯಾನ್ಸ್​ ಜೊತೆ ಹೊಸ ಸುದ್ದಿ ಹಂಚಿಕೊಂಡ ಶಿವಣ್ಣ

Published On - 9:59 am, Sat, 22 January 22

Follow us